ಮತದಾರರಿಗೆ ಆಮಿಷ ಆರೋಪ: ಬಿಜೆಪಿ ನಾಯಕ ಕೃಷ್ಣಯ್ಯ ಶೆಟ್ಟಿ ವಿರುದ್ಧ ಎಫ್‍ಐಆರ್

ಬೆಂಗಳೂರು, ಎ.3: ಮತದಾರರಿಗೆ ಹಂಚಲು ದಿನಬಳಕೆ ವಸ್ತುಗಳ ಕಿಟ್ ಸಂಗ್ರಹಿಸಿಟ್ಟುಕೊಂಡಿದ್ದ ಆರೋಪದಡಿ ಬಿಜೆಪಿ ನಾಯಕ, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಇಲ್ಲಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಚುನಾವಣಾ ಅಧಿಕಾರಿ ಲಕ್ಷ್ಮಣ್ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಟೆಕೆಟ್ ಆಕಾಂಕ್ಷಿಯಾಗಿರುವ ಕೃಷ್ಣಯ್ಯ ಶೆಟ್ಟಿ ಅವರು ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಆಹಾರ ಸಾಮಗ್ರಿ ಸಂಗ್ರಹಿಸಿಟ್ಟಿದ್ದರು. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು, ಏಳೆಂಟು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಸದ್ಯಕ್ಕೆ ಚುನಾವಣಾಧಿಕಾರಿಗಳ ದೂರಿನನ್ವಯ ಮಲ್ಲೇಶ್ವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story







.jpeg)

