Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಸ್ಲಿಮರಿಗೆ 2 ‘ಬಿ’ ಮೀಸಲಾತಿ ಪುನರ್...

ಮುಸ್ಲಿಮರಿಗೆ 2 ‘ಬಿ’ ಮೀಸಲಾತಿ ಪುನರ್ ಸ್ಥಾಪಿಸಲು ಒತ್ತಾಯ

6 April 2023 12:08 AM IST
share
ಮುಸ್ಲಿಮರಿಗೆ 2 ‘ಬಿ’ ಮೀಸಲಾತಿ ಪುನರ್ ಸ್ಥಾಪಿಸಲು ಒತ್ತಾಯ

ಬೆಂಗಳೂರು, ಎ.5: ಮುಸ್ಲಿಮ್ ಸಮುದಾಯವನ್ನು ಒಬಿಸಿಯಿಂದ ತೆಗೆದು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿಸಿರುವರಿಂದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸಮುದಾಯ ಮತ್ತಷ್ಟು ಹಿಂದುಳಿಯಲಿದ್ದು, ಮುಸ್ಲಿಮರಿಗೆ ನೀಡಲಾಗುತ್ತಿದ್ದ 2 ‘ಬಿ’ ಮೀಸಲಾತಿಯನ್ನು ಪುನರ್ ಸ್ಥಾಪಿಸಿಬೇಕು ಎಂದು ವಿದ್ಯಾರ್ಥಿ ಸಂಘಟನೆಗಳು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದವು.

ಬುಧವಾರ ಪ್ರೆಸ್‍ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಸ್‍ಐಓ ರಾಜ್ಯಾಧ್ಯಕ್ಷ ಜೀಶಾ ಅಖಿಲ್, ‘ಕರ್ನಾಟಕದ ಸಚಿವ ಸಂಪುಟವು ಏಕಾಏಕಿಯಾಗಿ ಮುಸ್ಲಿಮರನ್ನು ಹಿಂದುಳಿದ ವರ್ಗ 2ಬಿ ಮೀಸಲಾತಿಯನ್ನು ರದ್ದುಗೊಳಿಸಿ ಅವರನ್ನು ಇಡಬ್ಲ್ಯೂಎಸ್ ಪ್ರವರ್ಗಕ್ಕೆ ಸೇರಿಸಿದೆ. ಇದು ಈ ಸಮುದಾಯಕ್ಕೆ ಮಾಡಿದ ಕಾನೂನು ಬದ್ಧ ಅಪಚಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಪದೇ ಪದೇ ಭೇಟಿ ನೀಡುತ್ತಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಈ ಇಂಡಿಯಾ ರೈಸಿಂಗ್ ಸಮ್ಮಿಟ್‍ನಲ್ಲಿ ಮಾತನಾಡುತ್ತಾ, ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿ ನೀಡಲಾಗುತ್ತಿದೆ ಎಂಬ ಸುಳ್ಳು ಮಾಹಿತಿಯನ್ನು ನೀಡುತ್ತಾರೆ. ಆದರೆ, ಆಂಧ್ರ ಪ್ರದೇಶದಲ್ಲಿ ಮುಸ್ಲಿಮರಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ನ್ಯಾಯಾಲಯಗಳು ರದ್ದುಗೊಳಿಸಿದ್ದು, ಮೀಸಲಾತಿಯನ್ನು ನೀಡಲು ಪಾಲಿಸಬೇಕಿದ ಪ್ರಕ್ರಿಯೆಯನ್ನು ಪಾಲಿಸಲಾಗಿಲ್ಲ ಹಾಗೂ ಜನರು ಮತಾಂತರವಾಗುವ ಸಂಭವದ ಕಾರಣಗಳಿಗಾಗಿ, ಆದರೆ ಕರ್ನಾಟಕದಲ್ಲಿ ಇದಕ್ಕೆ ಬೇರೆಯದೇ ಹಿನ್ನಲೆಯಿದೆ ಎಂದು ತಿಳಿಸಿದರು.

