Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ಸ್ವಯಂ ನಿರ್ಧಾರ...

ಇಸ್ರೇಲ್ ಸ್ವಯಂ ನಿರ್ಧಾರ ತೆಗೆದುಕೊಳ್ಳುತ್ತದೆ: ಬೈಡನ್ ಹೇಳಿಕೆಗೆ ನೆತನ್ಯಾಹು ಪ್ರತಿಕ್ರಿಯೆ‌

29 March 2023 10:40 PM IST
share
ಇಸ್ರೇಲ್ ಸ್ವಯಂ ನಿರ್ಧಾರ ತೆಗೆದುಕೊಳ್ಳುತ್ತದೆ: ಬೈಡನ್ ಹೇಳಿಕೆಗೆ ನೆತನ್ಯಾಹು ಪ್ರತಿಕ್ರಿಯೆ‌

ಜೆರುಸಲೇಂ, ಮಾ.29: ನ್ಯಾಯಾಂಗ ವ್ಯವಸ್ಥೆಯಲ್ಲಿ ಬದಲಾವಣೆ ತರುವ ವಿಷಯಕ್ಕೆ ಸಂಬಂಧಿಸಿ ಮಿತ್ರದೇಶಗಳಾದ  ಇಸ್ರೇಲ್ ಹಾಗೂ ಅಮೆರಿಕ ನಡುವೆ ಭಿನ್ನಾಭಿಪ್ರಾಯ ಮೂಡಿರುವಂತೆಯೇ, ಯಾವುದೇ ಪ್ರಮುಖ ವಿಷಯಗಳಲ್ಲಿ ಇಸ್ರೇಲ್ ಸ್ವಯಂ ನಿರ್ಧಾರ ತೆಗೆದುಕೊಳ್ಳುವ ಹಕ್ಕನ್ನು ಉಳಿಸಿಕೊಂಡಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಕಾನೂನು ವ್ಯವಸ್ಥೆಯಲ್ಲಿ ಬದಲಾವಣೆ ಮಾಡುವ ನಿರ್ಧಾರದಿಂದ ನೆತನ್ಯಾಹು ಹಿಂದೆ ಸರಿಯಲಿದ್ದಾರೆ, ಕೆಲವು ವಿಷಯಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಿದ್ದಾರೆ   ಎಂದು ಆಶಿಸುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮಂಗಳವಾರ ಹೇಳಿದ್ದರು. ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ್ದ ಅವರು `ನೆತನ್ಯಾಹು ಸರಕಾರ  ಈ ರಸ್ತೆಯಲ್ಲಿ ಮುಂದೆ ಸಾಗಲು ಸಾಧ್ಯವಿಲ್ಲ. ಈ ವಿಷಯದಲ್ಲಿ ಅವರು ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದರು.

ನೆತನ್ಯಾಹುರನ್ನು ಅಮೆರಿಕಕ್ಕೆ ಆಹ್ವಾನಿಸಬೇಕು ಎಂಬ ಅಮೆರಿಕದ ರಾಯಭಾರಿ ಥಾಮಸ್ ನೈಡ್ಸ್ ಸಲಹೆಯನ್ನು ತಳ್ಳಿಹಾಕಿದ್ದ ಬೈಡನ್ `ಸದ್ಯಕ್ಕಂತೂ ಇದು ಸಾಧ್ಯವಿಲ್ಲ' ಎಂದಿದ್ದರು. ಬೈಡನ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ನೆತನ್ಯಾಹು `ಇಸ್ರೇಲ್ ಸಾರ್ವಭೌಮ ದೇಶವಾಗಿದೆ ಮತ್ತು ನಿಕಟ ಮಿತ್ರರ ಸಹಿತ,  ವಿದೇಶದ ಒತ್ತಡಕ್ಕೆ ಮಣಿಯದೆ, ದೇಶದ ಜನರ ಆಶಯಕ್ಕೆ ತಕ್ಕಂತೆ ನಿರ್ಧಾರ ಕೈಗೊಳ್ಳುತ್ತದೆ' ಎಂದು ಹೇಳಿದ್ದಾರೆ.

