Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನನ್ನ ಮೊದಲ ತುತ್ತು ದಲಿತ ಸಮುದಾಯಕ್ಕೆ...

ನನ್ನ ಮೊದಲ ತುತ್ತು ದಲಿತ ಸಮುದಾಯಕ್ಕೆ ಮೀಸಲು: ಮುಖ್ಯಮಂತ್ರಿ ಬೊಮ್ಮಾಯಿ

6 April 2023 4:32 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನನ್ನ ಮೊದಲ ತುತ್ತು ದಲಿತ ಸಮುದಾಯಕ್ಕೆ ಮೀಸಲು: ಮುಖ್ಯಮಂತ್ರಿ ಬೊಮ್ಮಾಯಿ

ಹುಬ್ಬಳ್ಳಿ, ಎ. 6: ‘ನನ್ನ ಅನ್ನದ ಮೊದಲ ತುತ್ತು ದಲಿತ ಸಮುದಾಯಕ್ಕೆ ಮೀಸಲು. ರಾಜ್ಯದ ಜನ  ಕಾಂಗ್ರೆಸ್ ಸುಳ್ಳನ್ನು ನಂಬಬಾರದು. ಬಜೆಟ್‍ನಲ್ಲಿ ಘೋಷಣೆ ಮಾಡಿದ್ದಂತೆ ಎಸ್‍ಸಿಪಿ-ಟಿಎಸ್‍ಪಿಯ 7 ‘ಡಿ’ ಕಲಂ ಅನ್ನು ತೆಗೆಯಲಾಗುವುದು. ದಲಿತ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸಿಕೊಳ್ಳುವ ಕಾನೂನು ಮಾಡಿದ್ದು ಸಿದ್ದರಾಮಯ್ಯ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ನಗರದಲ್ಲಿ ರಾಜ್ಯ ಪರಿಶಿಷ್ಟ ಸಮುದಾಯಗಳ ಒಳಮೀಸಲಾತಿ ಜಾರಿಗೊಳಿಸಿದ್ದಕ್ಕಾಗಿ ರಾಜ್ಯ ಸರಕಾರಕ್ಕೆ ಪರಿಶಿಷ್ಟ ಸಮುದಾಯದ ಒಕ್ಕೂಟ ಏರ್ಪಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿz ಅವÀರು, ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದ್ದು, ಅವರ ಮಾತು ಮತ್ತು ಕೃತಿಯಲ್ಲಿ ವ್ಯತ್ಯಾಸವಿದೆ’ ಎಂದು ಟೀಕಿಸಿದರು.

‘ವಿಪಕ್ಷ ನಾಯಕ ಸಿದ್ದರಾಮಯ್ಯ ಜಾತಿ ವಿಷ ಬೀಜ ಬಿತ್ತಲು ಮುಂದಾಗಿ, ಧರ್ಮ ಒಡೆಯಲು ಮುಂದಾದರು. ಮೀಸಲಾತಿ ಹೆಚ್ಚಿಸುವ ಬಗ್ಗೆ ಕಾಂಗ್ರೆಸ್‍ಗೆ ಬದ್ಧತೆಯಾಗಲಿ, ರಾಜಕೀಯ ಇಚ್ಛಾಶಕ್ತಿಯಾಗಲಿ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಸಾಧ್ಯತೆ ಇಲ್ಲ’ ಎಂದು ಅವರು ತಿರುಗೇಟು ನೀಡಿದರು.

ದಲಿತರು ಎಚ್ಚರಿಕೆ ವಹಿಸಬೇಕು: ‘ಒಳ ಮೀಸಲಾತಿ ಹೋರಾಟ ಹಲವು ವರ್ಷಗಳಿಂದ ನಡೆಯುತ್ತಿದೆ. ಒಳ ಮೀಸಲಾತಿಯನ್ನು ಯಾರು ಮಾಡುತ್ತಾರೆ ಅವರು ಬಸ್ಮವಾಗುತ್ತಾರೆಂದು ಹೇಳುತ್ತಿದ್ದರು. ಅಧಿಕಾರ ಶಾಶ್ವತವಲ್ಲ, ಜನರ ಹೃದಯದಲ್ಲಿ ದೊರೆಯುವ ಸ್ಥಾನ ದೊಡ್ಡದು. ಮೀಸಲಾತಿ ಹೆಚ್ಚಳ ಮಾಡುವ ವೇಳೆ ಸರ್ವಪಕ್ಷದ ಸಭೆ ಕರೆದು ಎಲ್ಲರ ಒಪ್ಪಿಗೆ ಪಡೆಯಲಾಗಿತ್ತು. ಆದರೆ ಈಗ ಇದು ಸಂವಿಧಾನಾತ್ಮಕವಲ್ಲ ಎನ್ನುವ ಕಾಂಗ್ರೆಸ್ ಅವರದ್ದು ಒಳಗೊಂದು ಹೊರಗೊಂದು ನೀತಿ. ಇಂತಹ ಕಾಂಗ್ರೆಸ್‍ನಿಂದ ದಲಿತರು ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದರು.

ಸಿದ್ದರಾಮಯ್ಯ, ಮೀಸಲಾತಿ ಹಾಗೂ ಒಳ ಮೀಸಲಾತಿ ಪರವಾಗಿದ್ದರೋ, ವಿರೋಧವಾಗಿದ್ದರೋ ಎಂದು ಸ್ಪಷ್ಟ ಚಿತ್ರಣ ನೀಡಲಿ. ಅದು ಬಿಟ್ಟು ದ್ವಂದ್ವ ನೀತಿ ಬೇಡ. ನಾನು ಬೇರೆ ಮುಖ್ಯಮಂತ್ರಿಗಳ ರೀತಿ ಅಲ್ಲಾ,  ಕೆಲಸ ಮಾಡಿ ಮಾತನಾಡುತ್ತೇನೆ ಎಂದ ಅವರು, ನಾವು ಯಾರಿಗೂ, ಯಾವ ಸಮುದಾಯದಕ್ಕೂ ಅನ್ಯಾಯ ಮಾಡಿಲ್ಲ. ತಾಂಡಗಳಿಗೆ ಹಕ್ಕು ಪತ್ರಕೊಟ್ಟಿದ್ದು ನಾವು ಎಂದು ತಿಳಿಸಿದರು.

ಬದಲಾವಣೆ ಬೀಜ ಬಿತ್ತನೆ: ‘ಅಸಾಧ್ಯವನ್ನು ಸಾಧ್ಯ ಮಾಡಿ ತೋರಿಸಿಸಲಾಗಿದೆ. ಇದು ಸಾಮಾಜಿಕ, ಸಮಾನತೆ ಇರುವ, ಅಂಬೇಡ್ಕರ್, ಬಸವಣ್ಣ, ವಾಲ್ಮೀಕಿ ತತ್ವಾದರ್ಶಗಳನ್ನು ಇಟ್ಟುಕೊಂಡು ಮಾಡಿರುವ ಕಾನೂನು. ದೇಶದಲ್ಲಿ ಇದು ಮಹತ್ತರ ಬದಲಾವಣೆಗೆ ನಾಂದಿಯಾಗಲಿದೆ. ದೇಶದ ಬದಲಾವಣೆ ಬೀಜ ಕರ್ನಾಟಕದಿಂದ ಬಿತ್ತನೆಯಾಗಲಿದೆ. ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯದ ಬಂಧುಗಳ ಮೀಸಲಾತಿಯನ್ನು ಸೂರ್ಯ-ಚಂದ್ರ ಇರುವವರಗೂ ತೆಗೆಯುವದಿಲ್ಲ’

-ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X