Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಕ್ರಮ ಆಸ್ತಿ ಗಳಿಕೆ ಆರೋಪ: ಶಾಸಕ ಝಮೀರ್...

ಅಕ್ರಮ ಆಸ್ತಿ ಗಳಿಕೆ ಆರೋಪ: ಶಾಸಕ ಝಮೀರ್ ಅಹ್ಮದ್ ತನಿಖೆಗೆ ತಡೆ ಕೋರಿದ್ದ ಅರ್ಜಿ ಹೈಕೋರ್ಟ್‍ನಿಂದ ವಜಾ

6 April 2023 11:39 PM IST
share
ಅಕ್ರಮ ಆಸ್ತಿ ಗಳಿಕೆ ಆರೋಪ: ಶಾಸಕ ಝಮೀರ್ ಅಹ್ಮದ್  ತನಿಖೆಗೆ ತಡೆ ಕೋರಿದ್ದ ಅರ್ಜಿ ಹೈಕೋರ್ಟ್‍ನಿಂದ ವಜಾ

ಬೆಂಗಳೂರು, ಎ. 6: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್‍ಐಆರ್‍ಗೆ ತಡೆ ನೀಡಬೇಕು ಎಂದು ಕೋರಿ ಶಾಸಕ ಬಿ.ಝಡ್.ಝಮೀರ್ ಅಹ್ಮದ್ ಖಾನ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ. 

ಈ ಕುರಿತು ಝಮೀರ್ ಅಹ್ಮದ್ ಖಾನ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಾದ-ಪ್ರತಿವಾದವನ್ನು ಕಳೆದ ವಿಚಾರಣೆ ವೇಳೆ ಆಲಿಸಿದ್ದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಆದೇಶವನ್ನು ಕಾಯ್ದಿರಿಸಿತ್ತು. ಗುರುವಾರ ಝಮೀರ್ ಅವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. 

ವಿಚಾರಣೆ ವೇಳೆ ಝಮೀರ್ ಪರ ವಾದಿಸಿದ್ದ ವಕೀಲ ಇಸ್ಮಾಯಿಲ್ ಜಬೀವುಲ್ಲಾ ಅವರು, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಿಸುವ ಮುನ್ನ ತನಿಖಾ ಸಂಸ್ಥೆ ಪ್ರಾಥಮಿಕ ವಿಚಾರಣೆ ನಡೆಸುವುದು ಕಡ್ಡಾಯ. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಎಸಿಬಿ ನೇರವಾಗಿ ಎಫ್‍ಐಆರ್ ದಾಖಲಿಸಿ ತನಿಖೆ ಕೈಗೊಂಡಿದೆ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದಿದ್ದರು.

ಅರ್ಜಿದಾರರು ಆದಾಯ ಮೀರಿ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇಡಿ) ವರದಿ ಸಲ್ಲಿಸಿತ್ತು. ಆ ವರದಿ ಆಧರಿಸಿ ಎಸಿಬಿ ಎಫ್‍ಐಆರ್ ದಾಖಲಿಸಿದೆ. ಇದು ಕಾನೂನು ಬಾಹಿರ ಕ್ರಮ. ಹೀಗಾಗಿ, ಎಸಿಬಿ ದಾಖಲಿಸಿರುವ ಎಫ್‍ಐಆರ್‍ಗೆ ತಡೆ ನೀಡಬೇಕು ಎಂದು ಕೋರಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಲೋಕಾಯುಕ್ತ ಪರ ವಕೀಲ ಬಿ.ಬಿ.ಪಾಟೀಲ ಅವರು, ಅಕ್ರಮವಾಗಿ ಆಸ್ತಿ ಗಳಿಸಿದ ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸುವ ಮುನ್ನ ಪ್ರಾಥಮಿಕ ವಿಚಾರಣೆ ನಡೆಸುವ ಅಗತ್ಯವೇನೂ ಇಲ್ಲ. ಹೀಗಾಗಿ, ಎಸಿಬಿಯು ಅರ್ಜಿದಾರರ ವಿರುದ್ಧ ಎಫ್‍ಐಆರ್ ದಾಖಲಿಸಿರುವ ಕ್ರಮ ಕಾನೂನುಬದ್ಧವಾಗಿದೆ. ಹೀಗಾಗಿ, ತಡೆ ನೀಡಬಾರದು ಎಂದು ಕೋರಿದ್ದರು.  

ಪ್ರಕರಣವೇನು?: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಝಮೀರ್ ಅಹ್ಮದ್ ಮನೆಯ ಮೇಲೆ ದಾಳಿ ನಡೆಸಿದ್ದ ಎಸಿಬಿ, 2022ರ ಮೇನಲ್ಲಿ ಎಫ್‍ಐಆರ್ ದಾಖಲಿಸಿತ್ತು. ‘ಝಮೀರ್, ಆದಾಯ ಮೀರಿ 87 ಕೋಟಿ ರೂ. ಹೆಚ್ಚುವರಿ ಆಸ್ತಿ ಗಳಿಸಿರುವ ಅಂಶ ದಾಳಿ ವೇಳೆ ಪತ್ತೆಯಾಗಿದೆ’ ಎಂದು ಆರೋಪಿಸಿತ್ತು.

ಈ ಕುರಿತಂತೆ ಝಮೀರ್ ಹೈಕೋರ್ಟ್ ಮೆಟ್ಟಿಲೇರಿದ್ದು, ಎಫ್‍ಐಆರ್ ರದ್ದುಪಡಿಸುವಂತೆ ಕೋರಿದ್ದರು. ಎಸಿಬಿ ರಚನೆಯನ್ನು ಹೈಕೋರ್ಟ್ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಎಸಿಬಿ ದಾಖಲಿಸಿದ ಪ್ರಕರಣಗಳನ್ನು ಈಗ ಲೋಕಾಯುಕ್ತ ಸಂಸ್ಥೆ ಮುಂದುವರಿಸುತ್ತಿದೆ.

share
Next Story
X