Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನಧಿಕೃತವಾಗಿ ನೌಕರ ಗೈರು | ಶಿಸ್ತು ಕ್ರಮ...

ಅನಧಿಕೃತವಾಗಿ ನೌಕರ ಗೈರು | ಶಿಸ್ತು ಕ್ರಮ ಜಾರಿ ಮಾಡದಿದ್ದಾಗ ವೇತನ ಪಾವತಿಸಬೇಕು: ಹೈಕೋರ್ಟ್

29 March 2023 8:45 PM IST
share
ಅನಧಿಕೃತವಾಗಿ ನೌಕರ ಗೈರು | ಶಿಸ್ತು ಕ್ರಮ ಜಾರಿ ಮಾಡದಿದ್ದಾಗ ವೇತನ ಪಾವತಿಸಬೇಕು: ಹೈಕೋರ್ಟ್

ಬೆಂಗಳೂರು, ಮಾ.29: ಒಂದು ವರ್ಷ ಕಾಲ ಅನಧಿಕೃತವಾಗಿ ಗೈರಾಗಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಶಾಲೆಯೊಂದರ ದ್ವಿತೀಯ ದರ್ಜೆ ನೌಕರ(ಎಸ್‍ಡಿಎ)ನ ವಿರುದ್ಧ ಯಾವುದೇ ರೀತಿ ಶಿಸ್ತು ಕ್ರಮಕ್ಕೆ ಮುಂದಾಗದಿರುವುದನ್ನು ಪರಿಗಣಿಸಿರುವ ಹೈಕೋರ್ಟ್, ನೌಕರ ಗೈರಾಗಿದ್ದ ಅವಧಿಗೆ ವೇತನ ಪಾವತಿಸುವಂತೆ ಶಾಲಾ ಮುಖ್ಯೋಪಾಧ್ಯಾಯರಿಗೆ ಆದೇಶಿಸಿದೆ.

ಅನಧಿಕೃತವಾಗಿ ರಜೆ ಹಾಕಿದ್ದರೂ ಎಸ್‍ಡಿಎ ಉದ್ಯೊಗಿ ಎನ್.ಎಸ್.ಕಾಂತರಾಜುಗೆ ವೇತನ ಪಾವತಿಸಲು ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ಸೂಚನೆ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ನಗರದ ದೊಡ್ಡಬೊಮ್ಮಸಂದ್ರದ ಶ್ರೀ ರಾಘವೇಂದ್ರ ಆಶ್ರಮ ಶಾಲೆಯ ಮುಖ್ಯೋಪಾಧ್ಯಾಯರು ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ಪೀಠ, ಎಸ್‍ಡಿಎಗೆ ವೇತನ ನೀಡುವಂತೆ ಸೂಚನೆ ನೀಡಿ ಆದೇಶಿಸಿದೆ.

ನಗರದ ಭಗಿನಿ ನಿವೇದಿತಾ ಹೈಸ್ಕೂಲ್‍ನಲ್ಲಿ ಎಸ್‍ಡಿಎ ನೌಕರನಾಗಿದ್ದ ಕಾಂತರಾಜು ಅನ್ನು ಶಿಕ್ಷಣ ಇಲಾಖೆಯು 2009ರಲ್ಲಿ ಶ್ರೀ ರಾಘವೇಂದ್ರ ಆಶ್ರಮ ಶಾಲೆಗೆ ವರ್ಗಾಯಿಸಿತ್ತು. ಆ ಶಾಲೆಯಲ್ಲಿ 2009ರ ಫೆ.2ರಂದು ಕರ್ತವ್ಯಕ್ಕೆ ಹಾಜರಾಗಿದ್ದ ಕಾಂತರಾಜು, ನಂತರದ ಒಂದು ವರ್ಷ ಕಾಲ (2009ರ ಫೆ.2ರಿಂದ 2020ರ ಫೆ.15ರವರೆಗೆ) ಗೈರಾಗಿದ್ದರು. ಬಳಿಕ ಉದ್ಯೋಗಕ್ಕೆ ಮರಳಿದ್ದರು.

