Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಾರ್ಯಪಾಲಕ ಇಂಜಿನಿಯರ್, ಸಹಾಯಕ...

ಕಾರ್ಯಪಾಲಕ ಇಂಜಿನಿಯರ್, ಸಹಾಯಕ ಇಂಜಿನಿಯರ್ ಸೇವೆಯಿಂದ ಅಮಾನತು

ಜೆಜೆಎಂ ಬಹುತೇಕ ಕಾಮಗಾರಿಗಳು ಕಳಪೆ: ಆರೋಪ

ಜಿ.ಮಹಾಂತೇಶ್ಜಿ.ಮಹಾಂತೇಶ್7 April 2023 9:01 AM IST
share
ಕಾರ್ಯಪಾಲಕ ಇಂಜಿನಿಯರ್, ಸಹಾಯಕ ಇಂಜಿನಿಯರ್ ಸೇವೆಯಿಂದ ಅಮಾನತು
ಜೆಜೆಎಂ ಬಹುತೇಕ ಕಾಮಗಾರಿಗಳು ಕಳಪೆ: ಆರೋಪ

ಬೆಂಗಳೂರು: ಮನೆಮನೆಗೆ ಗಂಗೆ ಎಂದು ಭರ್ಜರಿ ಪ್ರಚಾರ ಪಡೆದುಕೊಂಡಿದ್ದ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಠಗಿ ತಾಲೂಕಿನಲ್ಲಿ  ಶೇ.90ರಷ್ಟು ನಲ್ಲಿಗಳನ್ನು ಅಳವಡಿಸಿದ್ದರೂ ನೀರು ಸರಬರಾಜಾಗುತ್ತಿಲ್ಲ. ಕೆಲವು ಮನೆಗಳಿಗೆ ಕಳಪೆ ಪ್ಲಾಸ್ಟಿಕ್ ಪೈಪ್‌ಗಳನ್ನು ಅಳವಡಿಸಿದೆ. ಓವರ್ ಹೆಡ್ ಟ್ಯಾಂಕ್‌ಗಳು ಶಿಥಿಲಾವಸ್ಥೆಯಲ್ಲಿರುವುದು ಬಹಿರಂಗವಾಗಿದೆ.

ಕುಷ್ಟಗಿ ತಾಲೂಕಿನಲ್ಲಿ ಅನುಷ್ಠಾನ ಮಾಡಲಾಗುತ್ತಿರುವ ಜಲಜೀವನ್ ಮಿಷನ್ (ಜೆಜೆಎಂ) ಅಡಿ ಕೈಗೆತ್ತಿಕೊಂಡಿರುವ ಬಹುತೇಕ ಕಾಮಗಾರಿಗಳು ಕಳಪೆಯಿಂದ ಕೂಡಿವೆ ಎಂಬ ಆರೋಪ ಕುರಿತು ಕೊಪ್ಪಳ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಮತ್ತು ಸಹಾಯಕ ಇಂಜಿನಿಯರ್ ಇಬ್ಬರನ್ನು ಸೇವೆಯಿಂದ ಅಮಾನತು ಆದೇಶ (ಸರಕಾರದ ಆದೇಶ ಸಂಖ್ಯೆ ಗ್ರಾಅಪ 14 ಇನ್ಕ್ಯೂ 2023)  ಹೊರಡಿಸಿದೆ. ಈ ಆದೇಶದ ಪ್ರತಿಯು "ಣhe-ಜಿiಟe.iಟಿ"ಗೆ ಲಭ್ಯವಾಗಿದೆ.

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ 2020-21ನೇ ಸಾಲಿನಲ್ಲಿ ಜೆಜೆಎಂ ಅಡಿಯಲ್ಲಿ ಮಂಜೂರಾಗಿದ್ದ 173 ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಮುಕ್ತಾಯಗೊಳಿಸಬೇಕು ಎಂದು ಸೂಚಿಸಲಾಗಿತ್ತು. ಆದರೂ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಅನುಷ್ಠಾನದಲ್ಲಿ ಇಂಜಿನಿಯರ್‌ಗಳು ವಿಫಲರಾಗಿದ್ದರು. ಈ ಸಂಬಂಧ ಬಸನಗೌಡ ಮೇಟಿ ಪಾಟೀಲ್, ವಿಲಾಸ್ ಭೋಸ್ಲೆ ಎಂಬ ಇಂಜಿನಿಯರ್‌ಗಳನ್ನು ಅಮಾನತುಗೊಳಿಸಿರುವುದು ಆದೇಶದಿಂದ ತಿಳಿದು ಬಂದಿದೆ.

