ಅಭ್ಯರ್ಥಿಗಳ 2ನೇ ಪಟ್ಟಿ: ಬಿಜೆಪಿ , ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮೂವರಿಗೆ ಟಿಕೆಟ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಈ ಪಟ್ಟಿಯಲ್ಲಿ 42 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಮಾತ್ರ ಬಿಡುಗಡೆ ಮಾಡಿದ್ದು, ಬಾಕಿ 58 ಕ್ಷೇತ್ರಗಳು ಬಾಕಿಯಿವೆ.
ಇತ್ತೀಚೆಗೆ ಜೆಡಿಎಸ್ ಹಾಗೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಕೆಲವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಇತ್ತೀಚೆಗಷ್ಟೇ ಕೂಡ್ಲಿಗಿ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎನ್.ವೈ ಗೋಪಾಲಕೃಷ್ಣ ಅವರಿಗೆ ಮೊಣಕಾಲ್ಮೂರು ಕ್ಷೇತ್ರದ ಟಿಕೆಟ್ ನೀಡಲಾಗಿದೆ.
ಬಿಜೆಪಿ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಾಬು ರಾವ್ ಚಿಂಚನಸೂರ್ ಅವರಿಗೆ ಗುರಮಿಠ್‌ಕಲ್ ನಿಂದ ಟಿಕೆಟ್ ಘೋಷಿಸಲಾಗಿದೆ.
ಇನ್ನು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಗುಬ್ಬಿ ಕ್ಷೇತ್ರದ ಮಾಜಿ ಶಾಸಕ ಎಸ್. ಆರ್. ಶ್ರೀನಿವಾಸ್ ಗೆ ಗುಬ್ಬಿ ಕ್ಷೇತ್ರದಿಂದಲೇ ಟಿಕೆಟ್ ಘೋಷಿಸಿದೆ.
Next Story