ಯಾವುದೇ ಅಧ್ಯಯನವನ್ನು ಕೈಗೊಳ್ಳದ ಮತ್ತು ಯಾವ ಸಮಿತಿಯ ಶಿಫಾರಸ್ಸಿಲ್ಲದ ಮುಸ್ಲಿಮರಿಗೆ ಮೀಸಲಾತಿಯನ್ನು ಒದಗಿಸಲಾಗಿದೆ ಎಂದು ಹೇಳುತ್ತಿರುವುದು ಸುಳ್ಳು, ಇಲ್ಲಿವರೆಗೆ ಈ ಸುಳ್ಳು ಹೇಳಿಕೆಗಳು ಸಂಘ ಪರಿವಾರದ ವಾದಗಳಲ್ಲಿ ಮಾತ್ರವೇ ಬಿತ್ತರವಾಗುತ್ತಿದ್ದವು. ಈಗ ಸರಕಾರಿ ಆದೇಶಗಳ ಮೂಲಕವೇ ಬಿತ್ತರಗೊಳ್ಳುತ್ತಿದೆ. ಮಾತ್ರವಲ್ಲ, ಇದೇ ಸುಳ್ಳನ್ನು ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿಯೂ ಕೂಡ ನುಡಿಯುತ್ತಿದ್ದಾರೆ ಎಂದು ಜೀಶಾ ಅಖಿಲ್ ಆಪಾದಿಸಿದರು.

ಈ ನಿಟ್ಟಿನಲ್ಲಿ, ಎಲ್ಲಾ ವರ್ಗದ ವಿದ್ಯಾರ್ಥಿ ಸಂಘಟನೆಗಳು ಬಿಜೆಪಿ ಸರಕಾರದ ತನ್ನ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸುತ್ತವೆ. ಇಲ್ಲದಿದ್ದಲ್ಲಿ, ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಹಾಗೂ ಕರ್ನಾಟಕದ ಸಾಮಾಜಿಕ ನ್ಯಾಯದ ಇತಿಹಾಸಕ್ಕೆ ಧಕ್ಕೆಯಾಗಲಿದೆ. ಇದರಿಂದಾಗಿ ಬಿಜೆಪಿಯ ಅವನತಿಯ ಹಾದಿಯ ಪ್ರಾರಂಭವಾಗುತ್ತದೆ ಎಂದರು.

ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ಹಾಗೂ ಸಂವಿಧಾನಿಕ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ ಹಾಗೂ ಭ್ರಾತೃತ್ವವನ್ನು ಗೌರವಿಸುವ ವಿದ್ಯಾರ್ಥಿ ಸಂಘಟನೆಗಳು ಚುನಾವಣೆ ಸನ್ನಿಹಿತವಾಗುತ್ತಿರುವ ಸಂದರ್ಭದಲ್ಲಿ ಒಂದು ಸಮುದಾಯವನ್ನು ಮತ್ತೊಂದರ ವಿರುದ್ಧ ಎತ್ತಿಕಟ್ಟಲು ಬಿಜೆಪಿಯು ನಡೆಸಿರುವ ಹುನ್ನಾರವನ್ನು ಅರಿತಿದ್ದೇವೆ ಹಾಗೂ ಕರ್ನಾಟಕದ ಜನತೆ, ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳು ಈ ಕೋಮು ಸಂಚನ್ನು ಮೀರಿ ಕುವೆಂಪು ಸಾರಿದ ವಿಶ್ವಮಾನವತೆಯನ್ನು ಎತ್ತಿಹಿಡಯಲಿದ್ದಾರೆ. ನಮ್ಮೆಲ್ಲಾ ವಿದ್ಯಾರ್ಥಿ ಸಂಘಟನೆಗಳು, ಎಲ್ಲ್ಲ ಸಮುದಾಯಗಳ ಜೊತೆಗೆ ಹೆಜ್ಜೆಯನ್ನಿರಿಸುತ್ತಲೇ, ಮೀಸಲಾತಿಯನ್ನೂ ಹಾಗೂ ಆ ಮೂಲಕ ಸಾಮಾಜಿಕ ನ್ಯಾಯವನ್ನೂ, ಮುಸ್ಲಿಮರಿಗೆ ಮಾತ್ರವಲ್ಲದೇ ಕರ್ನಾಟಕದ ಪ್ರತಿಯೊಬ್ಬರ ಕೈಗೆಟಕುವಂತೆ ಮಾಡಲು ಪಣತೊಡುತ್ತೇವೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿವಿಧ ವಿದ್ಯಾರ್ಥಿ ಸಂಘಟನೆಗಳ ಮುಖಂಡರಾದ ಸರೋವರ ಬೆಂಕಿಕೆರೆ, ಚಂದ್ರು, ಪೆರಿಯಾರ, ಐಸಾ, ಶಶಾಂಕ್ ಮುಂತಾದವರು ಉಪಸ್ಥಿತರಿದ್ದರು.

share
Next Story
X