Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಚುನಾವಣಾ ನೀತಿ ಸಂಹಿತೆಯ ನೆಪದಲ್ಲಿ...

ಚುನಾವಣಾ ನೀತಿ ಸಂಹಿತೆಯ ನೆಪದಲ್ಲಿ ಜನಸಾಮಾನ್ಯರಿಗೆ ತೊಂದರೆ ಬೇಡ: ಯು.ಟಿ.ಖಾದರ್

ಮಾಹಿತಿ-ನಿಯಂತ್ರಣ ಕೊಠಡಿ ತೆರೆಯಲು ಮನವಿ

31 March 2023 5:05 PM IST
share
ಚುನಾವಣಾ ನೀತಿ ಸಂಹಿತೆಯ ನೆಪದಲ್ಲಿ ಜನಸಾಮಾನ್ಯರಿಗೆ ತೊಂದರೆ ಬೇಡ: ಯು.ಟಿ.ಖಾದರ್
ಮಾಹಿತಿ-ನಿಯಂತ್ರಣ ಕೊಠಡಿ ತೆರೆಯಲು ಮನವಿ

ಮಂಗಳೂರು: ಚುನಾವಣಾ ನೀತಿ ಸಂಹಿತೆಯ ನೆಪದಲ್ಲಿ ಜನಸಾಮಾನ್ಯರಿಗೆ ತೊಂದರೆ ಕೊಡುವುದನ್ನು ಅಧಿಕಾರಿಗಳು ನಿಲ್ಲಿಸಬೇಕು. ನೀತಿ ಸಂಹಿತೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳು ಕಿರಿಯ ಅಧಿಕಾರಿ, ಸಿಬ್ಬಂದಿ ವರ್ಗಕ್ಕೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದ್ದಾರೆ.

ನಗರದ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನೀತಿ ಸಂಹಿತೆಯನ್ನು ಅನುಷ್ಠಾನಗೊಳಿಸುವ ಭರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಬ್ಯಾನರ್, ಫ್ಲೆಕ್ಸ್, ಬಂಟಿಂಗ್ಸ್‌ಗಳನ್ನು ತೆರವುಗೊಳಿಸಿರುವುದು ಸರಿಯಲ್ಲ. ಆ ಬ್ಯಾನರ್‌ನಲ್ಲಿ ರಾಜಕಾರಣಿಗಳ, ಜನಪ್ರತಿನಿಧಿಗಳ ಫೋಟೊ, ಅನುದಾನ ಇತ್ಯಾದಿ ವಿವರಗಳಿದ್ದರೆ ತೆರವುಗೊಳಿಸಲಿ. ಅದು ಬಿಟ್ಟು ಕೇವಲ ಧಾರ್ಮಿಕ ಕಾರ್ಯಕ್ರಮಗಳ ಬ್ಯಾನರ್‌ಗಳನ್ನು ತೆರವುಗೊಳಿಸುತ್ತಿರುವುದು ಅಕ್ಷಮ್ಯ. ಅಧಿಕಾರಿ, ಸಿಬ್ಬಂದಿ ವರ್ಗಕ್ಕೆ ಮಾಹಿತಿಯ ಕೊರತೆ ಇರುವುದರಿಂದಲೇ ಈ ಸಮಸ್ಯೆ ಸೃಷ್ಟಿಯಾಗಿದೆ. ಗೊಂದಲವೂ ನಿರ್ಮಾಣವಾಗಿದೆ. ಈ ಬಗ್ಗೆ ಮಾಹಿತಿ ಪಡೆಯಲು ಮತ್ತು ನಿಯಮ ಮೀರಿ ಕಾರ್ಯಾಚರಿಸುವ ಅಧಿಕಾರಿ, ಸಿಬ್ಬಂದಿ ವರ್ಗದ ವಿರುದ್ಧ ದೂರು ಸಲ್ಲಿಸಲು ನಿಯಂತ್ರಣ ಕೊಠಡಿ ತೆರೆಯಬೇಕು ಎಂದರು.

ಜಿಲ್ಲಾದ್ಯಂತ ನೀರಿನ ಸಮಸ್ಯೆ ಸೃಷ್ಟಿಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈ ಸಮಸ್ಯೆಗೆ ಕ್ಷಿಪ್ರಗತಿಯಲ್ಲಿ ಪರಿಹಾರ ಕಂಡುಕೊಳ್ಳಲು ಜನಪ್ರತಿನಿಧಿಗಳಿಗೆ ಸಾಧ್ಯವಾಗುತ್ತಿಲ್ಲ.  ಮುಖ್ಯಮಂತ್ರಿ ಸಹಿತ ಸಚಿವರು ಚುನಾವಣಾ ಪ್ರಚಾರದಲ್ಲಿ ಮಗ್ನರಾಗಿದ್ದರೇ ವಿನಃ ನೀತಿ ಸಂಹಿತೆ ಜಾರಿಗೆ ಮುನ್ನ ಮೂಲಭೂತ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಿಲ್ಲ. ಸರಕಾರದ ನಿರ್ಲಕ್ಷ್ಯದಿಂದ ಇದೀಗ ಜನಸಾಮಾನ್ಯರು ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ಜಿಲ್ಲಾಡಳಿತವು ಶೀಘ್ರ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಯು.ಟಿ. ಖಾದರ್ ಒತ್ತಾಯಿಸಿದರು.

