Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಚೊಚ್ಚಲ ಐಪಿಎಲ್ ಪಂದ್ಯದಲ್ಲೇ ಆರ್...

ಚೊಚ್ಚಲ ಐಪಿಎಲ್ ಪಂದ್ಯದಲ್ಲೇ ಆರ್ ಸಿಬಿಯನ್ನು ಕಂಗೆಡಿಸಿ ಎಲ್ಲರ ಗಮನ ಸೆಳೆದ ಕೋಲ್ಕತಾ ಸ್ಪಿನ್ನರ್ ಸುಯಶ್ ಶರ್ಮಾ

7 April 2023 10:31 AM IST
share
ಚೊಚ್ಚಲ ಐಪಿಎಲ್ ಪಂದ್ಯದಲ್ಲೇ ಆರ್ ಸಿಬಿಯನ್ನು ಕಂಗೆಡಿಸಿ ಎಲ್ಲರ ಗಮನ ಸೆಳೆದ ಕೋಲ್ಕತಾ ಸ್ಪಿನ್ನರ್ ಸುಯಶ್ ಶರ್ಮಾ

ಕೋಲ್ಕತಾ: ಕೋಲ್ಕತ್ತಾ ನೈಟ್ ರೈಡರ್ಸ್ ಗುರುವಾರ ರಾತ್ರಿ ನಡೆದ ಐಪಿಎಲ್ 2023 ರ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 81 ರನ್‌ಗಳ ಜಯ  ದಾಖಲಿಸಿದೆ. ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಕೆಕೆಆರ್  ತಂಡ  ಶಾರ್ದೂಲ್ ಠಾಕೂರ್ (68 ರನ್ ) ಹಾಗೂ  ರಿಂಕು ಸಿಂಗ್ (46) ಉತ್ತಮ  ಜೊತೆಯಾಟದ ನೆರವಿನಿಂದ  20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ  204 ರನ್ ಗಳಿಸಿತು.  ನಂತರ, ವರುಣ್ ಚಕ್ರವರ್ತಿ ನಾಲ್ಕು ವಿಕೆಟ್ ಕಬಳಿಸಿ ಆರ್ ಸಿಬಿ ತಂಡವನ್ನು  123 ಕ್ಕೆ ಆಲೌಟ್ ಮಾಡಿದರು.

ಚಕ್ರವರ್ತಿ ಅವರನ್ನು ಹೊರತುಪಡಿಸಿ, ಕೆಕೆಆರ್  ಗೆಲುವಿನಲ್ಲಿ ಪ್ರಮುಖ ಕೊಡುಗೆಯನ್ನು  ನೀಡಿದವರು ಸುಯಶ್ ಶರ್ಮಾ. ತಾನಾಡಿದ ಚೊಚ್ಚಲ ಪಂದ್ಯದಲ್ಲಿಯೇ ಸುಯಶ್  ಅವರು ಮೂರು ವಿಕೆಟ್‌ಗಳನ್ನು ಉರುಳಿಸಿದರು. ಆರ್ ಸಿಬಿಯ  ಬ್ಯಾಟಿಂಗ್  ಸರದಿಯ  ಬೆನ್ನೆಲುಬು ಮುರಿದರು.

