ಮತ ಚಲಾವಣೆ ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿ: ಡಾ. ಆಶಾಲತಾ

ಮಂಗಳೂರು : ಪ್ರಜಾಪ್ರಭುತ್ವದಲ್ಲಿ ಹದಿನೆಂಟು ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರೀಕನು ಅತ್ಯಂತ ಜವಾಬ್ದಾರಿ ಯುತವಾಗಿ ಮತ ಚಲಾಯಿಸಬೇಕು ಎಂದು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಉಪನ್ಯಾಸಕಿ ಡಾ.ಆಶಾಲತಾ ಪಿ. ಹೇಳಿದ್ದಾರೆ.
ಶ್ರೀ ಗೋಕರ್ಣನಾಥೇಶ್ವರ ಕಾಲೇಜು, ಗಾಂಧಿನಗರ ಮಂಗಳೂರು ಇದರ ಐಕ್ಯೂಎಸಿ, ಎನ್.ಎಸ್.ಎಸ್ ಮತ್ತು ಸ್ವೀಪ್ ನ ಸಹಯೋಗದಲ್ಲಿ ಇತ್ತೀಚೆಗೆ ಕಾಲೇಜಿನಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಪ್ರಾಂಶುಪಾಲ ಡಾ. ಆಶಾಲತಾ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡೀನ್ ಅಕಾಡೆಮಿಕ್ ಡಾ. ಉಮ್ಮಪ್ಪ ಪೂಜಾರಿ, ರಾಜ್ಯಶಾಸ್ತ್ರ ಉಪನ್ಯಾಸಕ ಸಂದೀಪ್ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.
ಎನ್.ಎಸ್.ಎಸ್ ಯೋಜನಾಧಿಕಾರಿ ಯತೀನ್ ಸ್ವಾಗತಿಸಿದರು. ಅಕ್ಷಿತಾ ವಂದಿಸಿದರು. ವೈಷ್ಣವಿ ಕಾರ್ಯಕ್ರಮ ನಿರೂಪಿಸಿದರು.
Next Story