ಸಾಲಿಗ್ರಾಮ ಪಟ್ಟಣ ಪಂಚಾಯತ್: ಉದ್ದಿಮೆ ಪರವಾನಿಗೆ ನವೀಕರಣಕ್ಕೆ ಸೂಚನೆ
ಉಡುಪಿ, ಮಾ.31: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಉದ್ದಿಮೆದಾರರಿಗೆ ವ್ಯಾಪಾರ ಆನ್ಲೈನ್ ತಂತ್ರಾಂಶದ ಮೂಲಕ ಸೃಜಿಸಿದ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಿಗೆ ನೀಡಲಾಗುತ್ತಿದ್ದು, 2023-24ನೇ ಸಾಲಿನ ಪರವಾನಿಗೆ ನವೀಕರಣಕ್ಕೆ ಎ.1ರಿಂದ ಅವಕಾಶ ಕಲ್ಪಿಸಲಾಗಿದೆ.
ಪರವಾನಿಗೆ ಪಡೆಯದೇ ಇರುವವರು ನಿಗದಿತ ನಮೂನೆಯಲ್ಲಿ ದಾಖಲೆ ಸಹಿತ ಪಟ್ಟಣ ಪಂಚಾಯತ್ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಹಾಗೂ ಪರವಾನಿಗೆ ನವೀಕರಿಸದೆ ಇರುವವರು ದಾಖಲೆ ಸಹಿತ ಅರ್ಜಿ ಸಲ್ಲಿಸಿ, ಬಾಕಿ ದಂಡನೆ ಶುಲ್ಕ ಪಾವತಿಸಿ, ಪರವಾನಿಗೆ ಪಡೆದುಕೊಳ್ಳಬಹುದು.
ಉದ್ದಿಮೆ ಪರವಾನಿಗೆ ಪಡೆದು, ಉದ್ದಿಮೆ ನಡೆಸದೇ ಇರುವವರು ಪಟ್ಟಣ ಪಂಚಾಯತ್ ಕಚೇರಿಗೆ ಲಿಖಿತ ಮಾಹಿತಿ ನೀಡಿ, ಬಾಕಿ ಶುಲ್ಕ ಪಾವತಿಸಿ, ಉದ್ದಿಮೆ ಪರವಾನಿಗೆ ರದ್ದುಪಡಿಸಲು ಕ್ರಮ ವಹಿಸಬೇಕು. ತಪ್ಪಿದ್ದಲ್ಲಿ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಿ ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್ನ ಕಚೇರಿ ಪ್ರಕಟಣೆ ತಿಳಿಸಿದೆ.
Next Story