Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ...

ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ 2,22,901 ಮತದಾರರು: ಚುನಾವಣಾಧಿಕಾರಿ ಆಬಿದ್ ಗದ್ಯಾಲ್

30 March 2023 11:17 PM IST
share
ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ 2,22,901 ಮತದಾರರು: ಚುನಾವಣಾಧಿಕಾರಿ ಆಬಿದ್ ಗದ್ಯಾಲ್

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ 1,09,715 ಮಂದಿ ಪುರುಷ ಮತದಾರರು ಹಾಗೂ 1,13,186 ಮಹಿಳಾ ಮತದಾರರು ಸೇರಿದಂತೆ ಒಟ್ಟು 2,22,901 ಮಂದಿ ಮತದಾರರು ಇದುವರೆಗೆ ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಆಬಿದ್ ಗದ್ಯಾಲ್ ತಿಳಿಸಿದರು. 

ಗುರುವಾರ  ಬಂಟ್ವಾಳ ಮಿನಿ ವಿಧಾನ ಸೌಧ ಕಟ್ಟಡದ ಚುನಾವಣಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಬಾಕಿ ಇರುವ ಅರ್ಹ ಮತದಾರರಿಗೆ  ಎಪ್ರಿಲ್ 11ರವರೆಗೆ  ಕಾಲಾವಕಾಶ ನೀಡಲಾಗಿದೆ ಎಂದರು.

ಕ್ಷೇತ್ರಾದ್ಯಂತ 249 ಮತಗಟ್ಟೆಗಳನ್ನು ನಿರ್ಮಿಸಲಾಗಿದೆ. ಈ ಪೈಕಿ 213 ಸಾಮಾನ್ಯ ಮತಗಟ್ಟೆಗಳು ಹಾಗೂ 36 ಸೂಕ್ಷ್ಮ ಮತಗಟ್ಟೆಗಳಾಗಿ ಗುರುತಿಸಲಾಗಿದೆ. ಚುನಾವಣಾ ಆಯೋಗ ಮತದಾನಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ ಎಂದ ಚುನಾವಣಾಧಿಕಾರಿ ಗದ್ಯಾಲ್ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ನಿಗಾ ವಹಿಸಲಾಗಿದೆ. ಚುನಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಕ್ಷೇತ್ರದಲ್ಲಿ 25 ಮಂದಿ ಸೆಕ್ಟರ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ತಲಾ 3 ಫ್ಲೈಯಿಂಗ್ ಸ್ಕ್ಯಾಡ್, ವೀಡಿಯೋ ವೀವಿಂಗ್ ಹಾಗೂ ವೀಡಿಯೋ ಮಾನಿಟರಿಂಗ್ ತಂಡಗಳು ಕೂಡಾ ದಿನದ 24 ಗಂಟೆ ಕಾರ್ಯ ನಿರ್ವಹಿಸಲಿದೆ ಎಂದ ಚುನಾವಣಾಧಿಕಾರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭ ಪ್ರತಿಯೊಂದು ಕಾರ್ಯಕ್ರಮಗಳಿಗೂ ಚುನಾವಣಾ ಶಾಖೆಯ ಆರ್.ಒ. ಕಚೇರಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಇದಕ್ಕೆ ಸುವಿದಾ ಪೋರ್ಟಲ್ ಮೂಲಕ ಏಕಗವಾಕ್ಷಿ ವ್ಯವಸ್ಥೆ ಮಾಡಲಾಗಿದೆ ಎಂದರು.

ಈ ಬಾರಿ ವಿಶೇಷವೆಂದರೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಶೇ 40ಕ್ಕಿಂತ ಹೆಚ್ಚಿನ ಪ್ರಮಾಣ ವೈಕಲ್ಯ ಹೊಂದಿರುವ ಭಿನ್ನಚೇತನರಿಗೆ ಅವರು ಬಯಸಿದರೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. 112 ಡಿ ಮಾದರಿಯ ಅರ್ಜಿಯಲ್ಲಿ ಒಪ್ಪಿಗೆ ನೀಡಿದರೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ಸಿಬ್ಬಂದಿಗಳು ಅವರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಿದ್ದಾರೆ. ಚುನಾವಣಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ತಾಲೂಕು ಕಚೇರಿಯ ಚುನಾವಣಾ ಕಂಟ್ರೋಲ್ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ತಮ್ಮ ದೂರುಗಳನ್ನು ಯಾವುದೇ ಭಯ, ಅಳುಕಿಲ್ಲದೆ ಸಲ್ಲಿಸಬಹುದು ಎಂದರು.

ಚುನಾವಣಾ ಆಯೋಗದ ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳು, ನಾಯಕರು ಹಾಗೂ ಅಭ್ಯರ್ಥಿಗಳು ಬದ್ಧರಾಗಿದ್ದು, ನೀತಿ ಸಂಹಿತೆ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.   

   ಬಂಟ್ವಾಳ ತಾಲೂಕು ತಹಶೀಲ್ದಾರ್ ಎಸ್ ಬಿ ಕೂಡಲಗಿ ಈ ಸಂದರ್ಭ ಉಪಸ್ಥಿತರಿದ್ದರು.

share
Next Story
X