Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರಿ ಶಾಲೆಗಳಲ್ಲಿ 10 ಲಕ್ಷ ಬೋಧಕ...

ಸರಕಾರಿ ಶಾಲೆಗಳಲ್ಲಿ 10 ಲಕ್ಷ ಬೋಧಕ ಹುದ್ದೆಗಳು ಖಾಲಿ: ಕಾಲಮಿತಿಯಲ್ಲಿ ಭರ್ತಿಗೆ ಸಂಸದೀಯ ಸಮಿತಿಯ ಆಗ್ರಹ

29 March 2023 6:15 PM IST
share
ಸರಕಾರಿ ಶಾಲೆಗಳಲ್ಲಿ 10 ಲಕ್ಷ ಬೋಧಕ ಹುದ್ದೆಗಳು ಖಾಲಿ: ಕಾಲಮಿತಿಯಲ್ಲಿ ಭರ್ತಿಗೆ ಸಂಸದೀಯ ಸಮಿತಿಯ ಆಗ್ರಹ

ಹೊಸದಿಲ್ಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯ ಸಕಾಲಿಕ ಅನುಷ್ಠಾನಕ್ಕಾಗಿ ಸರಕಾರಿ ಶಾಲೆಗಳಲ್ಲಿ ಖಾಲಿಯಿರುವ ಎಲ್ಲ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವಂತೆ ಶಿಕ್ಷಣ ಕುರಿತ ಸಂಸದೀಯ ಸ್ಥಾಯಿ ಮಂಡಳಿಯು ಶಿಕ್ಷಣ ಸಚಿವಾಲಯಕ್ಕೆ ಸೂಚಿಸಿದೆ.

ಶಿಕ್ಷಣ ಇಲಾಖೆಯು ಒದಗಿಸಿರುವ ಮಾಹಿತಿಯಂತೆ 2022, ಡಿ.31ಕ್ಕೆ ಇದ್ದಂತೆ ದೇಶಾದ್ಯಂತ ಸರಕಾರಿ ಪ್ರಾಥಮಿಕ,ಮಾಧ್ಯಮಿಕ ಮತ್ತು ಉನ್ನತ ಮಾಧ್ಯಮಿಕ ಶಾಲೆಗಳಲ್ಲಿ ಸುಮಾರು 10 ಲಕ್ಷ ಬೋಧಕ ಹುದ್ದೆಗಳು ಖಾಲಿಯಿವೆ. ರಾಜ್ಯಮಟ್ಟದಲ್ಲಿ ಮಂಜೂರಾದ 62,71,380 ಹುದ್ದೆಗಳ ಪೈಕಿ 9,85,565 ಅಥವಾ ಶೇ.15.7ರಷ್ಟು ಖಾಲಿಯಿವೆ.

ಮಂಗಳವಾರ ಬಹಿರಂಗಗೊಳಿಸಲಾಗಿರುವ ಸಂಸದೀಯ ಸಮಿತಿಯ ವರದಿಯು ಕಾಲಮಿತಿಯಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡುವಂತೆ ಶಿಫಾರಸು ಮಾಡಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯು 2023-24ನೇ ವಿತ್ತವರ್ಷಕ್ಕಾಗಿ ಸಲ್ಲಿಸಿದ್ದ ಅನುದಾನಗಳ ಕೋರಿಕೆಯನ್ನು ಪರಿಶೀಲಿಸಿದ ಬಳಿಕ ಬಿಜೆಪಿ ಸಂಸದ ವಿಜಯ ಠಾಕೂರ್ ನೇತೃತ್ವದ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದೆ.

ಸಮಿತಿಗೆ ಒದಗಿಸಲಾಗಿರುವ ಮಾಹಿತಿಯಂತೆ ಪ್ರಾಥಮಿಕ ಶಾಲೆಗಳಲ್ಲಿ 7,47,565,ಮಾಧ್ಯಮಿಕ ಶಾಲೆಗಳಲ್ಲಿ 1,46,334 ಮತ್ತು ಉನ್ನತ ಮಾಧ್ಯಮಿಕ ಶಾಲೆಗಳಲ್ಲಿ 92,666 ಹುದ್ದೆಗಳು ಖಾಲಿಯಿವೆ.

