ಬೆಂಗಳೂರು | ಪಾಕಿಸ್ತಾನ ಝಿಂದಾಬಾದ್ ಘೋಷಣೆ ಆರೋಪ: ಪೊಲೀಸರಿಂದ ಯುವಕ ಅಂಕುಶ್ ವಿಚಾರಣೆ
ಬೆಂಗಳೂರು, ಮಾ.30: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಲ್ಲಿ ಯುವಕನೋರ್ವನನ್ನು ನಗರದ ಮೈಕೋ ಲೇಔಟ್ ಪೊಲೀಸರು ವಶಕ್ಕೆ ಪಡೆದಿರುವುದು ವರದಿಯಾಗಿದೆ.
ಬುಧವಾರ ಬೆಳಗ್ಗೆ ನಗರದ ಬಿಟಿಎಂ ಲೇಔಟ್ ಸಮೀಪ ಪಶ್ಚಿಮ ಬಂಗಾಳ ಮೂಲದ 24 ವರ್ಷದ ಅಂಕುಶ್ ಎಂಬಾತ ''ಪಾಕಿಸ್ತಾನ ಝಿಂದಾಬಾದ್'' ಎಂದು ಕೂಗಿದ್ದಾನೆನ್ನಲಾಗಿದೆ. ಈ ವೇಳೆ ಸ್ಥಳೀಯರು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಮೈಕೋ ಲೇಔಟ್ ಪೊಲೀಸರು ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
''ಘಟನೆಗೆ ಸಂಬಂಧಿಸಿದಂತೆ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ'' ಎಂದು ಮೈಕೋ ಲೇಔಟ್ ಪೊಲೀಸರು ಮಾಹಿತಿ ನೀಡಿದರು.
ಇದನ್ನೂ ಓದಿ: ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಮಾಜಿ ಶಾಸಕ ಗುಬ್ಬಿ ಶ್ರೀನಿವಾಸ್
Next Story