Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿ ಹೆಸರು ಹೇಳುವ ಅರ್ಹತೆ ಬಿಜೆಪಿಯಲ್ಲಿ...

ಮೋದಿ ಹೆಸರು ಹೇಳುವ ಅರ್ಹತೆ ಬಿಜೆಪಿಯಲ್ಲಿ ಅನೇಕರಿಗೆ ಇಲ್ಲ: MLC ಆಯನೂರು ಮಂಜುನಾಥ್

ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ನೂತನ ಕಚೇರಿ ತೆರೆದ ಬಿಜೆಪಿ ಮುಖಂಡ

6 April 2023 10:34 PM IST
share
ಮೋದಿ ಹೆಸರು ಹೇಳುವ ಅರ್ಹತೆ ಬಿಜೆಪಿಯಲ್ಲಿ ಅನೇಕರಿಗೆ ಇಲ್ಲ: MLC ಆಯನೂರು ಮಂಜುನಾಥ್
ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ನೂತನ ಕಚೇರಿ ತೆರೆದ ಬಿಜೆಪಿ ಮುಖಂಡ

ಶಿವಮೊಗ್ಗ, ಎ.6: ಮೋದಿ ಮತ್ತು ಗುಜರಾತ್ ಮಾದರಿಯ ಚುನಾವಣೆ ಇಲ್ಲಿ ನಡೆಯಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.

ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ಆಯನೂರು ಮಂಜುನಾಥ್ ಗುರುವಾರ  ನೂತನ ಕಚೇರಿ ಆರಂಭಿಸಿದ್ದಾರೆ.

ತಮ್ಮ ಹೊಸ ಕಾರ್ಯಾಲಯವನ್ನು ಶುಭಾರಂಭ ಮಾಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕುಟುಂಬ ರಾಜಕಾರಣವಿದೆ. ವಯಸ್ಸಿನ ಏರುಪೇರಿದೆ. ಭ್ರಷ್ಟಾಚಾರ ಮಿತಿ ಮೀರಿದೆ. ಮೋದಿಯವರು ತಮ್ಮ ಕುಟುಂಬವನ್ನೇ ಏಕೆ, ತಮ್ಮ ತಾಯಿಯವರನ್ನೇ ರಾಜಕೀಯದ ನೆರಳನ್ನೂ ಕಾಣದಂತೆ ಸಾಕಿದ್ದವರು. ಅಂತಹ ಮಹಾನ್ ವ್ಯಕ್ತಿಯ ವ್ಯಕ್ತಿತ್ವ ಇಲ್ಲಿ ಯಾರಿಗೂ ಇಲ್ಲ. ಹಾಗಾಗಿ ಗುಜರಾತ್ ಮಾದರಿಯ ಮತ್ತು ಮೋದಿ ಮಾದರಿಯ ಚುನಾವಣೆ ಎಲ್ಲಿ ಸಾಧ್ಯ ಎಂದರು.

ಮೋದಿ ಹೆಸರು ಹೇಳುವ ಅರ್ಹತೆ ಅನೇಕರಿಗೆ ಇಲ್ಲ. ಬಿಜೆಪಿ ಎಂಬುದು ಒಳ್ಳೆಯ ಬಸ್ಸೇ ಇರಬಹುದು. ಆದರೆ ಅದನ್ನು ಓಡಿಸುವ ಡ್ರೈವರ್, ನಿರ್ವಹಣೆ ಮಾಡುವ ಕಂಡಕ್ಟರ್ ಮತ್ತು ಬಸ್‌ನಲ್ಲಿದ್ದ ಪ್ರಯಾಣಿಕರು ಕೆಟ್ಟವರಾದರೆ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದರು.

ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಬಿಜೆಪಿ ಪಟ್ಟಿ ಪ್ರಕಟವಾದ ಮೇಲೆ ನನ್ನ ನಿರ್ಧಾರವನ್ನು ಮಾಡಬೇಕಾಗುತ್ತದೆ ಆದರೆ ಅದೇ ಮುಖ್ಯವಲ್ಲ. ಮುಖ್ಯವಾಗಿ ಶಿವಮೊಗ್ಗದಲ್ಲಿ  ಶಾಂತಿ ಬಯಸುವವನು ನಾನು. ಈಗಲೂ ಮತ್ತೆ ಮತ್ತೆ ಹೇಳುತ್ತೇನೆ. ಕೆ.ಎಸ್. ಈಶ್ವರಪ್ಪ ಅವರಾಗಲಿ, ಅಥವಾ ಅವರ ಮಗನೇ ಆಗಲಿ ಸ್ಪರ್ಧೆ ಮಾಡಬೇಕು. ಅವರ ವಿರುದ್ಧವೇ ನಾನು ಸ್ಪರ್ಧಿಸುತ್ತೇನೆ. ಹಾಗಂತ ಅವರ ಕೈಗೊಂಬೆಯಂತಿರುವವರು ಸ್ಪರ್ಧಿಸಿದರೂ ಕೂಡ ನಾನು ಅವರ ವಿರುದ್ಧ ಸ್ಪರ್ಧಿಸುತ್ತೇನೆ. ನನಗೆ ಶಾಂತಿ ಮುಖ್ಯ ಎಂದರು.

ಕಿಚ್ಚ ಸುದೀಪ್ ಅವರು ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿಗೆ ನಿರ್ದೇಶಕರ ಕೊರತೆ ಇದೆ. ಎಂದು ಮಾರ್ಮಿಕವಾಗಿ ನುಡಿದರು.

ನೀವು ವಿಧಾನಸಭೆ ಪ್ರವೇಶ ಮಾಡಲೇಬೇಕು ಎಂದು ಹಲವು ಗೆಳೆಯರು, ಮತದಾರರು, ಬಿಜೆಪಿ ಕಾರ್ಯಕರ್ತರು ಅಭಿಲಾಷೆ ಪಡುತ್ತಿದ್ದಾರೆ. ಕಾರ್ಮಿಕರು, ಆಟೋ ಚಾಲಕರು ಒತ್ತಾಯ ಮಾಡುತ್ತಿದ್ದಾರೆ. ಅವರ ಪ್ರೀತಿಗೆ ಹೃದಯ ತುಂಬಿ ಬಂದಿದೆ. ನನ್ನ ಎಲ್ಲಾ ನಿರ್ಧಾರಗಳನ್ನು ಎಲ್ಲರ ಸಲಹೆ ಪಡೆದೇ ತೆಗೆದುಕೊಳ್ಳುತ್ತೇನೆ ಈ ಎಲ್ಲಾ ನಿರ್ಧಾರ ತೆಗೆದುಕೊಳ್ಳಲು ಮೂರು ನಾಲ್ಕು ದಿನಗಳ ಕಾಲಾವಕಾಶ ಬೇಕು ಎಂದು ಹೇಳಿದರು.

share
Next Story
X