ಎನ್‌ಇಪಿ, 2020ರಲ್ಲಿ ಹೇಳಿರುವಂತೆ 30:1 ವಿದ್ಯಾರ್ಥಿ-ಶಿಕ್ಷಕ ಅನುಪಾತವನ್ನು ಸಾಧಿಸಲು ಕಾಲಮಿತಿಯಲ್ಲಿ ಬೋಧಕ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಇಲಾಖೆಯು ರಾಜ್ಯ ಸರಕಾರಗಳನ್ನು ಪ್ರೋತ್ಸಾಹಿಸಬೇಕು ಎಂದು ಶಿಫಾರಸು ಮಾಡಿರುವುದಾಗಿ ಸಂಸದೀಯ ಸ್ಥಾಯಿ ಸಮಿತಿಯು ಹೇಳಿಕೆಯಲ್ಲಿ ತಿಳಿಸಿದೆ.

ನೇಮಕಾತಿಯಲ್ಲಿ ಪಾರದರ್ಶಕತೆಯ ಕೊರತೆ:

ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯ ಕೊರತೆಯಿದೆ ಮತ್ತು ತೊಡಕಿನದಾಗಿದೆ ಎಂದು ಬೆಟ್ಟು ಮಾಡಿರುವ ಸಮಿತಿಯು,ಕೆಲವು ಶಿಕ್ಷಣ ಸಮಿತಿಗಳು ಸೂಚಿಸಿರುವಂತೆ ರಾಜ್ಯಮಟ್ಟದಲ್ಲಿ ಸ್ವಾಯತ್ತ ಶಿಕ್ಷಕರ ನೇಮಕಾತಿ ಮಂಡಳಿಯನ್ನು ರಚಿಸುವಂತೆ ಶಿಫಾರಸು ಮಾಡಿದೆ.
ಸಾಂಕ್ರಾಮಿಕದ ಬಳಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಇಲಾಖೆಯ ಪ್ರಗತಿಯನ್ನು ಒಪ್ಪಿಕೊಂಡಿರುವ ಸಮಿತಿಯು,ಆರ್ಥಿಕವಾಗಿ ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಮೀನ್ಸ್-ಕಮ್-ಮೆರಿಟ್ ವಿದ್ಯಾರ್ಥಿ ವೇತನ ಯೋಜನೆಯಡಿ ಹಣಕಾಸಿನ ಸದುಪಯೋಗವನ್ನು ಖಚಿತಪಡಿಸುವಂತೆ ಸೂಚಿಸಿದೆ.

ಕಳೆದ ವರ್ಷ ಪರಿಚಯಿಸಲಾಗಿರುವ ಕೇಂದ್ರ ಸರಕಾರದ ‘ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ’ಯೋಜನೆ ಕುರಿತಂತೆ ಸಮಿತಿಯು,ಇಲಾಖೆಯು ಇದಕ್ಕೆ ಇನ್ನೂ ಸಹಿ ಹಾಕದಿರುವ ಎಂಟು ರಾಜ್ಯಗಳ ಜೊತೆ ವಿಷಯವನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕು ಎಂದು ಸೂಚಿಸಿದೆ. ಬಿಹಾರ, ದಿಲ್ಲಿ, ಹಿಮಾಚಲ ಪ್ರದೇಶ, ಜಾರ್ಖಂಡ್, ಕೇರಳ, ಒಡಿಶಾ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಈ ರಾಜ್ಯಗಳಾಗಿವೆ. ಯೋಜನೆಯಡಿ ಐದು ವರ್ಷಗಳಲ್ಲಿ 27,360 ಕೋಟಿ ರೂ.ಗಳ ವೆಚ್ಚದಲ್ಲಿ 14,500 ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಈ ವೆಚ್ಚದಲ್ಲಿ 18,128 ಕೋಟಿ ರೂ.ಗಳನ್ನು ಕೇಂದ್ರ ಸರಕಾರವು ಭರಿಸಲಿದೆ.

share
Next Story
X