ಉಳ್ಳಾಲ: ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಉಳ್ಳಾಲ,ಮಾ.29: ಹಕ್ಕು ಪತ್ರ ಅರ್ಹ ಫಲಾನುಭವಿಗಳಿಗೆ ನೀಡಬೇಕಾದುದು ನಮ್ಮ ಜವಾಬ್ದಾರಿಯಾಗಿದ್ದು, ಕೆಲವರಿಗೆ ನಿವೇಶನಗಳಿರುವುದಿಲ್ಲ. ಮನೆ ಕಟ್ಟಲು ಸಿಮೆಂಟ್ ಕೊಂಡುಕೊಳ್ಳಲು ಅರ್ಹತೆ ಇಲ್ಲದ ಕುಟುಂಬಗಳಿದೆ. ಅವರೆನ್ನೆಲ್ಲ ಗುರುತಿಸಿ ಮುಂದಿನ ದಿನಗಳಲ್ಲಿ ನಿವೇಶನ ಸಹಿತ ಮನೆ ಒದಗಿಸಿ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕ ಯು.ಟಿ ಖಾದರ್ ಹೇಳಿದರು.
ಅವರು ಯುನಿಟ್ ಹಾಲ್ ನಲ್ಲಿ ನಡೆದ ಉಳ್ಳಾಲ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಹಕ್ಕು ಪತ್ರ ವಿತರಣೆ ಮಾಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಳ್ಳಾಲ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಯಿತು.
ಈ ಕಾರ್ಯಕ್ರಮ ದಲ್ಲಿ ತಾ.ಪಂ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು, ಕೊಣಾಜೆ ಗ್ರಾ.ಪಂ.ಅಧ್ಯಕ್ಷ ಚಂಚಲಾಕ್ಷಿ, ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಲ್ಫ್ರೆಡಿ ಸೋಜ ಹಾಗೂ ವಿವಿಧ ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.
Next Story