ಮಣಿಪಾಲ: ದಾಖಲೆ ಇಲ್ಲದೆ ಲಾರಿಯಲ್ಲಿ ಸಾಗಾಟ; 100 ಗೋಣಿ ಭತ್ತ ವಶ

ಮಣಿಪಾಲ, ಎ.6: ದಾಖಲೆ ಇಲ್ಲದೆ ಲಾರಿಯಲ್ಲಿ ಸಾಗಿಸುತ್ತಿದ್ದ ಭತ್ತವನ್ನು ಎ.5ರಂದು ಮಣಿಪಾಲ ಎಂಐಟಿ ಜಂಕ್ಷನ್ ಬಳಿ ಮಣಿಪಾಲ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹಳಿಯಾಳದಿಂದ ಬೆಳ್ತಂಗಡಿ ತಾಲೂಕಿನ ಮಾರುತಿಪುರದ ಅಕ್ಕಿ ಮಿಲ್‌ಗೆ ಪರ್ಕಳ ಕಡೆಯಿಂದ ಮಣಿಪಾಲದ ಕಡೆಗೆ ಚಾಲಕ ಡೇನಿಲ್ ಆಂತೋನಿ ಫರ್ನಾಂಡೀಸ್ ಎಂಬಾತ ಲಾರಿಯಲ್ಲಿ ಸಾಗಿಸುತ್ತಿದ್ದು, ಚುನಾವಣೆ ಹಿನ್ನೆಲೆಯಲ್ಲಿ ದಿಢೀರ್ ತಪಾಸಣೆಗೆ ಒಳಪಡಿಸಿದಾಗ 100 ಮೂಟೆ ಭತ್ತ ತುಂಬಿದ ಗೋಣಿ ಚೀಲ ಕಂಡುಬಂದಿದೆ. ಸಮರ್ಪಕವಾದ ದಾಖಲಾತಿ ಇಲ್ಲದೇ ಕಾರಣ ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story





