ವಿಪಕ್ಷ ನಾಯಕ ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾ ತೆರೆಗೆ?: ವೈರಲ್ ಆಯ್ತು 'ಲೀಡರ್ ರಾಮಯ್ಯ' ಪೋಸ್ಟರ್.!
ಮಾಜಿ ಸಿಎಂ ಪಾತ್ರದಲ್ಲಿ ಸೂಪರ್ ಸ್ಟಾರ್ ವಿಜಯ್ ಸೇತುಪತಿ?

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನಾಧಾರಿತ ಸಿನಿಮಾ ಬಿಡುಗಡೆ ಆಗುವುದಾಗಿ ಸುದ್ದಿ ವೈರಲ್ ಆಗಿದೆ. ಚಿತ್ರಕ್ಕೆ 'ಲೀಡರ್ ರಾಮಯ್ಯ' ಎಂದು ಹೆಸರಿಟ್ಟಿದ್ದು, ಸಿನೆಮಾವನ್ನು ಅವರ ಅಭಿಮಾನಿಗಳು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು indiatoday.in ವರದಿ ಮಾಡಿದೆ.
ಸಿದ್ದರಾಮಯ್ಯ ಅವರ ಬಾಲ್ಯದಿಂದ ಹಿಡಿದು ಕಾಂಗ್ರೆಸ್ ನಾಯಕರಾಗಿ, ಸಿಎಂ ಪಟ್ಟ ಏರುವ ವರೆಗಿನ ಅವರ ಪ್ರಯಾಣ ಮತ್ತು ಕರ್ನಾಟಕ ರಾಜ್ಯಕ್ಕೆ ಅವರು ನೀಡಿದ ಕೊಡುಗೆಗಳನ್ನು ಚಲನಚಿತ್ರದಲ್ಲಿ ತೋರಿಸಲಾಗುತ್ತದೆ. ಚಿತ್ರ ಆಗಸ್ಟ್ ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.
ಸಿನಿಮಾದ ಬಗ್ಗೆ ಮಾಹಿತಿ ಪಡೆದ ಸಿದ್ದರಾಮಯ್ಯ, ತಮ್ಮ ಜೀವನದ ಕುರಿತು ಸಿನಿಮಾ ಮಾಡುವುದು ಬೇಡ ಎಂದು ಬೆಂಬಲಿಗರಿಗೆ ಹೇಳಿದ್ದಾರೆ ಎನ್ನಲಾಗಿದೆ. ಆದಾಗ್ಯೂ, ಅವರ ಬೆಂಬಲಿಗರು ಬಯೋಪಿಕ್ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆಂದು ಹೇಳಲಾಗಿದೆ.
ಟ್ವಿಟರಿನಲ್ಲಿ ವೈರಲ್ ಆಗುತ್ತಿರುವ ವದಂತಿ ಪ್ರಕಾರ ವಿಜಯ್ ಸೇತುಪತಿ ಈ ಚಿತ್ರದಲ್ಲಿ ಸಿದ್ದರಾಮಯ್ಯ ಪಾತ್ರಕ್ಕೆ ಜೀವ ತುಂಬಲಿದ್ದಾರೆ. ಆದರೆ, ಈ ಬಗ್ಗೆ ವಿಜಯ್ ಸೇತುಪತಿಯಾಗಲಿ, ಅಥವಾ ಇನ್ಯಾವುದೇ ಮೂಲಗಳಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.
A movie on @siddaramaiah in five languages. To be released in August. No election connection pic.twitter.com/xgmCw8UzPZ
— DP SATISH (@dp_satish) March 30, 2023