Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಲಸಿಗ ಕಾರ್ಮಿಕರ ಮೇಲಿನ ದಾಳಿಯ ನಕಲಿ...

ವಲಸಿಗ ಕಾರ್ಮಿಕರ ಮೇಲಿನ ದಾಳಿಯ ನಕಲಿ ವೀಡಿಯೋ ಪೋಸ್ಟ್‌ ಮಾಡಿದ್ದ ಯುಟ್ಯೂಬರ್‌ ಮೇಲೆ NSA ಹೇರಿದ ತಮಿಳುನಾಡು ಪೊಲೀಸರು

6 April 2023 1:41 PM IST
share
ವಲಸಿಗ ಕಾರ್ಮಿಕರ ಮೇಲಿನ ದಾಳಿಯ ನಕಲಿ ವೀಡಿಯೋ ಪೋಸ್ಟ್‌ ಮಾಡಿದ್ದ ಯುಟ್ಯೂಬರ್‌ ಮೇಲೆ NSA ಹೇರಿದ ತಮಿಳುನಾಡು ಪೊಲೀಸರು

ಚೆನ್ನೈ: ತಮಿಳುನಾಡಿನಲ್ಲಿ ವಲಸಿಗ ಕಾರ್ಮಿಕರ ಮೇಲಿನ ದಾಳಿಗಳದ್ದೆಂದು ಹೇಳಿಕೊಂಡು ನಕಲಿ ವೀಡಿಯೋಗಳನ್ನು ಪೋಸ್ಟ್‌ ಮಾಡಿದ ಆರೋಪ ಎದುರಿಸಿ ಬಂಧನಕ್ಕೊಳಗಾಗಿರುವ ಬಿಹಾರ ಮೂಲದ ಯುಟ್ಯೂಬರ್‌ ಮನೀಶ್‌ ಕಶ್ಯಪ್‌ನನ್ನು (Manish Kashyap) ತಮಿಳುನಾಡಿನಲ್ಲಿ ರಾಷ್ಟ್ರೀಯ ಭದ್ರತಾ ಕಾಯಿದೆಯಡಿ (NSA) ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮದುರೈ ಎಸ್‌ಪಿ ಶಿವಪ್ರಸಾದ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಬುಧವಾರ ಮಧುರೈ ಜಿಲ್ಲಾ ನ್ಯಾಯಾಲಯಕ್ಕೆ ಕಶ್ಯಪ್‌ನನ್ನು ಹಾಜರುಪಡಿಸಲಾಗಿದ್ದು ಆತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆತನನ್ನು ನಂತರ ಮದುರೈ ಕೇಂದ್ರ ಕಾರಾಗೃಹದಲ್ಲಿರಿಸಲಾಗಿದೆ. ಆತನ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಎಪ್ರಿಲ್‌ 19 ರ ತನಕ ವಿಸ್ತರಿಸಿದೆ.

ಮದುರೈ ಕ್ರೈಂ ಬ್ರ್ಯಾಂಚ್‌ ಪೊಲೀಸರು ಕಶ್ಯಪ್‌ ವಿರುದ್ಧ ಪ್ರಕರಣ ದಾಖಲಿಸಿದ್ದರಿಂದ ಬಿಹಾರದಿಂದ ವಿಶೇಷ ಪೊಲೀಸ್‌ ತಂಡ ಬಂಧಿಸಿತ್ತು,

ಇದಕ್ಕೂ ಮುನ್ನ ಮಾರ್ಚ್‌ 18 ರಂದು ಕಷ್ಯಪ್‌ ಬಿಹಾರದ ಜಗದೀಶಪುರ ಠಾಣೆಗೆ ಶರಣಾದ ನಂತರ ಬಿಹಾರ ಪೊಲೀಸರ ಆರ್ಥಿಕ ಅಪರಾಧಗಳ ಘಟಕ ಆತನನ್ನು ಬಂಧಿಸಿತ್ತು. ಟ್ರಾನ್ಸಿಟ್‌ ರಿಮಾಂಡ್‌ ಪಡೆದು ಆತನನ್ನು ಈಗ ತಮಿಳುನಾಡಿಗೆ ಕರೆತರಲಾಗಿದೆ.

ತಮಿಳುನಾಡಿನಲ್ಲಿ ವಲಸಿಗ ಕಾರ್ಮಿಕರ ಮೇಲೆ ದಾಳಿಗಳು ನಡೆಯುತ್ತಿವೆ ಎಂದು ಹೇಳಿಕೊಂಡು ಕಳೆದ ತಿಂಗಳು ಹಲವು ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ನಂತರ ವಲಸಿಗ ಕಾರ್ಮಿಕರು ಭೀತಿಯಿಂದ ತಮ್ಮೂರುಗಳಿಗೆ ಮರಳಿದ ವಿದ್ಯಮಾನ ನಡೆದಿತ್ತು. ಈ ವೀಡಿಯೋಗಳು ನಕಲಿ ಎಂದು ತಮಿಳುನಾಡು ಸರ್ಕಾರ ಹೇಳಿತ್ತಲ್ಲದೆ ವಲಸಿಗ ಕಾರ್ಮಿಕರಿಗೆ ರಾಜ್ಯದಲ್ಲಿ ಎಲ್ಲಾ ರಕ್ಷಣೆಯೂ ಇದೆ ಎಂದು ತಿಳಿಸಿತ್ತು.

share
Next Story
X