Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂವಿಧಾನದ ಮೂಲಭೂತ ವಿಷಯಗಳಿಗೆ ತಿದ್ದುಪಡಿ...

ಸಂವಿಧಾನದ ಮೂಲಭೂತ ವಿಷಯಗಳಿಗೆ ತಿದ್ದುಪಡಿ ಮಾಡಿದ್ದೇ ಕಾಂಗ್ರೆಸ್: ನಿರ್ಮಲಾ ಸೀತಾರಾಮನ್ ವಾಗ್ದಾಳಿ

6 April 2023 7:28 PM IST
share
ಸಂವಿಧಾನದ ಮೂಲಭೂತ ವಿಷಯಗಳಿಗೆ ತಿದ್ದುಪಡಿ ಮಾಡಿದ್ದೇ ಕಾಂಗ್ರೆಸ್: ನಿರ್ಮಲಾ ಸೀತಾರಾಮನ್ ವಾಗ್ದಾಳಿ

ಬೆಂಗಳೂರು, ಎ.6: ‘ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಲೋಕಸಭೆಗೆ ಒಂದು ವರ್ಷದ ಅಸಾಂವಿಧಾನಿಕ ವಿಸ್ತರಣೆ ಜೊತೆಗೆ ಸಂವಿಧಾನದ ಮೂಲಭೂತ ವಿಷಯಗಳಿಗೆ ತಿದ್ದುಪಡಿ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂಬುದು ಕರ್ನಾಟಕ ಮಾತ್ರವಲ್ಲದೆ ದೇಶದ ಜನತೆಗೆ ಗೊತ್ತಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾಗ್ದಾಳಿ ನಡೆಸಿದರು.

ಗುರುವಾರ ಮಲ್ಲೇಶ್ವರದಲ್ಲಿರುವ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿಯಲ್ಲಿ ವಿರೋಧ ಪಕ್ಷಗಳ ಪ್ರಮುಖ ನಾಯಕರನ್ನು ಬಂಧಿಸಿ ಜೈಲಿನಲ್ಲಿಟ್ಟ ಕಾಂಗ್ರೆಸ್ ಪಕ್ಷದ ಈಗಿನ ನಾಯಕರು ವಿವಿಧ ಸಂಸ್ಥೆಗಳ ದುರ್ಬಳಕೆಯ ಆರೋಪ ಮಾಡುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಬಿಜೆಪಿ ಪಕ್ಷ ಸ್ಥಾಪನೆಯಾಗುವ ಮೊದಲೇ ಪಕ್ಷದ ಮುಖಂಡರು ಕರ್ನಾಟಕ ವಿಶೇಷವಾಗಿ ಬೆಂಗಳೂರಿನ ಜೊತೆ ಭಾವನಾತ್ಮಕ ಸಂಬಂಧ ಹೊಂದಿದ್ದರು. ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆದಾಗ ನಮ್ಮ ಇಬ್ಬರು ಪ್ರಮುಖ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ ಮತ್ತು ಎಲ್.ಕೆ.ಅಡ್ವಾಣಿ ಅವರನ್ನು ಇಲ್ಲಿ ಬಂಧಿಸಲಾಗಿತ್ತು ಎಂದು ಅವರು ಹೇಳಿದರು.

ಪ್ರಧಾನಿ ಮೋದಿ 2014ರಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಇಲ್ಲಿನವರೆಗೆ 32 ಬಾರಿ ಕರ್ನಾಟಕಕ್ಕೆ ಭೇಟಿ ಕೊಟ್ಟಿದ್ದಾರೆ. 2023ರಲ್ಲಿ ಈಗಾಗಲೆ 7 ಬಾರಿ ಭೇಟಿ ನೀಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಅವರು ಮತ್ತೊಮ್ಮೆ ಭೇಟಿ ಕೊಡಲಿದ್ದಾರೆ. ಜಿ20 ಸಭೆಗಳಲ್ಲಿ ಕೇಂದ್ರ ಬ್ಯಾಂಕ್, ಗವರ್ನರ್ ಗಳ ಸಭೆ ಬೆಂಗಳೂರಿನಲ್ಲಿ ನಡೆದಿತ್ತು. ಅಲ್ಲಿ ಐಐಟಿಗಳು, ಸ್ಟಾರ್ಟಪ್‍ಗಳ ಪ್ರದರ್ಶಿನಿಯನ್ನೂ ಏರ್ಪಡಿಸಲಾಗಿತ್ತು. ಭಾರತೀಯರ ಸಾಮ ಅನಾವರಣಕ್ಕೆ ಇದು ಅವಕಾಶ ಮಾಡಿಕೊಟ್ಟಿತ್ತು ಎಂದು ನಿರ್ಮಲಾ ಸೀತಾರಾಮನ್ ವಿವರಿಸಿದರು.

ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್ ರಾಜ್ಯಕ್ಕೆ ಭೇಟಿ ಕೊಟ್ಟಿದ್ದರು ಎಂದು ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಉಪಸ್ಥಿತರಿದ್ದರು. 

share
Next Story
X