ವರುಣಾ ಕ್ಷೇತ್ರದಿಂದ ಸಚಿವ ವಿ.ಸೋಮಣ್ಣ ಸ್ಪರ್ಧೆ ವಿಚಾರ: ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ಏನು?

ಬೆಂಗಳೂರು: ಮುಂಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ವರುಣಾದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸುತ್ತಿದ್ದು, ವಸತಿ ಸಚಿವ ವಿ.ಸೋಮಣ್ಣ ಅವರ ಹೆಸರು ಕೇಳಿ ಬರುತ್ತಿದೆ.
ಇನ್ನು ಸಿದ್ದರಾಮಯ್ಯನವರ ಎದುರು ಬಿವೈ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಆ ಊಹಾಪೋಹಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಬಿ.ಎಸ್. ಯಡಿಯೂರಪ್ಪ ಈಗಾಗಲೇ ತೆರೆ ಎಳೆದಿದ್ದಾರೆ.
ಇದೀಗ ಸೋಮಣ್ಣ ಸ್ಪರ್ಧೇ ವಿಚಾರ ಕುರಿತಾಗಿಯೂ ಪ್ರತಿಕ್ರಿಯಿಸಿರುವ ಬಿ.ಎಸ್ ವೈ 'ಅದೆಲ್ಲವನ್ನು ಹೈಕಮಾಂಡ್ ತೀರ್ಮಾನಿಸಲಿದೆ' ಎಂದಷ್ಟೇ ಹೇಳಿದ್ದಾರೆ.
Next Story





