Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಟಿ ನಿಯಮಗಳಿಗೆ ತಿದ್ದುಪಡಿ ತಂದ ಕೇಂದ್ರ:...

ಐಟಿ ನಿಯಮಗಳಿಗೆ ತಿದ್ದುಪಡಿ ತಂದ ಕೇಂದ್ರ: 'ನಕಲಿ', 'ಸುಳ್ಳು' ಸುದ್ದಿಗಾಗಿ ಪರಿಶೀಲಿಸಲಿರುವ ಸರ್ಕಾರದ ಸತ್ಯ ಶೋಧನಾ ಘಟಕ

7 April 2023 3:44 PM IST
share
ಐಟಿ ನಿಯಮಗಳಿಗೆ ತಿದ್ದುಪಡಿ ತಂದ ಕೇಂದ್ರ: ನಕಲಿ, ಸುಳ್ಳು ಸುದ್ದಿಗಾಗಿ ಪರಿಶೀಲಿಸಲಿರುವ ಸರ್ಕಾರದ ಸತ್ಯ ಶೋಧನಾ ಘಟಕ

ಹೊಸದಿಲ್ಲಿ: ಕೇಂದ್ರ ವಿದ್ಯುನ್ಮಾನ ಮತ್ತು ಐಟಿ ಸಚಿವಾಲಯ (Union Ministry of Electronics and IT) ಎಪ್ರಿಲ್‌ 7, ಗುರುವಾರ 2021ರ ಐಟಿ ನಿಯಮಗಳಿಗೆ ತಿದ್ದುಪಡಿಗಳನ್ನು ಘೋಷಿಸಿದೆ. ಇದರ ಭಾಗವಾಗಿ  ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುವ ಮಾಹಿತಿ ವಾಸ್ತವವೋ ಅಥವಾ ನಕಲಿಯೋ ಎಂದು ನಿರ್ಧರಿಸುವ  ಸಂಸ್ಥೆಯೊಂದರನ್ನು ರಚಿಸಲು ಕೇಂದ್ರ ಸರ್ಕಾರಕ್ಕೆ ಅನುವು ಮಾಡಿಕೊಡಲಾಗಿದೆ. ಯಾವುದೇ ಮಾಧ್ಯಮ ಸಂಸ್ಥೆಯು ಆನ್‌ಲೈನ್‌ನಲ್ಲಿ ಪ್ರಕಟಿಸುವ ಸುದ್ದಿ ಹಾಗೂ ವೀಡಿಯೋಗಳನ್ನೂ ಈ ಸಂಸ್ಥೆ ಪರಾಮರ್ಶಿಸಲಿದೆ. ಒಮ್ಮೆ ಸರ್ಕಾರದ ಈ ಸತ್ಯ ಶೋಧನಾ ಸಂಸ್ಥೆಯು ಒಂದು ಸುದ್ದಿ, ಮಾಹಿತಿ ಅತವಾ ವೀಡಿಯೋವನ್ನು ನಕಲಿ, ಸುಳ್ಳು ಅಥವಾ ದಾರಿತಪ್ಪಿಸುವಂತಹದ್ದು ಎಂದು ನಿರ್ಧರಿಸಿದಲ್ಲಿ, ಅವುಗಳನ್ನು ತೆಗೆದುಹಾಕಲು ಸಂಬಂಧಿತ ಜಾಲತಾಣಗಳಿಗೆ ಸರ್ಕಾರ ಸೂಚಿಸಬಹುದಾಗಿದೆ.

ಕೇಂದ್ರ ಸರ್ಕಾರದ ಯಾವುದೇ ವ್ಯವಹಾರಕ್ಕೆ ಸಂಬಂಧಿಸಿದ ನಕಲಿ, ಸುಳ್ಳು ಮಾಹಿತಿ ಶೇರ್‌ ಮಾಡಬಾರದೆಂಬ ನಿಯಮವನ್ನೂ ಸಾಮಾಜಿಕ ಜಾಲತಾಣ ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸಬೇಕಿದೆ.

ಸಂಬಂಧಿತ ಎಲ್ಲರ ಜೊತೆ ಚರ್ಚಿಸಿ ನಕಲಿ ಸುದ್ದಿಗಳನ್ನು ಗುರುತಿಸುವ ಸತ್ಯಶೋಧನಾ ಘಟಕ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ಹೇಳಿದೆ. ಆದರೆ ಈ ತಿದ್ದುಪಡಿಗಳ ಕುರಿತು ಇಂಟರ್ನೆಟ್‌ ಫ್ರೀಡಂ ಫೌಂಡೇಶನ್‌ ಕಳವಳ ವ್ಯಕ್ತಪಡಿಸಿದೆ. ಇದು ಆನ್‌ಲೈನ್‌ ವಾಕ್‌ ಸ್ವಾತಂತ್ರ್ಯ ಹಾಗೂ ಮಾಹಿತಿ ಪಡೆಯುವ ಹಕ್ಕಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಫೌಂಡೇಶನ್‌ ಹೇಳಿದೆ.

ಯಾವುದೇ ವಿಷಯವನ್ನು ನಿರ್ಬಂಧಿಸುವುದಕ್ಕೆ ಕಠಿಣ ಪ್ರಕ್ರಿಯೆಗಳನ್ನು ನಿಗದಿಪಡಿಸಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಈ ತಿದ್ದುಪಡಿ ಉಲ್ಲಂಘಿಸುತ್ತದೆ ಎಂದು ಫೌಂಡೇಶನ್‌ ಹೇಳಿದೆ.

ಐಟಿ ನಿಯಮಗಳಿಗೆ ತಿದ್ದುಪಡಿ ದೇಶದಲ್ಲಿ ಮಾಧ್ಯಮ ಸ್ವಾತಂತ್ರ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಎಡಿಟರ್ಸ್‌ ಗಿಲ್ಡ್‌ ಆಫ್‌ ಇಂಡಿಯಾ ಕೂಡ ಕಳವಳ ವ್ಯಕ್ತಪಡಿಸಿದೆಯಲ್ಲದೆ  ಈ ಅಧಿಸೂಚನೆಯನ್ನು ವಾಪಸ್‌ ಪಡೆಯಬೇಕು ಹಾಗೂ ಮಾಧ್ಯಮ ಸಂಸ್ಥೆಗಳ ಜೊತೆ ಸರ್ಕಾರ ಮಾತುಕತೆ ನಡೆಸಬೇಕು ಎಂದು ಆಗ್ರಹಿಸಿದೆ.

ಇದನ್ನೂ ಓದಿ: ತಂದೆ ಜೊತೆ ಯಾವುದೇ ವೈರತ್ವವಿಲ್ಲ: ಎಕೆ ಆ್ಯಂಟನಿ ಪುತ್ರ ಅನಿಲ್ ಸ್ಪಷ್ಟನೆ

share
Next Story
X