ಯುವಕ ನಾಪತ್ತೆ

ಉಡುಪಿ, ಎ.6: ತೆಲಂಗಾಣದ ಹೋಟೆಲೊಂದರಲ್ಲಿ ಕೆಲಸ ಮಾಡಿ ಕೊಂಡಿದ್ದ ನಗರದ ನಿವಾಸಿ ವಿಜೇತ (26) ಎಂಬ ಯುವಕನು ಮಾ.13 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
183 ಸೆಂ.ಮಿ. ಎತ್ತರ, ದಪ್ಪ ಶರೀರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ತೆಲುಗು ಭಾಷೆ ಮಾತನಾಡುತ್ತಾರೆ.ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story





