Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಳ್ಯ: ಕಾಂಗ್ರೆಸ್ ಟಿಕೆಟ್ ಎಚ್‌.ಎಂ...

ಸುಳ್ಯ: ಕಾಂಗ್ರೆಸ್ ಟಿಕೆಟ್ ಎಚ್‌.ಎಂ ನಂದಕುಮಾರ್‌ಗೆ ನೀಡುವಂತೆ ಆಗ್ರಹಿಸಿ ಬೆಂಬಲಿಗರಿಂದ ಧರಣಿ

29 March 2023 3:17 PM IST
share
ಸುಳ್ಯ: ಕಾಂಗ್ರೆಸ್ ಟಿಕೆಟ್ ಎಚ್‌.ಎಂ ನಂದಕುಮಾರ್‌ಗೆ ನೀಡುವಂತೆ ಆಗ್ರಹಿಸಿ ಬೆಂಬಲಿಗರಿಂದ ಧರಣಿ

ಮಂಗಳೂರು,ಮಾ. 29: ಮುಂಬರುವ ವಿಧಾನ ಸಭಾ ಚುನಾವಣೆಗೆ ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಹೈ ಕಮಾಂಡ್ ಘೋಷಿಸಿರುವ ಅಭ್ಯರ್ಥಿ ಜಿ. ಕೃಷ್ಣಪ್ಪ ರನ್ನು ಬದಲಿಸಿ ಕೆಪಿಸಿಸಿ ಸದಸ್ಯ ಎಚ್‌.ಎಂ ನಂದಕುಮಾರ್ ಗೆ ಟಿಕೆಟ್ ನೀಡುವಂತೆ ಸುಳ್ಯದ ಕಾಂಗ್ರೆಸ್ ಕಾರ್ಯಕರ್ತರು ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಬುಧವಾರ ಧರಣಿ ನಡೆಸಿದ್ದಾರೆ.

ಸುಮಾರು 10ಕ್ಕೂ ಅಧಿಕ ಬಸ್‌ಗಳಲ್ಲಿ ಆಗಮಿಸಿದ್ದ ಸುಳ್ಯ ಮತ್ತು ಕಡಬ ಬ್ಲಾಕ್‌ ನ ಬೆಂಬಲಿಗರು ಜಿ.ಕೃಷ್ಣಪ್ಪ ಅವರಿಗೆ ಟಿಕೆಟ್ ನೀಡಿದ್ದಕ್ಕೆ ಪ್ರತಿಭಟಿಸಿ, ಆಕ್ರೋಶ ವ್ಯಕ್ತಪಡಿಸಿದರು.

ನಂದಕುಮಾರ್ ಕುಮಾರ್ ಅವರಿಗೆ ಬಿ’ ಫಾರಂ ಕೊಡಿ ಸುಳ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಿ ಕೊಡುತ್ತೇವೆ. ನಾಯಕರ ಅಭ್ಯರ್ಥಿ ನಮಗೆ ಬೇಡ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಿ. ಹೈಕಮಾಂಡ್ ತೀರ್ಮಾನ ಪರಾಮರ್ಶೆ ಮಾಡಿ ನಂದಕುಮಾರ್‌ಗೆ ಟಿಕೆಟ್ ನೀಡಿ ಎಂಬ ಫಲಕಗಳನ್ನು ಹಿಡಿದು ತಮ್ಮ ಮನವಿ ಸ್ವೀಕರಿಸಲು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಆಗಮಿಸುವಂತೆ ಪಟ್ಟು ಹಿಡಿದು ಧರಣಿ ಕುಳಿತರು.

ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಕಳೆದ 35 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಶಾಸಕರು ಇಲ್ಲದ ಕಾರಣದಿಂದಾಗಿ ಪಕ್ಷದ ಕಾರ್ಯಕರ್ತರು ತೊಂದರೆಗೊಳಗಾಗಿದ್ದಾರೆ. ಎಚ್. ಎಂ.ನಂದಕುಮಾರ್ ಸುಳ್ಯ ಕ್ಷೇತ್ರದ ಪಕ್ಷದ ಉಸ್ತುವಾರಿಯಾದ ಬಳಿಕ ಕ್ಷೇತ್ರದ ಕಾರ್ಯಕರ್ತರನ್ನು ಒಗ್ಗೂಡಿಸಿ ಕ್ಷೇತ್ರದಾದ್ಯಂತ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕೋವಿಡ್-19 ಸಮಯದಲ್ಲಿ ಕ್ಷೇತ್ರದ ಎಲ್ಲ ಕಡೆ ಆಹಾರ ಕಿಟ್‌ಗಳನ್ನು ವಿತರಣೆ ಮಾಡಿರುತ್ತಾರೆ. ಬಡಜನರ, ವಿಕಲಚೇತನರ ಪಾಲಿನ ಆಶಾಕಿರಣರಾಗಿರುತ್ತಾರೆ. ಧಾರ್ಮಿಕ ಕಾರ್ಯಕ್ರಮ, ಕ್ರೀಡಾ ಕಾರ್ಯಕ್ರಮಗಳಿಗೆ ಸಹಕಾರ ನೀಡಿ ಪಕ್ಷದ ಕಾರ್ಯಕರ್ತರ ಅಪೇಕ್ಷೆಯಂತೆ ಕೂಡಲೇ ಸ್ಪಂದಿಸಿ ಕಾರ್ಯಕರ್ತರ ಹುಮ್ಮಸ್ಸು ಹೆಚ್ಚಿಸಿದ್ದಾರೆ. ಕ್ಷೇತ್ರದಾದ್ಯಂತ ಕಳೆದ 4 ವರ್ಷಗಳಿಂದ ಪ್ರತಿ ಹಳ್ಳಿ ಹಳ್ಳಿಗಳಿಗೆ ತೆರಳಿ ಜನಸೇವೆಗೈಯುತ್ತಿರುವ ಅವರು ಜನಮೆಚ್ಚುಗೆ ಗಳಿಸಿದ್ದಾರೆ. ಪಕ್ಷಾತೀತವಾಗಿ ಅತೀ ಹೆಚ್ಚು ಜನ ಬೆಂಬಲ ಹೊಂದಿದ್ದಾರೆ. ಅವರಿಗೆ ಪಕ್ಷದ ಟಿಕೆಟ್ ನೀಡಬೇಕು. ಈಗಾಗಲೇ ಹೈಕಮಾಂಡ್ ಕೃಷ್ಣಪ್ಪರನ್ನು ಅಭ್ಯರ್ಥಿಯಾಗಿ ಗೋಷಿಸಿದ್ದು, ಪಕ್ಷದ ನಿಷ್ಠಾವಂತ ಸಾವಿರಾರು ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ನೋವುಂಟು ಮಾಡಿದೆ ಎಂದು ಬೆಂಬಲಿಗರು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ ಬಳ್ಳೇರಿ, ಗೋಕುಲ್‌ದಾಸ್ ಸುಳ್ಯ, ಉಷಾ ಅಂಚನ್ ಮಾತನಾಡಿದರು.

