ಖಾಲಿ ಜಮೀನಿನಲ್ಲಿ ನವಜಾತ ಶಿಶು ಪತ್ತೆ

ಬೆಂಗಳೂರು, ಎ.5: ಹುಲ್ಲಹಳ್ಳಿಯ ಖಾಲಿ ಜಮೀನಿನಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿದ್ದು ಬನ್ನೇರುಘಟ್ಟ ಪೊಲೀಸರು ಶಿಶುವನ್ನು ರಕ್ಷಿಸಿದ್ದಾರೆ.
ಸಿದ್ದರೆಡ್ಡಿ ಎಂಬುವರ ಜಮೀನಿನಲ್ಲಿ ಮಗು ಅಳುತ್ತಿರುವ ಶಬ್ದ ಕೇಳಿದ ಸ್ಥಳೀಯರು ಹತ್ತಿರ ಹೋಗಿ ನೋಡಿದಾಗ ನವಜಾತ ಶಿಶು ಪತ್ತೆಯಾಗಿದೆ. ನಂತರ ಸ್ಥಳೀಯರು ಬನ್ನೇರುಘಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಶಿಶು ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಕವಿತಾ, ಇನ್ಸ್ ಪೆಕ್ಟರ್ ಉಮಾಮಹೇಶ್ ಶಿಶುವನ್ನು ಜಿಗಣಿ ಆಸ್ಪತ್ರೆಗೆ ಪ್ರಾಥಮಿಕ ಆರೈಕೆಗೆ ರವಾನಿಸಿದ್ದಾರೆ.
ನಂತರ ಶಿಶುವನ್ನು ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಹೆಚ್ಚಿನ ಆರೈಕೆಗೆ ಕಳುಹಿಸಿಕೊಡಲಾಗಿದೆ. ಈ ಕುರಿತಂತೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story