ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಮಾಜಿ ಶಾಸಕ ಗುಬ್ಬಿ ಶ್ರೀನಿವಾಸ್
ಬೆಂಗಳೂರು: ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನ ಮಾಜಿ ಶಾಸಕ ಎಸ್.ಆರ್ ಶ್ರೀನಿವಾಸ್ ಗುರುವಾರ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.
ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಬಗ್ಗೆ ಬಹಿರಂಗವಾಗಿಯೇ ಹೇಳಿಕೊಂಡಿದ್ದ ಅವರು, ಪಕ್ಷ ತೊರೆಯುವ ಬಗ್ಗೆಯೂ ಹೇಳಿಕೆ ನೀಡಿದ್ದರು. ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎಸ್.ಆರ್ ಶ್ರೀನಿವಾಸ್, ಇದೀಗ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ಎಸ್.ಆರ್ ಶ್ರೀನಿವಾಸ್, ''ನನ್ನನ್ನು ಕತ್ತು ಹಿಡಿದು ಪಕ್ಷದಿಂದ ಹೊರಹಾಕಿದರು. ಸ್ವಾಭಿಮಾನಕ್ಕೆ ಧಕ್ಕೆ ಬಂತು ಎಂದು ಜೆಡಿಎಸ್ ತೊರೆದೆ'' ಎಂದು ಹೇಳಿದರು.
Next Story