ಹಳ್ಳಕ್ಕೆ ಬಿದ್ದ ಆಟೋ: ವಿದ್ಯಾರ್ಥಿಗಳಿಗೆ ಗಾಯ

ಮಂಡ್ಯ, ಎ.3: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಆಟೋದಲ್ಲಿದ್ದ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕು ಅರೆಕೆರೆ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.
ಎಸೆಸೆಲ್ಸಿ ಪರೀಕ್ಷೆ ಬರೆದು ಅರಕೆರೆಯಿಂದ ತಮ್ಮ ಗ್ರಾಮ ಚಿಕ್ಕಅಂಕನಹಳ್ಳಿ ಗ್ರಾಮಕ್ಕೆ ಸುಮಾರು 15 ಮಂದಿ ಆಟೋದಲ್ಲಿ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅರಕೆರೆ ಸರಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಯಿತು. ಈ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





