ರಾಜ್ಯದಲ್ಲಿ ಹೊಸ ಪ್ರಗತಿಪರ ಭವಿಷ್ಯದ ಅಲೆ ಶುರುವಾಗಿದೆ: ಚುನಾವಣೆ ಘೋಷಣೆ ಬೆನ್ನಲ್ಲೇ ಡಿಕೆಶಿ ಟ್ವೀಟ್

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಬಹುನಿರೀಕ್ಷಿತ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸುತ್ತಿದ್ದಂತೆ, ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಂಡಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಟ್ವೀಟ್ ಮಾಡಿ ಚುನಾವಣೆಯನ್ನು ಉತ್ಸಾಹದಿಂದ ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.
''ಈಗ ಕರ್ನಾಟಕದಲ್ಲಿ ಹೊಸ ಪ್ರಗತಿಪರ ಭವಿಷ್ಯದ ಅಲೆ ಶುರುವಾಗಿದ್ದು, ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ಚುನಾವಣೆಯನ್ನು ಉತ್ಸಾಹದಿಂದ ಸ್ವಾಗತಿಸುತ್ತೇವೆ, ಈ ಮೂಲಕ ಕಾಂಗ್ರೆಸ್ ಪಕ್ಷ ಜನರಿಗೆ ಅಭಿವೃದ್ಧಿ ಮತ್ತು ಪಾರದರ್ಶಕತೆಯನ್ನು ಮರಳಿ ನೀಡಲು ಸಜ್ಜಾಗಿದೆ'' ಎಂದು ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಗ ಕರ್ನಾಟಕದಲ್ಲಿ ಹೊಸ ಪ್ರಗತಿಪರ ಭವಿಷ್ಯದ ಅಲೆ ಶುರುವಾಗಿದ್ದು, ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ಚುನಾವಣೆಯನ್ನು ಉತ್ಸಾಹದಿಂದ ಸ್ವಾಗತಿಸುತ್ತೇವೆ, ಈ ಮೂಲಕ ಕಾಂಗ್ರೆಸ್ ಪಕ್ಷ ಜನರಿಗೆ ಅಭಿವೃದ್ಧಿ ಮತ್ತು ಪಾರದರ್ಶಕತೆಯನ್ನು ಮರಳಿ ನೀಡಲು ಸಜ್ಜಾಗಿದೆ.#KarnatakaElections2023
— DK Shivakumar (@DKShivakumar) March 29, 2023