Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನನಗೆ ಈ ಹತ್ಯೆ ಆಘಾತ ಉಂಟು ಮಾಡಿದೆ:...

ನನಗೆ ಈ ಹತ್ಯೆ ಆಘಾತ ಉಂಟು ಮಾಡಿದೆ: ಸಾತನೂರು ಪ್ರಕರಣದ ಆರೋಪಿಗಳ ಬಂಧನಕ್ಕೆ ಎಚ್ ಡಿಕೆ ಒತ್ತಾಯ

2 April 2023 7:41 PM IST
share
ನನಗೆ ಈ ಹತ್ಯೆ ಆಘಾತ ಉಂಟು ಮಾಡಿದೆ: ಸಾತನೂರು ಪ್ರಕರಣದ ಆರೋಪಿಗಳ ಬಂಧನಕ್ಕೆ ಎಚ್ ಡಿಕೆ ಒತ್ತಾಯ

ಬೆಂಗಳೂರು, ಎ. 2: ‘ಕನಕಪುರ ತಾಲೂಕಿನ ಸಾತನೂರು ಬಳಿ ಜಾನುವಾರು ಸಾಗಣೆ ಮಾಡುತ್ತಿದ್ದ ಕಾರಣಕ್ಕೆ ಯುವಕನೊಬ್ಬ ಹತ್ಯೆಗೀಡಾಗಿರುವುದು ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಮೂರೂವರೆ ವರ್ಷದಲ್ಲಿ ಬಿಜೆಪಿ ಸರಕಾರ ವ್ಯವಸ್ಥಿತವಾಗಿ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆಯೇ ಕಾರಣ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಜಾನುವಾರು ಸಾಗಿಸುತ್ತಿದ್ದಾನೆ ಎಂದರೆ ಆತನನ್ನು  ಹಿಡಿದು ಪೊಲೀಸರಿಗೆ ಒಪ್ಪಿಸಬಹುದಿತ್ತು ಅಥವಾ ಮಾಹಿತಿ ನೀಡಬಹುದಿತ್ತು. ಅದರ ಹೊರತಾಗಿ ಹತ್ಯೆ ಮಾಡುವುದು ಎಂದರೆ ಅರ್ಥವೇನು? ಚುನಾವಣೆ ಹೊತ್ತಿನಲ್ಲಿ ಇದರ ಹಿಂದಿರುವ ಷಡ್ಯಂತ್ರ ಎಂಥದ್ದು ಎಂದು ಯಾರಿಗಾದರೂ ಅರ್ಥ ಆಗುವಂತದ್ದೇ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಎಲ್ಲಿಗೆ ಬಂದು ನಿಂತಿದೆ?’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಯುವಕನ ಕೊಲೆಯಾದ ರಾತ್ರಿ ಆರೋಪಿ ಮತ್ತವನ ಸಹಚರರು ರಸ್ತೆಯಲ್ಲಿ ಕ್ರಿಕೆಟ್ ಬ್ಯಾಟುಗಳನ್ನು ಹಿಡಿದು ಗೋ ರಕ್ಷಕನ ಸೋಗು ಹಾಕಿಕೊಂಡು ಪಹರೆ ಕಾಯುವ ನಾಟಕದ ವಿಡಿಯೋ ಮಾಡಿ ತನ್ನ ಜಾಲತಾಣದಲ್ಲಿಯೇ ಹಾಕಿಕೊಂಡಿದ್ದಾನೆ. ಅವರ ಉದ್ದೇಶವೇ ಬೇರೆ ಇತ್ತು ಎನ್ನುವುದು ಸ್ಪಷ್ಟ. ಇದಕ್ಕಿಂತ ಸಾಕ್ಷಿ ಬೇಕೆ? ಕೂಡಲೇ ಪೊಲೀಸರು ಆರೋಪಿಗಳನ್ನು ಬಂಧಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