2014ರ ಮಾ.14 ಮತ್ತು ಸೆ.30ರಂದು ಬೆಂಗಳೂರು ಉತ್ತರ ತಾಲೂಕಿನ ಡಿಡಿಪಿಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದ ಕಾಂತರಾಜು, 2009ರ ಫೆ.2ರಿಂದ 2020ರ ಫೆ.15ರವರೆಗೆ ನಾನು ರಜೆಯ ಮೇಲೆ ತೆರಳಿದ್ದೆ. ಆದರೆ, ನಾನು ಅನಧಿಕೃತವಾಗಿ ಹಾಜರಾಗಿದ್ದೇನೆ ಎಂದು ತಿಳಿಸಿ ಶಾಲೆ ನನಗೆ ವೇತನ ನೀಡಿಲ್ಲ. ಆದ್ದರಿಂದ ವೇತನ ಮತ್ತು ಭತ್ಯೆ ಪಾವತಿಸಲು ಆದೇಶಿಸುವಂತೆ ಕೋರಿದ್ದರು. 

ಈ ಮನವಿ ಪತ್ರವನ್ನು ಪರಿಗಣಿಸದಕ್ಕೆ 2015ರಲ್ಲಿ ಹೈಕೋರ್ಟ್‍ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ, ಕಾಂತರಾಜು ನಿರ್ದಿಷ್ಟ ಸಮಯದಲ್ಲಿ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರಾಗಿದ್ದರೆ ರಾಘವೇಂದ್ರ ಆಶ್ರಯದ ಶಾಲಾ ಮುಖ್ಯೋಪಾಧ್ಯಾಯರು ಶಿಸ್ತು ಕ್ರಮ ಜರುಗಿಸಬೇಕಿತ್ತು. ಆದರೆ, ಈವರೆಗೂ ಅದನ್ನು ನಿರ್ವಹಿಸಿಲ್ಲ. ಮುಖ್ಯಪಾಧ್ಯಾಯರು ಕಾಂತರಾಜು ಗೈರಾಗಿದ್ದ ದಿನಗಳ ಸಂಬಂಧ ಕೇವಲ ಎರಡು ತಿಂಗಳಿಗಷ್ಟೇ ಬಿಲ್ ನೀಡಿದ್ದಾರೆ. ಉಳಿದ ದಿನಗಳಿಗೆ ಬಿಲ್ ಸೃಜನೆ ಮತ್ತು ರಜೆ ಮಂಜೂರಾತಿ ವಿಚಾರದಲ್ಲಿ ಏನು ಮಾಡಬೇಕೆಂದು ಶಿಕ್ಷಣಾಧಿಕಾರಿ ಬಳಿ ಕೇಳಿಲ್ಲ. ಇದರಿಂದ ಮುಖ್ಯೋಪಾಧ್ಯಾಯರ ಕಡೆಯಿಂದ ಲೋಪ ಉಂಟಾಗಿದೆ. ಆದುದರಿಂದ, ಶೇ.8ರಷ್ಟು ಬಡ್ಡಿದರದಲ್ಲಿ ಕಾಂತರಾಜುಗೆ ವೇತನ ಪಾವತಿಸುವಂತೆ ಮುಖ್ಯಪಾಧ್ಯಾಯರಿಗೆ 2020ರ ಡಿ.2ರಂದು ಆದೇಶಿಸಿತ್ತು.

ಇದನ್ನು ಪ್ರಶ್ನಿಸಿ ಮುಖ್ಯೋಪಾಧ್ಯಾಯರು ಮೇಲ್ಮನವಿ ಸಲ್ಲಿಸಿದ್ದರು. ಅದನ್ನು ವಜಾಗೊಳಿಸಿರುವ ವಿಭಾಗೀಯ ಪೀಠ, ಕಾಂತರಾಜು ಅನಧಿಕೃತವಾಗಿ ಗೈರಾಗಿದ್ದ ಅವಧಿಗೆ ಶಿಸ್ತುಕ್ರಮ ಜರುಗಿಸಬೇಕಿತ್ತು. ಕ್ರಮ ಜರುಗಿಸದ ಹಿನ್ನೆಲೆಯಲ್ಲಿ ಅನಧಿಕೃತವಾಗಿ ಗೈರಾಗಿದ್ದಾನೆ ಎಂದು ತೀರ್ಮಾನಿಸಲಾಗದು. ಉದ್ಯೋಗಿಯು ಸೇವೆಯಲ್ಲಿ ಮುಂದುವರಿಯುವವರೆಗೆ, ವೇತನ ಪಡೆಯಲು ಆತ ಅರ್ಹನರಾಗಿರುತ್ತಾನೆ. ಹೀಗಾಗಿ, ಕಾಂತರಾಜುಗೆ ವೇತನ ಪಾವತಿಸಬೇಕು ಎಂದು ನಿರ್ದೇಶಿಸಿದೆ.

share
Next Story
X