Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ:...

ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ: ಮದ್ಯ ಮಾರಾಟ ನಿಷೇಧ, ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಣೆ

31 March 2023 10:42 PM IST
share
ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ: ಮದ್ಯ ಮಾರಾಟ ನಿಷೇಧ, ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಣೆ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ಮುಕ್ತ, ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮತದಾನ ನಡೆಯುವ ದಿನ (ಮೇ 10) ಹಾಗೂ ಮತಗಳ ಎಣಿಕೆಯ ದಿನ(ಮೇ 13)ದಂದು ರಾಜ್ಯಾದ್ಯಂತ ಮದ್ಯ ಮಾರಾಟವನ್ನು ಸಂಪೂರ್ಣ ನಿಷೇಧಿಸಿ ಆದೇಶ ಹೊರಡಿಸಿದೆ.

ಹೊಟೇಲ್, ರೆಸ್ಟೊರೆಂಟ್, ಮದ್ಯದಂಗಡಿ, ಪಂಚತಾರಾ ಹೊಟೇಲ್, ಸಗಟು ವ್ಯಾಪಾರ ಸೇರಿದಂತೆ ಎಲ್ಲಿಯೂ ಮದ್ಯ ಮಾರಾಟ ಮಾಡುವಂತಿಲ್ಲ. ಮತದಾನದ ದಿನ ತುರ್ತು ಸೇವೆ ಹಾಗೂ ಚುನಾವಣಾ ಕಾರ್ಯಕ್ಕಾಗಿ ನಿಯೋಜಿಸಲ್ಪಟ್ಟಿರುವ ಸಿಬ್ಬಂದಿಗಳು ಹೊರತುಪಡಿಸಿ ಇತರೆ ಕಾರ್ಮಿಕರು, ಖಾಸಗಿ ಸಂಸ್ಥೆಗಳ ಸಿಬ್ಬಂದಿಗೆ ವೇತನ ಸಹಿತ ರಜೆಯನ್ನು ಘೋಷಿಸಿದೆ.

ಪ್ರಜಾಪ್ರಭುತ್ವದಲ್ಲಿ ಮತದಾನವನ್ನು ಹಬ್ಬದ ರೀತಿಯಲ್ಲಿ ಆಚರಿಸಬೇಕು ಎಂದು ಬಯಸಿರುವ ಚುನಾವಣಾ ಆಯೋಗವು, ಮತದಾನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂಬ ಉದ್ದೇಶದಿಂದ ಮೇ 10ರಂದು ಮತದಾನದ ಪ್ರಯುಕ್ತ ವೇತನ ಸಹಿತ ರಜೆ ಘೋಷಣೆ ಮಾಡಿದೆ. 

ಸೇನೆಯಲ್ಲಿ ಕೆಲಸ ಮಾಡುವವರು, ಅನಿವಾಸಿ ಭಾರತೀಯರು(ಎನ್‍ಆರ್ ಐ) ಎಲೆಕ್ಟ್ರಾನಿಕಲಿ ಟ್ರಾನ್ಸ್ ಮಿಟೆಡ್ ಪೋಸ್ಟಲ್ ಬ್ಯಾಲೆಟ್ ಪೇಪರ್ ವ್ಯವಸ್ಥೆ ಮೂಲಕ ತಮ್ಮ ಹಕ್ಕನ್ನು ಚಲಾಯಿಸುತ್ತಾರೆ. ಇವುಗಳ ಮತ ಎಣಿಕೆ ಪ್ರಾರಂಭಿಸುವ ವೇಳೆ ರಿಟರ್ನಿಂಗ್ ಅಧಿಕಾರಿಗಳು ಮತ್ತು ಸಹಾಯಕ ರಿಟರ್ನಿಂಗ್ ಅಧಿಕಾರಿಗಳು ಮೊಬೈಲ್ ಅನ್ನು ಪಾಸ್‍ವರ್ಡ್‍ಗಾಗಿ ಮಾತ್ರ ಬಳಕೆ ಮಾಡಬೇಕು. ಪಾಸ್‍ವರ್ಡ್ ಪ್ರಕ್ರಿಯೆ ಮುಗಿದ ಬಳಿಕ ಮೊಬೈಲ್ ಅನ್ನು ಮತ ಎಣಿಕೆ ಕೇಂದ್ರದ ಹಿರಿಯ ಅಧಿಕಾರಿಗಳಿಗೆ ಹಸ್ತಾಂತರಿಸಬೇಕು ಎಂದು ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಮೇ 13ರಂದು ಮತಗಳ ಎಣಿಕೆ ಕಾರ್ಯವನ್ನು ಬೆಳಗ್ಗೆ 8 ಗಂಟೆಗೆ ನಿಗದಿಯಂತೆ ಆರಂಭಿಸಬೇಕು. ಇದಕ್ಕಾಗಿ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗಳು ಸಿದ್ಧವಾಗಿರಬೇಕು ಎಂದು ಚುನಾವಣಾ ಆಯೋಗವು ಸೂಚಿಸಿದೆ.

share
Next Story
X