Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಪಿಸಿಸಿ ವಕ್ತಾರ ಲಕ್ಷ್ಮಣ್, ರಮೇಶ್...

ಕೆಪಿಸಿಸಿ ವಕ್ತಾರ ಲಕ್ಷ್ಮಣ್, ರಮೇಶ್ ಬಾಬು ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು: ಎನ್.ಆರ್.ರಮೇಶ್

2 April 2023 10:56 PM IST
share
ಕೆಪಿಸಿಸಿ ವಕ್ತಾರ ಲಕ್ಷ್ಮಣ್, ರಮೇಶ್ ಬಾಬು ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು: ಎನ್.ಆರ್.ರಮೇಶ್

ಬೆಂಗಳೂರು, ಎ.2: ‘ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರ ಎಂ.ಲಕ್ಷ್ಮಣ್ ಮತ್ತು ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ನನ್ನ ಬಗ್ಗೆ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಿದ್ದು, ಅವರ ವಿರುದ್ಧ ಮಾನನಷ್ಟ ಮೊಕದ್ದಮೆಗಳ ದಾಖಲಿಸಲಾಗುವುದು’ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ತಿಳಿಸಿದ್ದಾರೆ.

ರವಿವಾರ ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ಯಡಿಯೂರು ವಾರ್ಡಿನ ಪಾಲಿಕೆ ಸದಸ್ಯನಾಗಿ ನಾನು ಕಾರ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಮತ್ತು ನನ್ನ ಪತ್ನಿ ಕಾರ್ಯ ನಿರ್ವಹಿಸಿದ್ದ ಅವಧಿಯಲ್ಲಿ ವಾರ್ಡಿಗೆ 250 ಕೋಟಿ ರೂಪಾಯಿಗಳಷ್ಟು ಅನುದಾನ ಮಂಜೂರಾಗಿರುವುದಾಗಿ ಸತ್ಯಕ್ಕೆ ದೂರವಾದ ಸುಳ್ಳು ಮಾಹಿತಿಗಳನ್ನು ನೀಡಿರುತ್ತಾರೆ. ಆದರೆ ವಾಸ್ತವವಾಗಿ 2010-11 ರಿಂದ 14 ವರ್ಷಗಳ ಅವಧಿಯಲ್ಲಿ ಯಡಿಯೂರು ವಾರ್ಡಿಗೆ ಬಿಡುಗಡೆಯಾಗಿರುವ ವಿಧದ ಅನುದಾನಗಳ ಒಟ್ಟು ಮೊತ್ತ 87 ಕೋಟಿ 42 ಲಕ್ಷ ರೂಪಾಯಿಗಳು ಮಾತ್ರ ಆಗಿದೆ ಎಂದರು.

ಯಡಿಯೂರು ವಾರ್ಡ್ ನಲ್ಲಿ ಅನುಷ್ಠಾನಗೊಂಡಿರುವುದು ಕೇವಲ ಐದಾರು ದಶಕಗಳ ಕಾಲ ಶಾಶ್ವತವಾಗಿ ಸಾರ್ವಜನಿಕರ ಸೇವೆಗೆ ನಿಲುಕುವಂತಹ ಯೋಜನೆಗಳು ಮಾತ್ರವೇ ಎಂಬ ದಾಖಲೆಗಳು ಎಂ. ಲಕ್ಷ್ಮಣ್ ಮತ್ತು ರಮೇಶ್ ಬಾಬು ಅವರಿಗೆ ಸಿಕ್ಕಂತಿಲ್ಲ. ಯಡಿಯೂರು ವಾರ್ಡ್ ವ್ಯಾಪ್ತಿಯಲ್ಲಿ 15 ಉದ್ಯಾನವನಗಳು ಮತ್ತು 11 ವಿವಿಧ ಯೊಜನೆಗಳ ಕಟ್ಟಡಗಳು ಮತ್ತು ಬಹು ಉದ್ದೇಶಗಳ ಕಟ್ಟಡಗಳನ್ನು ನಿರ್ಮಿಸಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಯಡಿಯೂರು ಕೆರೆ ಅಭಿವೃದ್ಧಿಗೆ 16 ಕೋಟಿ ರೂಪಾಯಿಗಳಷ್ಟು ಹಣ ಬಿಡುಗಡೆಯಾಗಿದೆ ಎಂಬ ಸುಳ್ಳು ಮಾಹಿತಿಯನ್ನು ನೀಡಿರುತ್ತಾರೆ. ಆದರೆ, ಯಡಿಯೂರು ಕೆರೆ ಅಭಿವೃದ್ಧಿಗೆ ಕಳೆದ 14 ವರ್ಷಗಳ ಅವಧಿಯಲ್ಲಿ ಸ್ವಾಮಿ ವಿವೇಕಾನಂದ ಪ್ರತಿಮೆ ನಿರ್ಮಾಣವೂ ಸೇರಿದಂತೆ ಬಿಡುಗಡೆಯಾಗಿರುವುದು ಕೇವಲ 4 ಕೋಟಿ 15 ಲಕ್ಷ ರೂಪಾಯಿಗಳು ಮಾತ್ರ ಎಂದು ಅವರು ಮಾಹಿತಿ ನೀಡಿದ್ದಾರೆ.