ಜೆಜೆಎಂ ಯೋಜನೆಯಡಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಗುಣಮಟ್ಟ ಮತ್ತು ಅನುಷ್ಠಾನ ಕುರಿತು ಒಟ್ಟು 11 ತಂಡಗಳು ತನಿಖೆ ನಡೆಸಿ ವರದಿ ಸಲ್ಲಿಸಿದ್ದವು. ಈ ತನಿಖಾ ತಂಡಗಳು ಕೊಪ್ಪಳ ಜಿಲ್ಲೆಯ ಕುಷ್ಠಗಿಯಲ್ಲಿ ಅನುಷ್ಠಾನಗೊಂಡಿರುವ ಜೆಜೆಎಂ ಕಾಮಗಾರಿಗಳ ಅಸಲಿ ಮುಖವಾಡವನ್ನು  ತೆರೆದಿಟ್ಟಿವೆ.

ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯಡಿ ಮತ್ತು ರಾಜ್ಯ ಸರಕಾರದ ಆಯವ್ಯಯದಲ್ಲಿ ಘೋಷಿಸಿರುವ ಮನೆ ಮನೆಗೆ ಗಂಗೆ ಯೋಜನೆಯಲ್ಲಿ  ಪರಿಗಣಿಸಿರುವ ಎಲ್ಲ ಮನೆಗಳಿಗೂ ಕಾರ್ಯಾತ್ಮಕ ನಳ ಸಂಪರ್ಕ ನೀಡಬೇಕಿತ್ತು. ಆದರೆ ಬಸನಗೌಡ ಮೇಟಿ ಪಾಟೀಲ್ ಮತ್ತು ವಿಲಾಸ್ ಬೋಸ್ಲೆ ಅವರು ಸರಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು 2021ರ ನಿಯಮ 3(1)ನ್ನು ಉಲ್ಲಂಘಿಸಿ ಕರ್ತವ್ಯದಲ್ಲಿ ದಿವ್ಯ ನಿರ್ಲಕ್ಷ್ಯ ತೋರಿ ಗಂಭೀರ ಸ್ವರೂಪದ ದುರ್ನಡತೆ ಎಸಗಿದ್ದಾರೆ. ಆದ್ದರಿಂದ ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದನ್ನು ಬಾಕಿ ಇಟ್ಟು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಪಡಿಸಲು ಸರಕಾರವು ನಿರ್ಧರಿಸಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಜೆಜೆಎಂ ಕಾಮಗಾರಿ ಕಳಪೆಯಾಗಿದೆ. ನಿಯಮಬದ್ಧವಾಗಿ ಮಾಡಿಲ್ಲ ಎಂದು ಜನಪ್ರತಿನಿಧಿಗಳು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಫೌಝಿಯಾ ತರನ್ನುಮ್ ‘ನಿಯಮಬದ್ಧವಾಗಿ ಕೆಲಸ ಮಾಡಲಾಗಿದೆಯೇ? ಎನ್ನುವುದರ ಬಗ್ಗೆ ಪರಿಶೀಲನೆ ಮಾಡಿಸಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನು ತಂಡ ರಚಿಸಿದ್ದರು.

ಕುಷ್ಟಗಿ ತಾಲೂಕಿನ 173 ಹಳ್ಳಿಗಳಿಗೆ ತಲಾ ಇಬ್ಬರು ಅಧಿಕಾರಿಗಳು ಖುದ್ದು ಪರಿಶೀಲನೆ ನಡೆಸಿದ್ದರು. ಅಧಿಕಾರಿಗಳ ಭೇಟಿ ಸಂದರ್ಭದಲ್ಲಿ ಯೋಜನೆ ಅನುಷ್ಠಾನದಲ್ಲಿ ಆಗಿರುವ ಲೋಪ, ಅರೆಬರೆ ಕಾಮಗಾರಿ, ಕಳಪೆ ಕೆಲಸ, ಬೇಕಾಬಿಟ್ಟಿಯಾಗಿ ಮುಖ್ಯಕೊಳವೆ, ನಲ್ಲಿಗಳ ಜೋಡಣೆ, ಗುಂಡಿ ತೆಗೆದರೂ ಮುಚ್ಚದಿರುವ ಕುರಿತು ಅನೇಕ ಗ್ರಾಮಗಳ ಜನರು ಅಧಿಕಾರಿಗಳ ಬಳಿ ಅತೃಪ್ತಿ ಹೊರಹಾಕಿದ್ದರು.

ಎಲ್ ಆ್ಯಂಡ್ ಟಿ ಕಂಪೆನಿ ನಿರ್ವಹಿಸಿದ ಡಿಬಿಒಟಿ ಯೋಜನೆಯಲ್ಲಿ ಬಹುತೇಕ ಗ್ರಾಮಗಳಲ್ಲಿ ನಿರ್ಮಾಣಗೊಂಡಿರುವ ಓವರ್ ಹೆಡ್ ಟ್ಯಾಂಕ್‌ಗೆ ನೀರು ಪೂರೈಕೆಯಾಗುತ್ತಿರುವುದು ಕಂಡುಬಂದಿತ್ತು. ಆದರೆ, ಅನೇಕ ಹಳ್ಳಿಗಳಲ್ಲಿ ಟ್ಯಾಂಕ್‌ನಿಂದ ಮನೆಗಳಿಗೆ ಜೋಡಿಸಿರುವ ನಲ್ಲಿಗಳಲ್ಲಿ ಮಾತ್ರ ನೀರು ಪೂರೈಕೆಯಾಗದ ಸ್ಥಿತಿಯಿತ್ತು ಎಂದು ತಿಳಿದು ಬಂದಿದೆ.