ಈ ಮಧ್ಯೆ, ಸರಕಾರದ ನಿರ್ಧಾರವನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ `ಅಂತರ್ಯುದ್ಧವನ್ನು ತಪ್ಪಿಸುವ ಉದ್ದೇಶದಿಂದ ಪ್ರಸ್ತಾವಿತ ಕಾನೂನನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವುದಾಗಿ' ಇಸ್ರೇಲ್ ಸರಕಾರ ಘೋಷಿಸಿದೆ. ವಿಪಕ್ಷ ಮುಖಂಡರ ಜತೆ ಮಾತುಕತೆ ನಡೆಸಿ ಒಮ್ಮತದ ಮೂಲಕ ಕಾನೂನು ಜಾರಿಗೊಳಿಸುವುದು ಸರಕಾರದ ಉದ್ದೇಶವಾಗಿದೆ ಎಂದು ನೆತನ್ಯಾಹು ಘೋಷಿಸಿದ್ದಾರೆ.

ಅಮೆರಿಕವು ಹಲವು ದಶಕಗಳಿಂದ ಇಸ್ರೇಲ್ನ ಅತ್ಯಂತ ನಿಕಟ ದೇಶವಾಗಿತ್ತು. ಆದರೆ ಈ ಸ್ನೇಹವನ್ನು ಇಸ್ರೇಲ್ನ ಮೂಲಭೂತವಾದಿ ಸರಕಾರ 3 ತಿಂಗಳಲ್ಲೇ ನಾಶಗೊಳಿಸಿದೆ ಎಂದು ವಿಪಕ್ಷ ಮುಖಂಡ ಯಾಯಿರ್ ಲ್ಯಾಪಿಡ್ ಟೀಕಿಸಿದ್ದಾರೆ.

ಇಸ್ರೇಲ್ ಸರಕಾರ- ವಿಪಕ್ಷಗಳ ನಡುವೆ ಮಾತುಕತೆ

 ವಿವಾದಾತ್ಮಕ ನ್ಯಾಯಾಂಗ ಸುಧಾರಣೆ ಕಾನೂನು ಜಾರಿಯನ್ನು ತಾತ್ಕಾಲಿಕವಾಗಿ ತಡೆಹಿಡಿದಿದ್ದು ವಿಪಕ್ಷಗಳ ಜತೆ ಮಾತುಕತೆ ನಡೆಸಿ ಒಮ್ಮತದ ಮೂಲಕ ಜಾರಿಗೊಳಿಸಲಾಗುವುದು ಎಂದು ಇಸ್ರೇಲ್ ಸರಕಾರ ಘೋಷಿಸಿದ ಹಿನ್ನೆಲೆಯಲ್ಲಿ ಸರಕಾರ ಮತ್ತು ವಿಪಕ್ಷಗಳ ಮಧ್ಯೆ ಬುಧವಾರ ಎರಡನೇ ಸುತ್ತಿನ ಮಾತುಕತೆ ಮುಂದುವರಿದಿದೆ ಎಂದು ವರದಿಯಾಗಿದೆ.

ಮಂಗಳವಾರ ಇಸ್ರೇಲ್ ಅಧ್ಯಕ್ಷ ಇಸಾಕ್ ಹೆರ್ಝಾಗ್ ಅಧ್ಯಕ್ಷತೆಯಲ್ಲಿ ನಡೆದಿದ್ದ ಮಾತುಕತೆಯಲ್ಲಿ ಎರಡು ಪ್ರಮುಖ ವಿಪಕ್ಷಗಳಾದ ಯೇಶ್ ಆಟಿಡ್ ಮತ್ತು ನ್ಯಾಷನಲ್ ಯುನಿಟಿ ಪಾರ್ಟಿಯ ಪ್ರತಿನಿಧಿಗಳು ಪಾಲ್ಗೊಂಡಿದ್ದರು.  ಮೊದಲ ಸುತ್ತಿನ ಮಾತುಕತೆ ಅರ್ಧಗಂಟೆಯಲ್ಲೇ ಮುಕ್ತಾಯಗೊಂಡಿತ್ತು ಮತ್ತು ಮಾತುಕತೆ ಮುಂದುವರಿಯುವ ಬಗ್ಗೆ ಅನಿಶ್ಚಿತತೆ ಮೂಡಿತ್ತು.

share
Next Story
X