ಸಾಲಿಗ್ರಾಮ ಪಟ್ಟಣ ಪಂಚಾಯತ್: ಆಸ್ತಿ ತೆರಿಗೆ ಮೇಲೆ ಶೇ.5 ರಿಯಾಯಿತಿ
ಉಡುಪಿ, ಎ.5: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ಶೇ.3ರಷ್ಟು ಪರಿಷ್ಕರಿಸಲಾಗಿದ್ದು, ವಾಸ್ತವ್ಯ, ವಾಣಿಜ್ಯ ಕಟ್ಟಡ ಹಾಗೂ ಖಾಲಿ ನಿವೇಶನಗಳ ಮಾಲಕರು ಎ.30ರೊಳಗೆ ತೆರಿಗೆ ಪಾವತಿಸಿದ್ದಲ್ಲಿ ಶೇ.5ರಷ್ಟು ರಿಯಾಯಿತಿ ಪಡೆಯಬಹುದು. ಜೂನ್ 1ರ ನಂತರ ಪಾವತಿಸಿದ್ದಲ್ಲಿ ತಿಂಗಳಿಗೆ ಶೇ.2ರಷ್ಟು ದಂಡ ವಿಧಿಸಲಾಗುತ್ತದೆ.
ಸಾರ್ವಜನಿಕರು ಎ.30ರ ಒಳಗೆ ಆಸ್ತಿ ತೆರಿಗೆ ಪಾವತಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ನಳ್ಳಿ ನೀರಿನ ಶುಲ್ಕ ಮತ್ತು ಮಾಸಿಕ ಅಂಗಡಿ ಶುಲ್ಕ ಬಾಕಿಯನ್ನು ನಿಗದಿತ ಅವಧಿಯಲ್ಲಿ ಪಾವತಿಸಿ, ಪಟ್ಟಣ ಪಂಚಾಯತ್‌ನೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story