ಕಾಮಗಾರಿಗಳಲ್ಲಿನ ಲೋಪಗಳ ಪಟ್ಟಿ

► ಕೆಲವು ಕಾಮಗಾರಿಗಳಲ್ಲಿ ಶೇ.90ರಷ್ಟು ನಲ್ಲಿಗಳನ್ನು ಅಳವಡಿಸಲಾಗಿದೆ. ಆದರೆ ನೀರು ಸರಬರಾಜು ಸಂಪೂರ್ಣವಾಗಿಲ್ಲ.

► ಶೇ.50ರಷ್ಟು ಮನೆಗಳಿಗೆ ಗುಣಮಟ್ಟದ ಸಾಮಗ್ರಿಗಳನ್ನು ಬಳಸಲಾಗಿದೆ. ಇನ್ನೂ ಕೆಲವು ಮನೆಗಳಿಗೆ ಪ್ಲಾಸ್ಟಿಕ್ ಪೈಪ್‌ಗಳನ್ನು ಬಳಸಿದ್ದು ಗುಣಮಟ್ಟದ್ದಾಗಿಲ್ಲ.

► ಕೆಲವು ಕಾಮಗಾರಿಗಳ ನೀರು ಸರಬರಾಜು ಪೈಪುಗಳಲ್ಲಿ ಸೋರಿಕೆಯಾಗಿದ್ದವು. ಸಿಸಿ ರಸ್ತೆ ರೆಸ್ಪೋರೇಷನ್ ಸರಿಯಾಗಿರುವುದಿಲ್ಲ.

► ಬಹಳಷ್ಟು ಕಾಮಗಾರಿಗಳಲ್ಲಿ ಮೀಟರ್ ಅಳವಡಿಸುವುದು ಬಾಕಿ ಇದೆ.

► ಕೆಲವು ಕಾಮಗಾರಿಗಳು ಪೂರ್ಣಗೊಂಡಿದ್ದರೂ ಸಹ ಸೋರಿಕೆ ಕಾರಣದಿಂದ ನೀರು ಸರಬರಾಜಾಗುತ್ತಿಲ್ಲ.

► ಕುಡಿಯುವ ನೀರು ಅಳವಡಿಕೆ, ಪೈಪುಗಳ ಆಳ ಬಹಳಷ್ಟು ಕಡೆ ಒಂದರಿಂದ ಎರಡು ಅಡಿ ಮಾತ್ರ ಇದೆ.

► ಜಲೋತ್ಸವ ಲೋಗೋ ಬಹಳಷ್ಟು ಕಡೆ ಅಳವಡಿಸಿಲ್ಲ.

► ಕೆಲವು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಹಾಲಿ ಇರುವ ಓವರ್ ಹೆಡ್ ಟ್ಯಾಂಕ್ ಶಿಥಿಲಾವಸ್ಥೆಯಲ್ಲಿರುವುದರಿಂದ ಕೆಲವು ಕಡೆ ಕಾಮಗಾರಿಗಳು ಆರಂಭವಾಗಿಲ್ಲ.

► ಬಹಳಷ್ಟು ಕಾಮಗಾರಿಗಳಲ್ಲಿ ನೀರು ಸೋರಿಕೆಯಾಗುತ್ತಿದ್ದು, ಸ್ಟ್ಯಾಂಡ್ ಪೋಸ್ಟ್‌ಗಳು ಮುರಿದು ಹೋಗಿವೆ.

► 173 ಕಾಮಗಾರಿಗಳು ಮಂಜೂರಾದ ಅಂದಾಜಿನ ಅನುಸಾರ ಅನುಷ್ಠಾನಗೊಂಡಿಲ್ಲ. ಕಳಪೆ ಗುಣಮಟ್ಟ, ಕಲಸಗಳನ್ನು ಪೂರ್ಣಪ್ರಮಾಣದಲ್ಲಿ ನಿರ್ವಹಿಸಿಲ್ಲ. ಬಹಳಷ್ಟು ಕಾಮಗಾರಿಗಳ ಪೈಪ್ ಹಾಗೂ ನಲ್ಲಿಗಳ ಮರು ಜೋಡಣೆ ಕಾರ್ಯವನ್ನು ಕೈಗೊಂಡಿಲ್ಲ ಎಂಬುದು ತನಿಖಾ ವರದಿಯಿಂದ ತಿಳಿದು ಬಂದಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X