Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನ ಸಿಬ್ಬಂದಿ ಜತೆ ಅಸಭ್ಯ ವರ್ತನೆ:...

ವಿಮಾನ ಸಿಬ್ಬಂದಿ ಜತೆ ಅಸಭ್ಯ ವರ್ತನೆ: ಸ್ವಿಡೀಷ್ ಪ್ರಜೆ ಬಂಧನ

1 April 2023 7:50 AM IST
share
ವಿಮಾನ ಸಿಬ್ಬಂದಿ ಜತೆ ಅಸಭ್ಯ ವರ್ತನೆ: ಸ್ವಿಡೀಷ್ ಪ್ರಜೆ ಬಂಧನ

ಮುಂಬೈ: ಬ್ಯಾಂಕಾಕ್‌ನಿಂದ ಬರುತ್ತಿದ್ದ ಇಂಡಿಗೊ ವಿಮಾನದ ಮಹಿಳಾ ಸಿಬ್ಬಂದಿಗೆ ನಾಲ್ಕು ಗಂಟೆ ಕಾಲ ’ಕಿರುಕುಳ’ ನೀಡಿದ್ದಾನೆ ಎನ್ನಲಾದ 63 ವರ್ಷದ ಸ್ವೀಡನ್ ಪ್ರಜೆಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕ್ಲಾಸ್ ಎರಿಕ್ ಹೆರಾಲ್ಡ್ ಜೋನ್ಸ್ ವೆಸ್ಟ್‌ಬರ್ಗ್ ಎಂಬ ಪ್ರಯಾಣಿಕ ವಿಮಾನಯಾನದ ವೇಳೆ ಪಾನಮತ್ತನಾಗಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಮತ್ತೊಬ್ಬ ಪ್ರಯಾಣಿಕನ ಮೇಲೆ ಈತ ಹಲ್ಲೆ ಮಾಡಿದ್ದಾಗಿಯೂ ಆರೋಪಿಸಲಾಗಿದೆ.

ಮೂವರು ವಿಮಾನ ಸಿಬ್ಬಂದಿಯ ಹೇಳಿಕೆ ಆಧರಿಸಿ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದಾರೆ. 20 ಸಾವಿರ ವೈಯಕ್ತಿಕ ಬಾಂಡ್ ಆಧಾರದಲ್ಲಿ ವೆಸ್ಟ್‌ಬರ್ಗ್‌ನನ್ನು ನ್ಯಾಯಾಲಯ ಶುಕ್ರವಾರ ಜಾಮೀನಿನಲ್ಲಿ ಬಿಡುಗಡೆ ಮಾಡಿದೆ. ಇದೀಗ ವೆಸ್ಟ್‌ಬರ್ಗ್ ವಿಚಾರಣೆಗೆ ಹಾಜರಾಗಬೇಕಿದೆ. ವೆಸ್ಟ್‌ಬರ್ಗ್, ಕಳೆದ ಮೂರು ತಿಂಗಳಲ್ಲಿ ವಿಮಾನದಲ್ಲಿ ಅಸಭ್ಯ ವರ್ತನೆಗಾಗಿ ಭಾರತದಲ್ಲಿ ಬಂಧಿತನಾದ ಎಂಟನೇ ಪ್ರಯಾಣಿಕ.

ಬ್ಯಾಂಕಾಕ್‌ನಿಂದ ಹೊರಟಿದ್ದ ವಿಮಾನ (6ಇ-1052) ನಾಲ್ಕು ಗಂಟೆ ಪ್ರಯಾಣದ ಬಳಿಕ ಸಂಜೆ 6.30ಕ್ಕೆ ಮುಂಬೈ ತಲುಪಿದೆ. ವಿಮಾನ ನಿಲ್ದಾಣದಿಂದ ವೆಸ್ಟ್‌ಬರ್ಗ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 20 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಆಧಾರದಲ್ಲಿ ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆತನಿಗೆ ಜಾಮೀನು ನೀಡಿದೆ.

ವಿಮಾನದಲ್ಲಿ ಪ್ರಯಾಣಿಕರಿಗೆ ಊಟ ನೀಡುವ ವೇಳೆ ಈತ ಅಸಭ್ಯವಾಗಿ ವರ್ತಿಸಲು ಆರಂಭಿಸಿದ ಎನ್ನಲಾಗಿದೆ. ವಿಮಾನ ಮುಂಬೈ ನಿಲ್ದಾಣದಲ್ಲಿ ಇಳಿಯುವವರೆಗೂ ಈತನ ಚೇಷ್ಟೆ ಮುಂದುವರಿದಿತ್ತು. ಒಂದು ಹಂತದಲ್ಲಿ 24 ವರ್ಷದ ವಿಮಾನ ಸಿಬ್ಬಂದಿ ಕ್ಯಾಪ್ಟನ್‌ಗೆ ದೂರು ನೀಡಿ, ಕ್ಯಾಪ್ಟನ್ ವೆಸ್ಟ್‌ಬರ್ಗ್ ವಿರುದ್ಧ ಕೆಂಪು ಎಚ್ಚರಿಕೆ ಕಾರ್ಡ್ ನೀಡಲಾಯಿತು.

"ಊಟ ನೀಡುವ ವೇಳೆ ಚಿಕನ್ ಊಟವನ್ನು ನೀಡಿ ಪಿಓಎಸ್ ಮೆಷಿನ್ ಮೂಲಕ ಹಣ ಪಡೆಯಲು ಎಟಿಎಂ ಕಾರ್ಡ್ ಕೇಳಿದೆ. ಕಾರ್ಡ್ ಸ್ವೈಪ್ ಮಾಡುವ ನೆಪದಲ್ಲಿ ಆತ ನನ್ನ ಕೈ ಹಿಡಿದುಕೊಂಡ. ನಾನು ಕೈ ಹಿಂದಕ್ಕೆ ಎಳೆದುಕೊಂಡು ಪಿನ್ ನಮೂದಿಸಲು ಹೇಳಿದೆ. ಈ ಬಾರಿ ಆತ ಎಲ್ಲೆ ಮೀರಿದ.. ಇತರ ಪ್ರಯಾಣಿಕರ ಎದುರೇ ಎದ್ದು ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ. ಈತನ ಅಸಭ್ಯ ವರ್ತನೆ ಬಗ್ಗೆ ಕೂಗಿಕೊಂಡಾಗ ತನ್ನ ಆಸನಕ್ಕೆ ಮರಳಿದ" ಎಂದು ಕಿರುಕುಳಕ್ಕೆ ಒಳಗಾದ ಸಿಬ್ಬಂದಿ ದೂರಿದ್ದಾರೆ.

share
Next Story
X