Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ಸೂಕ್ತ...

ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ಸೂಕ್ತ ಅಭ್ಯರ್ಥಿಗಳನ್ನು ಆರಿಸಿಯೇ ಪಟ್ಟಿ ಬಿಡುಗಡೆ: ಸಚಿವ ಡಾ.ಕೆ.ಸುಧಾಕರ್

1 April 2023 4:16 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ಸೂಕ್ತ ಅಭ್ಯರ್ಥಿಗಳನ್ನು ಆರಿಸಿಯೇ ಪಟ್ಟಿ ಬಿಡುಗಡೆ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಎ.1: ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ವರಿಷ್ಠರು ಸೂಕ್ತ ಅಭ್ಯರ್ಥಿಗಳನ್ನು ಆರಿಸಿಯೆ ಪಟ್ಟಿಯನ್ನು ಬಿಡುಗಡೆ ಮಾಡುತ್ತಾರೆ. ಬೇರೆ ಪಕ್ಷಗಳಂತೆ ಇಲ್ಲಿ ಅವ್ಯವಸ್ಥಿತವಾಗಿ ಏನೂ ನಡೆಯುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎ.13ರ ತನಕ ಸಮಯ ಇದೆ. ಚುನಾವಣೆಯಲ್ಲಿ ರಣತಂತ್ರ ಮಾಡಬೇಕಾಗುತ್ತದೆ. ಎಲ್ಲರಿಗಿಂತ ಮೊದಲು ಪಟ್ಟಿ ಬಿಡುಗಡೆ ಮಾಡಿದಾಕ್ಷಣ ಗೆಲ್ಲುತ್ತೇವೆ ಎಂದರ್ಥವಲ್ಲ. ಬಿಜೆಪಿಗೆ ತನ್ನದೇ ಆದ ತಂತ್ರವಿದೆ ಎಂದರು. 

ಅಭ್ಯರ್ಥಿಗಳ ನಡುವೆ ಜಗಳ, ಚೇರ್ ಗಳು ಮುರಿದುಹೋಗುವಂತಹ ಘಟನೆಗಳು ಬೇರೆ ಪಕ್ಷಗಳಲ್ಲಿ ನಡೆಯುತ್ತಿದೆ. ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ಎಲ್ಲವೂ ಶಿಸ್ತುಬದ್ಧವಾಗಿ ನಡೆಯುತ್ತದೆ. ಕಾಂಗ್ರೆಸ್‍ನಲ್ಲಿ ಯಾರೊ ಪ್ರಣಾಳಿಕೆಯನ್ನು ಬರೆದುಕೊಟ್ಟು, ಅದನ್ನು ಒಂದನೆ ಗ್ಯಾರಂಟಿ, ಎರಡನೆ ಗ್ಯಾರಂಟಿ ಎಂದು ಓದುತ್ತಾ ಹೋದರು ಎಂದು ಸುಧಾಕರ್ ಟೀಕಿಸಿದರು.

ಬಿಜೆಪಿ ಈ ರೀತಿ ಮಾಡಿಲ್ಲ. ಪ್ರಣಾಳಿಕೆ ರೂಪಿಸಲು ಬಿಜೆಪಿ ಜನರ ಮುಂದೆ ಹೋಗಿದೆ. ರೈತರು, ಸಣ್ಣ ಕೈಗಾರಿಕಾ ಉದ್ಯಮಿಗಳು, ಕಾರ್ಮಿಕರು ಮೊದಲಾದ ವರ್ಗದ ಜನರ ಕಷ್ಟಗಳನ್ನು ಆಲಿಸಿ, ಅದಕ್ಕೆ ಪೂರಕವಾಗಿ ಪ್ರಣಾಳಿಕೆ ರಚಿಸಲಾಗುತ್ತಿದೆ. ಬಿಜೆಪಿಗೂ ಕಾಂಗ್ರೆಸ್‍ಗೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚುನಾವಣೆಯಲ್ಲಿ ಎಂದೂ ಸೋತಿಲ್ಲ. ಅವರು ಎಲ್ಲಿ ನಿಂತರೂ ಗೆಲ್ಲುತ್ತಾರೆ. ಶಿಗ್ಗಾಂವಿಯಲ್ಲಿ ಪೂರಕವಾದ ವಾತಾವರಣ ಇದೆಯೇ, ಇಲ್ಲವೇ ಎಂದು ಯಾರೂ ಹೇಳಿಲ್ಲ. ಶಿಗ್ಗಾಂವಿಯಲ್ಲಿ ಸ್ಪರ್ಧಿಸಿದರೆ ಅತಿ ಹೆಚ್ಚು ಮತಗಳು ಬೊಮ್ಮಾಯಿಗೆ ದೊರೆಯುತ್ತದೆ. ಬೊಮ್ಮಾಯಿ ವಿರುದ್ಧ ನಿಂತುಕೊಂಡರೆ ವಿನಯ್ ಕುಲಕರ್ಣಿ ದೊಡ್ಡ ಅಂತರದಲ್ಲೆ ಸೋಲುತ್ತಾರೆ ಎಂದು ಸುಧಾಕರ್ ತಿಳಿಸಿದರು.

ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಕಾರವೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್‍ನಲ್ಲಿ ಯಾವುದೆ ಚಟುವಟಿಕೆ ನಡೆಯುತ್ತಿಲ್ಲ. ಬಿಜೆಪಿಯ ಕಾರ್ಯಕರ್ತರು ಬಹಳ ಉತ್ಸಾಹದಲ್ಲಿದ್ದಾರೆ. ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಯಾವಾಗಲೂ ಆಡಳಿತ ವಿರೋಧಿ ಅಲೆ ಇರುತ್ತದೆ. ಆದರೆ ಈ ಬಾರಿ ಅದನ್ನು ಮೀರಿ ಪಕ್ಷಕ್ಕೆ ಬೆಂಬಲ ದೊರೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X