ನಿಮ್ಮನ್ನು, ನಿಮ್ಮ ಪಕ್ಷವನ್ನು ಪ್ರಶ್ನಿಸಲಿರುವ ಜನರ ಧ್ವನಿಗೆ ತಯಾರಾಗಿರಿ...: ಸುದೀಪ್ ಗೆ ಪ್ರಕಾಶ್ ರಾಜ್ ಎಚ್ಚರಿಕೆ
ಬೆಂಗಳೂರು, ಎ. 6: ‘ಚಿತ್ರನಟ ಸುದೀಪ್ ಒಬ್ಬ ಮೇರು ಕಲಾವಿದನಾಗಿ ಸಮಾಜದ ಎಲ್ಲ ವರ್ಗದ ಪ್ರೀತಿಯಿಂದ ಬೆಳೆದ ನೀವು, ಜನ ಸಾಮಾನ್ಯನ ದನಿಯಾಗುವಿರಿ ಎಂದು ಆಶಿಸಿದ್ದೆ’ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ತಿಳಿಸಿದ್ದಾರೆ.
ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಆದರೆ, ತಾವು ಒಂದು ರಾಜಕೀಯ ಪಕ್ಷದ ಬಣ್ಣ ಬಳಿದುಕೊಳ್ಳುತ್ತೀರಿ ಎಂದು ನಿರೀಕ್ಷಿಸಿರಲ್ಲ. ಇನ್ನು ಮುಂದೆ ನಿಮ್ಮನ್ನೂ... ನಿಮ್ ಪಕ್ಷವನ್ನು ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ನೋಡ್ರಪ್ಪ ನಿಮ್ ಮಾಮನೊ.. ನಿಮ್ ಅತ್ತೇನೊ.. ನಿಮ್ ಕಷ್ಟಕಾಲದಲ್ಲಿ ಸಹಾಯ ಮಾಡಿದ್ರೆ.. ನೀವು ದುಡಿದಿದ್ರಲ್ಲಿ ಶೇ.10.. ಶೇ.20 ಇಲ್ಲ ಶೇ.30 ಪರ್ಸೆಂಟ್ ಕೊಡಿ.. ಅದು ನಿಮ್ಮಿಷ್ಟ.. ಆದರೆ, ಪ್ರಜೆಗಳ ಶೇ.30ರಷ್ಟು ಹಣವನ್ನು ಕೊಳ್ಳೆ ಹೊಡೆಯೊಕ್ ಬಿಡ್ಬೀಡಿ.. ಅಷ್ಟೇ.. ಅಷ್ಟೇ..’ ಎಂದು ಪ್ರಕಾಶ್ ರಾಜ್ ಇದೇ ವೇಳೆ ಲೇವಡಿ ಮಾಡಿದ್ದಾರೆ.
ಸುದೀಪ್.. ಒಬ್ಬ ಮೇರು ಕಲಾವಿದನಾಗಿ ಸಮಾಜದ ಎಲ್ಲ ವರ್ಗದ ಪ್ರೀತಿಯಿಂದ ಬೆಳೆದ ನೀವು ,ಜನ ಸಾಮಾನ್ಯನ ದನಿಯಾಗುವಿರಿ ಎಂದು ಆಶಿಸಿದ್ದೆ.ಆದರೆ ತಾವು ಒಂದು ರಾಜಕೀಯ ಪಕ್ಷದ ಬಣ್ಣ ಬಳಿದುಕೊಳ್ಳುತ್ತೀರಿ ಎಂದು ನಿರೀಕ್ಷಿಸಿರಲ್ಲ ..ಇನ್ನು ಮುಂದೆ ನಿಮ್ಮನ್ನೂ .. ನಿಮ್ ಪಕ್ಷವನ್ನು ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ ..@KicchaSudeep #justasking
— Prakash Raj (@prakashraaj) April 6, 2023
ನೋಡ್ರಪ್ಪ… ನಿಮ್ ಮಾಮನೊ.. ನಿಮ್ ಅತ್ತೇನೊ.. ನಿಮ್ ಕಷ್ಟಕಾಲದಲ್ಲಿ ಸಹಾಯ ಮಾಡಿದ್ರೆ.. ನೀವು ದುಡಿದಿದ್ರಲ್ಲಿ 10%..20% ಇಲ್ಲ 30 % ಕೊಡಿ….. ಅದು ನಿಮ್ಮಿಷ್ಟ .. ಆದ್ರೆ .. ಪ್ರಜೆಗಳ 30% ಕೊಳ್ಳೆ ಹೊಡೆಯೊಕ್ ಬಿಡ್ಬೀಡಿ .. ಅಷ್ಟೆ..ಅಷ್ಟೇ … #justasking
— Prakash Raj (@prakashraaj) April 6, 2023