ಗೊಂದಲವಿಲ್ಲ: ಜಿಲ್ಲೆಯ 8 ಕ್ಷೇತ್ರಗಳ ಪೈಕಿ 5 ಸ್ಥಾನಗಳಿಗೆ ಪಕ್ಷ ಈಗಾಗಲೆ ಅಭ್ಯರ್ಥಿಗಳನ್ನು ಘೋಷಿಸಿದೆ. ಇನ್ನುಳಿದ 3 ಕ್ಷೇತ್ರಗಳಿಗೆ ಶೀಘ್ರ ಅಭ್ಯರ್ಥಿಗಳನ್ನು ಘೋಷಿಸಲಿದೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಬಿಜೆಪಿ ಸರಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಟಿಕೆಟ್ ಆಕಾಂಕ್ಷಿಗಳು, ಅಭ್ಯರ್ಥಿಗಳು ಕಟಿಬಬ್ಧರಾಗಿದ್ದಾರೆ ಎಂದ ಖಾದರ್, ತನ್ನ ವಿರುದ್ಧ ಯಾರೇ ಕಣಕ್ಕಿಳಿದರೂ ಕೂಡ ಮುಕ್ತವಾಗಿ ಸ್ವಾಗತಿಸುವೆ.  ಈಗಾಗಲೆ ಪಕ್ಷದ ಕಾರ್ಯಕರ್ತರು ನನ್ನ ಗೆಲುವಿಗೆ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ ಎಂದರು.

*ಮೀಸಲಾತಿಯಲ್ಲಿ ಗೊಂದಲ: ರಾಜ್ಯ ಬಿಜೆಪಿ ಸರಕಾರ ಉದ್ದೇಶಪೂರ್ವಕವಾಗಿ ಕೊನೆಯ ಕ್ಷಣದಲ್ಲಿ ಮುಸ್ಲಿಮರ 2ಬಿ ಮೀಸಲಾತಿಯನ್ನು ರದ್ದುಗೊಳಿಸಲು ಮುಂದಾಗಿವೆ. ಈ ಹಿಂದೆ ಎಲ್ಲಾ ಮೀಸಲಾತಿಯನ್ನು ರದ್ದುಗೊಳಿಸಬೇಕು ಎಂದು ಹೈಕೋರ್ಟ್‌ಗೆ ಮೊರೆ ಹೋದವರು ಕೂಡ ಇದೇ ಬಿಜೆಪಿಗರಾಗಿದ್ದಾರೆ. ಇವರಿಗೆ ಮುಸ್ಲಿಮರು ನೆಪಮಾತ್ರ. ಭವಿಷ್ಯದಲ್ಲಿ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗದವರ ಮೀಸಲಾತಿಯನ್ನು ಕಸಿಯುವುದು ಇವರ ಷಡ್ಯಂತ್ರವಾಗಿದೆ. ಆದರೆ ಈ ವಿಚಾರದಲ್ಲಿ ಬಿಜೆಪಿಗರು ಯಶಸ್ಸು ಕಾಣುವುದಿಲ್ಲ. ರಾಜ್ಯದ ಜನರು ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲಿದ್ದಾರೆ ಎಂದರು.

ರಾಜಕೀಯ ಮೀಸಲಾತಿಯಲ್ಲೇ ಬಿಜೆಪಿ ಗೊಂದಲ ಸೃಷ್ಟಿಸಿದೆ. ಅದನ್ನು ನಿವಾರಿಸಲು ಇನ್ನೂ ಈ ಸರಕಾರಕ್ಕೆ ಆಗಿಲ್ಲ. ಇದರಿಂದ ಕಳೆದ ಒಂದುವರೆ ವರ್ಷದಿಂದ ಸ್ಥಳೀಯಾಡಳಿತದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯ ಪ್ರಕ್ರಿಯೆ ಆಗಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೊಡುವುದಾದರೆ ದಲಿತರಿಗೆ ಮೀಸಲಾತಿಯಲ್ಲಿ ಹೆಚ್ಚಿನ ಪಾಲು ನೀಡಬೇಕು. ಆದರೆ ಅದಕ್ಕೆ ಕೇಂದ್ರ ಸರಕಾರ ಒಪ್ಪಿಗೆ ನೀಡುತ್ತಿಲ್ಲ. ಒಟ್ಟಿನಲ್ಲಿ ಗೊಂದಲ ಸೃಷ್ಟಿಸಿ ರಾಜಕೀಯ ಲಾಭ ಪಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಖಾದರ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಮುಖಂಡರಾದ ಸುಹೈಲ್ ಕಂದಕ್, ಉದಯ್ ಆಚಾರ್, ನಝೀರ್ ಮಠ ಉಪಸ್ಥಿತರಿದ್ದರು.

share
Next Story
X