ಮಂಗಳೂರು: ಅಕ್ರಮ ಪಿಸ್ತೂಲ್ ಹೊಂದಿದ್ದ ಆರೋಪಿ ಸೆರೆ

ಮಂಗಳೂರು(Mangaluru): ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಕದ್ರಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಜಾರ್ಜ್ ಮಾರ್ಟಿಸ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಶಿಶಿರ್ ಎಂಬಾತ ಅಕ್ರಮವಾಗಿ ಒಂದು ಪಿಸ್ತೂಲ್ ಮತ್ತು ಬುಲೆಟ್ ಹೊಂದಿದ್ದ ಎನ್ನಲಾಗಿದೆ.
ಈ ಬಗ್ಗೆ ಮನೆಯ ಮಾಲಕ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಕದ್ರಿ ಪೊಲೀಸರು ಸೋಮವಾರ ಶಿಶಿರ್‌ನನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಪಿಸ್ತೂಲ್ ಪತ್ತೆಯಾಗಿದೆ.
ಕಳೆದ 5 ತಿಂಗಳಿನಿಂದ ಶಿಶಿರ್ ಈ ಮನೆಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. ತನಗೆ ಈ ಪಿಸ್ತೂಲ್‌ನ್ನು ತನ್ನ ಗೆಳೆಯ ನೀಡಿರುವುದಾಗಿ ಶಿಶಿರ್ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ. ಈ ಬಗ್ಗೆ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story