Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗೂಡಿನಬಳಿ ರಸ್ತೆ ಬದಿಯಲ್ಲಿ ತ್ಯಾಜ್ಯಕ್ಕೆ...

ಗೂಡಿನಬಳಿ ರಸ್ತೆ ಬದಿಯಲ್ಲಿ ತ್ಯಾಜ್ಯಕ್ಕೆ ಆಕಸ್ಮಿಕ ಬೆಂಕಿ; ವಾಹನ, ಜನ ಸಂಚಾರ ಅಸ್ತವ್ಯಸ್ತ

6 April 2023 8:16 PM IST
share
ಗೂಡಿನಬಳಿ ರಸ್ತೆ ಬದಿಯಲ್ಲಿ ತ್ಯಾಜ್ಯಕ್ಕೆ ಆಕಸ್ಮಿಕ ಬೆಂಕಿ; ವಾಹನ, ಜನ ಸಂಚಾರ ಅಸ್ತವ್ಯಸ್ತ

ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯ ಬಿಸಿ ರೋಡು ಮುಖ್ಯ ವೃತ್ತದ ಬಳಿ ಗೂಡಿನಬಳಿ ರಸ್ತೆ ಬದಿಯಲ್ಲಿ ತ್ಯಾಜ್ಯಗಳಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಪರಿಸರವಿಡೀ ಬೆಂಕಿ ಜ್ವಾಲೆ ಹಾಗೂ ಭಾರೀ ಪ್ರಮಾಣದ ಹೊಗೆ ಆವರಿಸಿಕೊಂಡು ರಸ್ತೆಯಲ್ಲಿ ವಾಹನ ಹಾಗೂ ಜನ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಗುರುವಾರ ಮಧ್ಯಾಹ್ನದ ವೇಳೆಗೆ ನಡೆದಿದೆ. 

ಘಟನೆ ನಡೆದ ಸ್ಥಳ ಬಂಟ್ವಾಳ ಅಗ್ನಿಶಾಮಕ ಠಾಣೆಯ ಕೂದಳೆಲೆಯ ಅಂತರದಲ್ಲಿದ್ದರೂ ಸಾರ್ವಜನಿಕರು ಹಲವು ಬಾರಿ ಕರೆ ಮಾಡಿದರೂ ತಾಸುಗಟ್ಟಲೆ  ಅಗ್ನಿಶಾಮಕ ವಾಹನವಾಗಲೀ, ಸಿಬ್ಬಂದಿಗಳಾಗಲೀ ಸ್ಥಳಕ್ಕೆ ಆಗಮಿಸದ ಹಿನ್ನಲೆಯಲ್ಲಿ ಬೆಂಕಿಯ ಕೆನ್ನಾಲಗೆ ಇನ್ನಷ್ಟು ವಿಸ್ತರಿಸಿಕೊಂಡಿತ್ತು. ಬಳಿಕ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕಾಗಮಿಸಿದ ಬಂಟ್ವಾಳ ನಗರ ಪೊಲೀಸರು ಹಾಗೂ ಮೆಸ್ಕಾಂ ಇಲಾಖಾ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರು ಎಂದು ಸ್ಥಳೀಯರು ದೂರಿದ್ದಾರೆ.

ಅಗ್ನಿ ಅವಘಡ ಸಂಭವಿಸಿದ ಸ್ಥಳದ ಪಕ್ಕದಲ್ಲೇ ರೈಲ್ವೆ ನಿಲ್ದಾಣ ಇದ್ದು, ಸ್ವಲ್ಪ ಮುಂದೆ ಬೆಂಕಿ ವಿಸ್ತರಿಸಿದರೆ ಬಿ ಸಿ ರೋಡು ಪೇಟೆಗೆ ಆವರಿಸುವ ಅಪಾಯವೂ ಇತ್ತು. ಅಲ್ಲದೆ ಅದೇ ಸ್ಥಳದಲ್ಲಿ ಬಂಟ್ವಾಳ ಪುರಸಭೆಯ ಕುಡಿಯುವ ನೀರಿನ ಪೈಪ್ ಲೈನ್ ಕೂಡಾ ಇದ್ದು ಒಟ್ಟಾರೆ ಜನಜೀವನವನ್ನೇ ಗೊಂದಲಕ್ಕೀಡು ಮಾಡುವ ಸನ್ನಿವೇಶವೇ ಅಲ್ಲಿತ್ತು. ಆದರೂ ಅಗ್ನಿಶಾಮಕ ಸಿಬ್ಬಂದಿಗಳಾಗಲೀ, ಬಂಟ್ವಾಳ ಪುರಸಭೆಯ ನೀರಿನ ಟ್ಯಾಂಕರ್ ಆಗಲೀ ಸಮಯಕ್ಕೆ ಸ್ಥಳಕ್ಕಾಗಮಿಸದ ಪರಿಣಾಮ ಸ್ಥಳೀಯರು ತೀವ್ರ ಆತಂಕ ಹಾಗೂ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಸನ್ನಿವೇಶ ಕಂಡು ಬಂತು. ಸುಡು ಬೇಸಿಗೆ ಸಮಯ ಇದಾಗಿದ್ದು, ಅಲ್ಲಲ್ಲಿ ಅಗ್ನಿ ಅನಾಹುತಗಳ ಸರಣಿಯೇ ಸಂಭವಿಸುತ್ತಿದ್ದರೂ ಅಗ್ನಿಶಾಮಕ ವಾಹನ ಹಾಗೂ ಸಿಬ್ಬಂದಿಗಳು ಇನ್ನೂ ಕೂಡಾ ಸನ್ನದ್ದ ಸ್ಥಿತಿಯಲ್ಲಿ ಇಲ್ಲದೆ ಇರುವುದೇ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

share
Next Story
X