14 ವರ್ಷಗಳಿಂದ ನಿರಂತರವಾಗಿ ಕಾಂಗ್ರೆಸ್ ಪಕ್ಷದ ಆಡಳಿತಾವಧಿಯಲ್ಲಿ ನಡೆದಿರುವ 122ಕ್ಕೂ ಹೆಚ್ಚು ಬೃಹತ್ ಹಗರಣಗಳನ್ನು ದಾಖಲೆಗಳ ಸಹಿತ ಬಹಿರಂಗಪಡಿಸಿ ಹಲವಾರು ತನಿಖಾ ಸಂಸ್ಥೆಗಳಲ್ಲಿ ದೂರುಗಳನ್ನು ದಾಖಲಿಸಿರುವ ಹಾಗೂ ಬಯಲು ಮಾಡಿರುವ ಇಂತಹ ಹಗರಣಗಳ ಪೈಕಿ 28 ಪ್ರಕರಣಗಳನ್ನು ಕಾನೂನು ಹೋರಾಟದಲ್ಲಿ ಗೆಲ್ಲುವ ಮೂಲಕ ಸುಮಾರು 8,600 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಸರಕಾರಿ ಆಸ್ತಿ ಪಾಲಿಕೆಗೆ ವಾಪಸ್ಸು ಬರುವಂತೆ ಮಾಡಿರುವ ಹಿನ್ನೆಲೆಯಲ್ಲಿ, ಕಂಗೆಟ್ಟಿರುವ ಭ್ರಷ್ಟ ಕಾಂಗ್ರೆಸ್ಸಿಗರು ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

ಹಾಗಾಗಿ ನನ್ನ ವಿರುದ್ಧ ಸುಳ್ಳು ಆಪಾಧನೆಯನ್ನು ಮಾಡುವ ಮೂಲಕ ಸಮಾಜದಲ್ಲಿ ನನಗೆ ವೈಯಕ್ತಿಕ ಮಾನ ನಷ್ಟವನ್ನು ಉಂಟು ಮಾಡಲು ಪ್ರಯತ್ನಿಸಿರುವ ಎಂ. ಲಕ್ಷ್ಮಣ್ ಮತ್ತು ರಮೇಶ್ ಬಾಬು ರವರ ವಿರುದ್ಧ ಬೆಂಗಳೂರು, ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿಯ ನ್ಯಾಯಾಲಯಗಳಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ಮಾನ ನಷ್ಟ ಮೊಕದ್ದಮೆಗಳನ್ನು ನನ್ನ ವಕೀಲರ ಮೂಲಕ ಇನ್ನು ನಾಲ್ಕು ದಿನಗಳೊಳಗಾಗಿ ಹೂಡಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

share
Next Story
X