ಉಭಯ ತಂಡಗಳ ನಡುವಿನ ಪಂದ್ಯ ಮುಗಿಯುತ್ತಿದ್ದಂತೆ ಕ್ರಿಕೆಟ್ ಅಭಿಮಾನಿಗಳೆಲ್ಲ ಕೆಕೆಆರ್‌ನ 19ರ ಹರೆಯದ ಸ್ಪಿನ್ನರ್ ಬಗ್ಗೆ ತಿಳಿದುಕೊಳ್ಳಲು ಕಾತರರಾಗಿದ್ದರು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಮಿನಿ ಹರಾಜಿನಲ್ಲಿ ದಿಲ್ಲಿಯ ಯುವಕ ಸುಯಶ್ ಶರ್ಮಾ ಅವರನ್ನು 20 ಲಕ್ಷ ರೂ.ಗೆ ಕೆಕೆಆರ್ ಖರೀದಿಸಿತ್ತು., ಸ್ಪಿನ್ನರ್ ಅನ್ನು RCB ವಿರುದ್ಧ ಆಡುವ 11ರ ಬಳಗದಲ್ಲಿ  ಹೆಸರಿಸಲಾಗಿಲ್ಲ. ವೆಂಕಟೇಶ್ ಅಯ್ಯರ್ ಅವರ ಬದಲಿಗೆ ಇಂಪ್ಯಾಕ್ಟ್  ಆಟಗಾರನಾಗಿ ಸುಯಶ್ ರನ್ನು ಕಣಕ್ಕಿಳಿಸಲಾಗಿತ್ತು.

ಸುಯಶ್ ದಿಲ್ಲಿಯ ಅಂಡರ್-20  ತಂಡಕ್ಕಾಗಿ ಆಡುತ್ತಾರೆ. ಆದರೆ ಅವರು ಐಪಿಎಲ್  ಪಂದ್ಯಕ್ಕಿಂತ ಮೊದಲು ಯಾವುದೇ ಲಿಸ್ಟ್ ಎ, ಎಫ್ ಸಿ  ಅಥವಾ ಟಿ-20 ಪಂದ್ಯಗಳನ್ನು ಆಡಿಲ್ಲ.

ಪಂದ್ಯದ ನಂತರ ಸುಯಶ್ ಬಗ್ಗೆ ಮಾತನಾಡಿದ ಕೆಕೆಆರ್ ನಾಯಕ ನಿತೀಶ್ ರಾಣಾ, "ಸುಯಶ್ ಆತ್ಮವಿಶ್ವಾಸದ ಯುವಕ ಹಾಗೂ  ಅವರು ತಮ್ಮ ಮೇಲೆ ನಂಬಿಕೆ ಹೊಂದಿದ್ದಾರೆ. ಅವರು ತಮಗೆ ಲಭಿಸಿದ  ಅವಕಾಶವನ್ನು ಬಳಸಿಕೊಂಡಿದ್ದಾರೆ ಹಾಗೂ ಅವರು ಆ ರೀತಿ ಬೌಲ್ ಮಾಡುವುದನ್ನು ನೋಡುವುದು ಅದ್ಭುತವಾಗಿದೆ" ಎಂದು ಹೇಳಿದರು.

 "ವರುಣ್  ಹಾಗೂ  ಸನ್ನಿ ಕೂಡ ಉತ್ತಮವಾಗಿ ಬೌಲಿಂಗ್ ಮಾಡಿದರು. ಹೊಸ ಬೌಲರ್ ಸುಯಶ್,  ವರುಣ್ ಗೆ ಬೆಂಬಲ ನೀಡಿದರು. ನಾವು ಸುಯಶ್ ರನ್ನು ಟ್ರಯಲ್ ಮ್ಯಾಚ್‌ಗಳಲ್ಲಿ ನೋಡಿದ್ದೇವೆ ಮತ್ತು ಅವರು ಬೌಲಿಂಗ್ ಮಾಡುವ ವಿಧಾನದಿಂದ ತುಂಬಾ ಸಂತೋಷಪಟ್ಟಿದ್ದೇವೆ. ಅವರು ಗಾಳಿಯ ಮೂಲಕ ವೇಗವಾಗಿ, ಎಸೆಯುವ ಚೆಂಡನ್ನು ಎದುರಿಸುವುದು ಕಷ್ಟಕರ. ಅವರು ಅನನುಭವಿ,  ಆದರೆ ಉತ್ತಮ ಬೌಲರ್'' ಎಂದು ಕೆಕೆಆರ್  ಕೋಚ್ ಚಂದ್ರಕಾಂತ್ ಪಂಡಿತ್ ಹೇಳಿದ್ದಾರೆ.

share
Next Story
X