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಕಾರ್ಯಕರ್ತರ ಯಾವುದೇ ಅಭಿಪ್ರ್ರಾಯ ಸಂಗ್ರಹಿಸದೆ ನಾಯಕರುಗಳ ಮಾತಿನಂತೆ ಸುಳ್ಯದಲ್ಲಿ ಯಾವೊಬ್ಬ ಕಾರ್ಯಕರ್ತರಿಗೂ ಪರಿಚಯವಿಲ್ಲದ, ಮತದಾರರಿಗೂ ಒಳವಿಲ್ಲದ ಜಿ ಕೃಷ್ಣಪ್ಪ ರವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ ಎಂದು ಆರೋಪಿಸಿರುವ ಅವರು ಇದರಿಂದಾಗಿ ತಮಗೆ ನೋವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ.

ಪ್ರತಿಭಟನೆಯ ನೇತೃತ್ವವನ್ನು ಕಾಂಗ್ರೆಸ್ ನಾಯಕರಾದ ಶಶಿಧರ್ ಎಂ.ಜೆ, ಸಚಿನ್‌ರಾಜ್ ಶೆಟ್ಟಿ, ಅನಿತಾ ರೈ ಬೆಳ್ಳಾರೆ, ಮುತ್ತಪ್ಪ ಪೂಜಾರಿ, ಸತ್ಯಕುಮಾರ್ ಆವಂಜೆ, ಚೇತನ್ ಕಜೆಗದ್ದೆ, ಗಣೇಶ್ ಕೈಕುರೆ, ಪ್ರವೀಣ್ ಕೆಡೆಂಜಿ , ಸುಧೀರ್ ದೇವಾಡಿಗ ವಹಿಸಿದ್ದರು.

ಭರೆವಸೆಯ ನಂತರ ಧರಣಿ ಹಿಂದಕ್ಕೆ: ಸುಳ್ಯ ಕಾಂಗ್ರೆಸ್‌ ನಂದಕುಮಾರ್ ಅವರ ಬೆಂಬಲಿಗರು ಸುಮಾರು ಎರಡೂವರೆ ಗಂಟೆಗಳ ಕಾಲ ಧರಣಿ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಸಂತೋಷ್ ಕುಮಾರ್ ಶೆಟ್ಟಿ, ಸದಾಶಿವ ಉಳ್ಳಾಲ ಮತ್ತು ನಝೀರ್ ಬಜಾಲ್ ಅವರು ಧರಣಿ ನಿರತರೊಂದಿಗೆ ಮಾತುಕತೆ ನಡೆಸಿದರು.
ಬೆಂಗಳೂರಿನಲ್ಲಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ರನ್ನು ಸಂಪರ್ಕಿಸಿ ಅವರು ನೀಡಿದ ಭರವಸೆಯಂತೆ ಧರಣಿಯನ್ನು ಹಿಂದಕ್ಕೆ ಪಡೆದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಅವರಲ್ಲಿ ಈ ಬಗ್ಗೆ ಮಾತನಾಡುವುದಾಗಿ ಹರೀಶ್ ಕುಮಾರ್ ಭರವಸೆ ನೀಡಿದ್ದಾರೆ. ಗುರುವಾರ ಸಂಜೆಯೊಳಗೆ ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಗಡುವು ವಿಧಿಸಲಾಗಿದ್ದು, ಪಕ್ಷದ ನಾಯಕರು ಸ್ಪಂದಿಸದಿದ್ದರೆ ಮುಂದಿನ ನಿಲುವಿನ ಬಗ್ಗೆ ಯೋಚಿಸುವುದಾಗಿ ಸುಳ್ಯ ಕಾಂಗ್ರೆಸ್‌ನ ನಂದಕುಮಾರ್ ಬೆಂಬಲಿಗರು ತಿಳಿಸಿದ್ದಾರೆ.

share
Next Story
X