Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಾವುದೇ ಕಾರಣಕ್ಕೂ ಭದ್ರಾವತಿಯ...

ಯಾವುದೇ ಕಾರಣಕ್ಕೂ ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವುದಿಲ್ಲ: ಸಂಸದ ಬಿ.ವೈ. ರಾಘವೇಂದ್ರ

29 March 2023 11:57 PM IST
share
ಯಾವುದೇ ಕಾರಣಕ್ಕೂ ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವುದಿಲ್ಲ: ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ, ಮಾ.29: ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಭರವಸೆ ನೀಡಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ನಷ್ಟದಲ್ಲಿದ್ದ ವಿಐಎಸ್ ಎಲ್ ಕಾರ್ಖಾನೆಯನ್ನು ಮುಚ್ಚುವ ನಿರ್ಧಾರ ಕೈಗೊಂಡಿತ್ತು. ಭದ್ರಾವತಿ ಕಾರ್ಖಾನೆ ಸೇರಿದಂತೆ ಹಲವು ಕಾರ್ಖಾನೆಗಳೂ ಈ ಪಟ್ಟಿಯಲ್ಲಿದ್ದವು. ಆದರೆ, ಕೇಂದ್ರ ಉಕ್ಕು ಸಚಿವ ಹಾಗೂ ಗೃಹ ಸಚಿವರು ರಾಜ್ಯಕ್ಕೆ ಬಂದಾಗ ಕಾರ್ಖಾನೆಯನ್ನು ಮುಚ್ಚದಂತೆ ಮನವಿ ಮಾಡಲಾಗಿತ್ತು. ನಾನು ಕೂಡ ಕೇಂದ್ರದ ಮೇಲೆ ಒತ್ತಡ ತಂದು ಕಾರ್ಖಾನೆಯನ್ನು ಮುಚ್ಚಿದರೆ ಸುಮಾರು 10ಸಾವಿರ ಜನರು ಉದ್ಯೋಗ ಕಳೆದುಕೊಳ್ಳುತ್ತಾರೆ. ಹಾಗಾಗಿ ಮುಚ್ಚಬಾರದು ಎಂದು ಮನವಿ ಮಾಡಿದ್ದೆ. ಹೀಗಾಗಿ ಕೇಂದ್ರ ಸರಕಾರ ಈಗ ವಿಐಎಸ್ ಎಲ್ ಕಾರ್ಖಾನೆಯನ್ನು ಸದ್ಯಕ್ಕೆ ಮುಚ್ಚುವ ನಿರ್ಧಾರದಿಂದ ಹಿಂದಕ್ಕೆ ಸರಿದಿದೆ. ಬೀಸುವ ದೊಣ್ಣೆಯಿಂದ ನಾವು ಪಾರಾಗಿದ್ದೇವೆ ಎಂದರು.

ಕೇಂದ್ರ ಸರಕಾರ ಕಾರ್ಖಾನೆಯನ್ನು ಮುಚ್ಚದಿರುವ ಬಗ್ಗೆ ಮತ್ತು ಸೈಲ್ ಮುಂದುವರಿಸಿಕೊಂಡು ಹೋಗುವ ಬಗ್ಗೆ ಮೌಖಿಕವಾಗಿ ಒಪ್ಪಿಗೆ ನೀಡಿದೆ. ನೀತಿಸಂಹಿತೆ ಹಿನ್ನೆಲೆಯಲ್ಲಿ ಲಿಖಿತವಾಗಿ ತಿಳಿಸಲು ಆಗುತ್ತಿಲ್ಲ. ಆದರೆ, ಬಿಜೆಪಿ ಕೊಟ್ಟ ಮಾತಿಗೆ ತಪ್ಪುವುದಿಲ್ಲ. ಹಾಗಾಗಿ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವುದಿಲ್ಲ. ಮತ್ತು ಕಾರ್ಮಿಕರು ಭಯಪಡುವ ಅಗತ್ಯವೂ ಇಲ್ಲ ಎಂದರು.

ಶಿಕಾರಿಪುರದಲ್ಲಿ ನಡೆದ ಘಟನೆ ಬೇಸರ ತಂದಿದೆ. ಇದು ಮೀಸಲಾತಿ ಹೋರಾಟದ ನೆಪ ಅಷ್ಟೆ. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಮೀಸಲಾತಿ ವಿಷಯವನ್ನು ಚುನಾವಣೆ ಸಂದರ್ಭದಲ್ಲಿ ಬೇಳೆ ಬೇಯಿಸಿಕೊಳ್ಳಲು ಬಳಸಿಕೊಳ್ಳುತ್ತಿದೆ. ವಿರೋಧ ಪಕ್ಷದ ಪ್ರಾಯೋಜ ಕತ್ವದಲ್ಲಿ ಪ್ರತಿಭಟನೆಗೆ ಸಿದ್ಧರಿದ್ದಾರೆ. ಇದು ನಡೆಯುವುದಿಲ್ಲ. ಸಹಿಸಿಕೊಳ್ಳಲು ಆಗದ ಕೆಟ್ಟ ಮನಸ್ಸಿನವರು ನಮ್ಮ ಮನೆ ಮೇಲೆ ಕಲ್ಲು ಹೊಡೆದಿದ್ದಾರೆ ಎಂದು ರಾಘವೇಂದ್ರ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಪ್ರಮುಖರಾದ ಜ್ಯೋತಿಪ್ರಕಾಶ್, ದತ್ತಾತ್ರಿ, ಧರ್ಮಪ್ರಸಾದ್, ಜಗದೀಶ್, ರಾಮಲಿಂಗಪ್ಪ, ಎಸ್. ಕುಮಾರ್, ಬುಳ್ಳಾಪುರ ಬಸವರಾಜಪ್ಪ ಹಾಗೂ ಇತರರಿದ್ದರು.

share
Next Story
X