Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ​ವಿಚಾರವಾದಿ ನರೇಂದ್ರ ನಾಯಕ್‌ಗೆ ಪೊಲೀಸ್...

​ವಿಚಾರವಾದಿ ನರೇಂದ್ರ ನಾಯಕ್‌ಗೆ ಪೊಲೀಸ್ ಭದ್ರತೆ ಮುಂದುವರಿಸಲು ಆಗ್ರಹ

3 April 2023 8:20 PM IST
share
​ವಿಚಾರವಾದಿ ನರೇಂದ್ರ ನಾಯಕ್‌ಗೆ ಪೊಲೀಸ್ ಭದ್ರತೆ ಮುಂದುವರಿಸಲು ಆಗ್ರಹ

ಮಂಗಳೂರು: ಅಖಿಲ ಭಾರತ ವಿಚಾರವಾದಿ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ, ವಿಚಾರವಾದಿ ಪ್ರೊ.ನರೇಂದ್ರ ನಾಯಕ್‌ಗೆ ಪೊಲೀಸ್ ಭದ್ರತೆ ಮುಂದುವರಿಸಲು ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಪ್ರಮುಖರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರನ್ನು ಸೋಮವಾರ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ನರೇಂದ್ರ ನಾಯಕ್ ಅವರು ಮೌಢ್ಯಾಚರಣೆಗಳನ್ನು ಬಯಲಿಗೆಳೆಯುವುದು, ವೈಜ್ಞಾನಿಕ ಮನೋಭಾವ ಮೂಡಿಸುವುದರಲ್ಲಿ ಕಳೆದ ಐವತ್ತು ವರ್ಷಗಳಿಂದ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ವೈಜ್ಞಾನಿಕ ಮನೋಭಾವ, ಜಾತ್ಯತೀತ ತಿಳುವಳಿಕೆಗಳನ್ನು ಸಮಾಜದಲ್ಲಿ ಮೂಡಿಸುವ ಕಾರಣಕ್ಕೆ ಪ್ರತಿಗಾಮಿ ಶಕ್ತಿಗಳಿಂದ ಹಲವು ಬಾರಿ ಅವರು ದಾಳಿಗಳಿಗೆ ಗುರಿಯಾಗಿದ್ದಾರೆ. ಸಮಾಜದಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸುವ ಕಾರಣಕ್ಕೆ ಬಲಪಂಥೀಯ ಶಕ್ತಿಗಳಿಂದ ಕೊಲೆಗೀಡಾದ ನರೇಂದ್ರ ದಾಬೋಳ್ಕರ್, ಗೋವಿಂದ ಪನ್ಸಾರೆ ಪ್ರೊ. ನರೇಂದ್ರ ನಾಯಕ್‌ರ ಸಹವರ್ತಿಗಳಾಗಿದ್ದರು. ರಾಜ್ಯದಲ್ಲಿ ಪ್ರೊ.ಕಲ್ಬುರ್ಗಿ, ಗೌರಿ ಲಂಕೇಶ್ ಕೊಲೆಯ ನಂತರ ಪ್ರೊ.ನರೇಂದ್ರ ನಾಯಕ್‌ರ ಜೀವಕ್ಕೆ ಅಪಾಯ ಇರುವುದು ಸರಕಾರದ ಗಮನಕ್ಕೆ ಬಂದು ಅವರಿಗೆ ಸರಕಾರದ ವತಿಯಿಂದ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಈಗ ಏಕಾಏಕಿ ಭದ್ರತೆಯನ್ನು ಹಿಂಪಡೆದ ಸುದ್ದಿ ಕೇಳಿ ಸಮಾನ ಮನಸ್ಕ, ಪ್ರಗತಿಪರರಿಗೆ ನಮಗೆ ಆತಂಕವಾಗಿದೆ. ಪ್ರೊ. ನರೇಂದ್ರ ನಾಯಕ್ ಈಗಲೂ ವೈಜ್ಞಾನಿಕ ಮನೋಭಾವ ಮೂಡಿಸುವ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ. ಅದಲ್ಲದೆ ಸ್ಥಳೀಯವಾಗಿ ಹಲವು ಸ್ಥಾಪಿತ ಹಿತಾಸಕ್ತಿಗಳ ವಿರುದ್ದದ ಹೋರಾಟದಲ್ಲಿ ತೊಡಗಿಸಿಕೊಂಡಿರುತ್ತಾರೆ. ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆತನ ಅಸಹಾಯಕ ಕುಟುಂಬಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಆ ಕಾರಣಕ್ಕೂ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರಿಗೆ ನೀಡಿದ್ದ ಪೊಲೀಸ್ ಭದ್ರತೆ ವಾಪಸ್ ಪಡೆದಿರುವುದು ಸರಿಯಾದ ನಿರ್ಧಾರ ಅಲ್ಲ. ಇದರಿಂದ ಅವರ ಪ್ರಾಣವನ್ನು ಅಪಾಯಕ್ಕೆ ಒಡ್ಡಿದಂತಾಗಿದೆ. ಹಣ ಪಾವತಿಸಿ ರಕ್ಷಣೆ ಪಡೆದುಕೊಳ್ಳುವುದು ಅವರಿಂದ ಸಾಧ್ಯವಿಲ್ಲ. ಹಾಗಾಗಿ ಸರಕಾರ ಅವರಿಗೆ ಈ ಹಿಂದಿನಂತೆ ಪೊಲೀಸ್ ಭದ್ರತೆಯನ್ನು ಒದಗಿಸಬೇಕು ಎಂದು ಒತ್ತಾಯಿಸಲಾಗಿದೆ.

ನಿಯೋಗದಲ್ಲಿ ಡಿವೈಎಫ್‌ಐ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ, ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಎಂ. ದೇವದಾಸ್, ರಘು ಎಕ್ಕಾರ್, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಿ. ಶೇಖರ್, ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ಸಾಮರಸ್ಯ ಬಳಗದ ಮಂಜುಳಾ ನಾಯಕ್, ವಿನಾಯಕ ಬಾಳಿಗ ಸಹೋದರಿ ಅನುರಾಧ ಬಾಳಿಗಾ, ಸಮುದಾಯ ಸಂಘಟನೆಯ ವಾಸುದೇವ ಉಚ್ಚಿಲ, ಸಮರ್ಥ್ ಭಟ್, ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ರೇವಂತ್ ಕದ್ರಿ, ಶಾಹಿದ್ ಅಫ್ರೀದ್, ಪ್ರಮಿಳಾ ದೇವಾಡಿಗ, ಅಸುಂತ ಡಿಸೋಜ, ಎಐವೈಎಫ್ ಸಂಘಟನೆಯ ಸುರೇಶ್, ಪ್ರಥಮ್ ಬಜಾಲ್ ಉಪಸ್ಥಿತರಿದ್ದರು.

share
Next Story
X