ಸುಪ್ರೀಂನಲ್ಲಿ ಎ.14 ರಂದು ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆ: ಮುಸ್ಲಿಂ ಬಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ

ಹೊಸದಿಲ್ಲಿ: ವಾರಣಾಸಿಯ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಪ್ರಕರಣವನ್ನು ಎಪ್ರಿಲ್ 14 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
ಮಸೀದಿ ಆವರಣದೊಳಗೆ ವುಝೂ (ಕೈ ಕಾಲು ತೊಳೆದುಕೊಳ್ಳುವ) ಆಚರಣೆಯನ್ನು ಅನುಮತಿಸುವಂತೆ ಕೋರಿ ಅರ್ಜಿಯನ್ನು ಸಲ್ಲಿಸಲು ಮುಸ್ಲಿಂ ಬಣಕ್ಕೆ ನ್ಯಾಯಾಲಯ ಅನುಮತಿ ನೀಡಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಸುಪ್ರೀಂ ಕೋರ್ಟ್ ನಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಹಿರಿಯ ವಕೀಲ ಹುಝೆಫಾ ಅಹ್ಮದಿ, "ಇದು ರಂಝಾನ್ ತಿಂಗಳು, ಮಸೀದಿ ಆವರಣದೊಳಗೆ ಪ್ರಾರ್ಥನೆ ಮಾಡಲು ಸಾಧ್ಯವಾಗಬೇಕು" ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರು ಈ ಸಂಬಂಧ ಅರ್ಜಿ ಸಲ್ಲಿಸುವಂತೆ ತಿಳಿಸಿದರು.
Next Story





