ಉಡುಪಿ: ಟಿಕೆಟ್ ಆಕಾಂಕ್ಷಿ ಕೃಷ್ಣಮೂರ್ತಿ ಆಚಾರ್ಯ ಕಾಂಗ್ರೆಸ್‌ಗೆ ರಾಜೀನಾಮೆ

ಉಡುಪಿ, ಎ.6: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮುಲ್ಕಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, ನಾನು ವೈಯಕ್ತಿಕ ಕಾರಣಗಳಿಂದ ನನ್ನ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಆದುದರಿಂದ ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಬೇಕಾಗಿ ವಿನಂತಿಸಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Next Story