‘ರಾತ್ರಿ ಹೊತ್ತು ಇವರು ರಸ್ತೆಯಲ್ಲಿ ಕ್ರಿಕೆಟ್ ಬ್ಯಾಟುಗಳನ್ನಿಡಿದುಕೊಂಡು ಗಸ್ತು ತಿರುಗುತ್ತಿದ್ದರು ಎಂದರೆ, ಇವರಿಗೆ ಪೊಲೀಸರ ಮೌನ ಅನುಮತಿ ಇತ್ತಾ? ಇಲ್ಲವೇ, ಇವರೇನು ಮಫ್ತಿ ಪೊಲೀಸರಾ? ಅಥವಾ ಗೋ ರಕ್ಷಣೆ ನೆಪದಲ್ಲಿ ದರೋಡೆಗೆ ಹೊಂಚು ಹಾಕಿ ಕೂತಿದ್ದರಾ? ಈ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ’ ಎಂದು ಅವರು ಹೇಳಿದ್ದಾರೆ.

‘ನಿಜಕ್ಕಾದರೆ, ಗೋ ಸಂಕ್ಷಣೆಯ ಸೋಗಿನ ಈ ಸೋಗಲಾಡಿಗಳಿಗೆ ಆಶ್ರಯ, ಮೇವು ಇಲ್ಲದೆ ಬೀದಿಪಾಲಾಗಿರುವ ಅನಾಥ ಗೋವುಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಆದರೆ, ಜಾತಿ ಧರ್ಮಗಳ ನಡುವೆ ಬೆಂಕಿ ಇಟ್ಟು ಚಳಿ ಕಾಯಿಸಿಕೊಳ್ಳುವುದೇ ಇವರ ಜಾಯಮಾನ. ಪೊಲೀಸ್ ವ್ಯವಸ್ಥೆ ಗಾಢ  ನಿದ್ದೆಯಲ್ಲಿದೆಯಾ?’ ಎಂದು ಅವರು ಕಿಡಿಕಾರಿದ್ದಾರೆ.

‘ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಈ ಘಟನೆ ನಡೆದಿದೆ. ರಾಜ್ಯದಲ್ಲಿ ಕೋಮು ಸೌಹಾರ್ದ ಕದಡಿ ಹಿಂಸಾಚಾರ ಸೃಷ್ಟಿಸುವುದು ಮತ್ತು ಚುನಾವಣೆ ಹೊತ್ತಿನಲ್ಲಿ ಕರ್ನಾಟಕವನ್ನು ಕದಡುವುದೇ ಇವರ ದುರುದ್ದೇಶ ಆಗಿರುವಂತಿದೆ. ನನಗೆ ಈ ಹತ್ಯೆ ಆಘಾತ ಉಂಟು ಮಾಡಿದೆ’

-ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

ಕನಕಪುರ ತಾಲೂಕಿನ ಸಾತನೂರು ಬಳಿ ಜಾನುವಾರು ಸಾಗಣೆ ಮಾಡುತ್ತಿದ್ದ ಕಾರಣಕ್ಕೆ ಯುವಕನೊಬ್ಬ ಹತ್ಯೆಗೀಡಾಗಿರುವುದು ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಕಳೆದ ಮೂರೂವರೆ ವರ್ಷದಲ್ಲಿ @BJP4Karnataka ಸರಕಾರ ವ್ಯವಸ್ಥಿತವಾಗಿ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆಯೇ ಕಾರಣ.1/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 2, 2023

ಜಾನುವಾರು ಸಾಗಿಸುತ್ತಿದ್ದಾನೆ ಎಂದರೆ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬಹುದಿತ್ತು ಅಥವಾ ಮಾಹಿತಿ ನೀಡಬಹುದಿತ್ತು. ಅದರ ಹೊರತಾಗಿ ಹತ್ಯೆ ಮಾಡುವುದು ಎಂದರೆ ಅರ್ಥವೇನು? ಚುನಾವಣೆ ಹೊತ್ತಿನಲ್ಲಿ ಇದರ ಹಿಂದಿರುವ ಷಡ್ಯಂತ್ರ ಎಂಥದ್ದು ಎಂದು ಯಾರಿಗಾದರೂ ಅರ್ಥ ಆಗುವಂತದ್ದೇ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಎಲ್ಲಿಗೆ ಬಂದು ನಿಂತಿದೆ? 2/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 2, 2023
share
Next Story
X