ವಿಟ್ಲ: ಹೊರೈಝನ್ ಪಬ್ಲಿಕ್ ಸ್ಕೂಲ್ ಅರಬಿಕ್ ಪರೀಕ್ಷೆ ಶೇ.100 ಫಲಿತಾಂಶ
ವಿಟ್ಲ,ಎ.7: ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ ಅರಬಿಕ್ ವಿಭಾಗದ ಪಬ್ಲಿಕ್ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶವನ್ನು ಪಡೆದಿದೆ.
ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ಮಾರ್ಚ್ ತಿಂಗಳಲ್ಲಿ 5, 7 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಿತ್ತು. ಇದರಲ್ಲಿ ಹೊರೈಝನ್ ಪಬ್ಲಿಕ್ ಸ್ಕೂಲ್ ಈ ಸಾಧನೆ ಮಾಡಿದೆ.
5ನೇ ತರಗತಿಯಲ್ಲಿ 31 ವಿದ್ಯಾರ್ಥಿಗಳು, 7ನೇ ತರಗತಿಯಲ್ಲಿ 34 ವಿದ್ಯಾರ್ಥಿಗಳು,10 ನೇ ತರಗತಿಯಲ್ಲಿ 15 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕ ಮನಾಝಿರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story