'ಕ್ರಿಕೆಟ್ ನನ್ನ ಇಷ್ಟದ ಆಟ, ಆರ್‌ಸಿಬಿ ನನ್ನ ಹೆಮ್ಮೆಯ ತಂಡ': IPL ಪಂದ್ಯ ವೀಕ್ಷಿಸುವ ಫೋಟೊ ಹಂಚಿಕೊಂಡ ಸಿದ್ದರಾಮಯ್ಯ
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಣ ಐಪಿಎಲ್ ಪಂದ್ಯ ನಡೆಯುತ್ತಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಕ್ರೀಡಾಂಗಣಕ್ಕೆ ತೆರಳಿ ಪಂದ್ಯ ವೀಕ್ಷಣೆ ಮಾಡಿದ್ದಾರೆ.
ಈ ಕುರಿತ ಫೋಟೊ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ''ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್.ಸಿ.ಬಿ ಹುಡುಗರ ಜೊತೆಗಿದೆ.. ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ ಯಾವಾಗಲೂ ನಮ್ಮ ಆರ್‌ಸಿಬಿಗೆ'' ಎಂದು ಬರೆದುಕೊಂಡಿದ್ದಾರೆ.
ಮುಂಬೈ ತಂಡವನ್ನು ಮಣಿಸಿದ ಆರ್‌ಸಿಬಿ
ನಾಯಕ ಎಫ್‌ಡು ಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟೂರ್ನಿಯ 5ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 8 ವಿಕೆಟ್‌ಗಳಿಂದ ಜಯಭೇರಿ ಬಾರಿಸಿದೆ.
ಇದನ್ನೂ ಓದಿ: ಬೆಂಗಳೂರು- ಮೈಸೂರು ಹೆದ್ದಾರಿ ಟೋಲ್ ಪ್ಲಾಜಾ ತೆರವಿಗೆ ಚಿಂತನೆ
ಕ್ರಿಕೆಟ್ ನನ್ನ ಇಷ್ಟದ ಆಟ,
— Siddaramaiah (@siddaramaiah) April 2, 2023
ಆರ್‌ಸಿಬಿ ನನ್ನ ಹೆಮ್ಮೆಯ ತಂಡ..
ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್.ಸಿ.ಬಿ ಹುಡುಗರ ಜೊತೆಗಿದೆ..
ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ.
ಓರ್ವ ಕನ್ನಡಿಗನಾಗಿ ನನ್ನ ಬೆಂಬಲ ಯಾವಾಗಲೂ ನಮ್ಮ ಆರ್‌ಸಿಬಿಗೆ.@RCBTweets #RCBvMI pic.twitter.com/KgCOrbsNle