ಎಸೆಸೆಲ್ಸಿ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 244 ವಿದ್ಯಾರ್ಥಿಗಳು ಗೈರು
ಮಂಗಳೂರು, ಮಾ.31: ದ.ಕ.ಜಿಲ್ಲೆಯ 98 ಕೇಂದ್ರಗಳಲ್ಲಿ ಶುಕ್ರವಾರ ಆರಂಭಗೊಂಡ ಎಸೆಸೆಲ್ಸಿ ಪ್ರಥಮ ಭಾಷಾ ಪರೀಕ್ಷೆಯಲ್ಲಿ 244 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ಭಾಷಾ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 28,506 ವಿದ್ಯಾರ್ಥಿಗಳ ಪೈಕಿ 28,262 ಮಂದಿ ಹಾಜರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ದ.ಕ.ಜಿಪಂ ಸಿಇಒ ಡಾ. ಕುಮಾರ್ ಶುಕ್ರವಾರ ವಿಟ್ಲ ಸಮೀಪದ ಮಾಣಿಯ ಎಸೆಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.