ಮಂಡ್ಯ| ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ: ನಾಲ್ಕು ಬೈಕ್‍ಗಳು ಬೆಂಕಿಗಾಹುತಿ
ಮಂಡ್ಯ: ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡು ಅಕ್ಕಪಕ್ಕದಲ್ಲಿದ್ದ ಇತರೆ ನಾಲ್ಕು ಬೈಕ್‍ಗಳು ಬೆಂಕಿಗಾಹುತಿಯಾಗಿರುವ ಘಟನೆ ಮಳವಳ್ಳಿ ತಾಲೂಕು ಕಿರುಗಾವಲು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಕಿರುಗಾವಲು ಗ್ರಾಮದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದ ವಿವೇಕಾನಂದ ಪ್ರೌಢಶಾಲೆ ಶಿಕ್ಷಕ ಪ್ರಕಾಶ ಎಂಬವರ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡು ಈ ಘಟನೆ ಸಂಭವಿಸಿದೆ.
ಪರೀಕ್ಷಾ ಕೇಂದ್ರದ ಆವರಣದಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡು ಹೊತ್ತಿ ಉರಿಯ ತೊಡಗಿದೆ. ಈ ವೇಳೆ ಪಕ್ಕದಲ್ಲೇ ಇದ್ದ ಇತರ ಬೈಕ್‍ಗಳಿಗೆ ಬೆಂಕಿ ಆವರಿಸಿ ಸಂಪೂರ್ಣ ಭಸ್ಮವಾಗಿವೆ. ಅಗ್ನಿಶಾಮಕ ಠಾಣೆ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು.
ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story