ಪುತ್ತೂರು: ರೈಲ್ವೆ ಹಳಿಯಲ್ಲಿ ಕೆಎಸ್ಸಾರ್ಟಿಸಿ ಉದ್ಯೋಗಿ ಮೃತದೇಹ ಪತ್ತೆ; ಆತ್ಮಹತ್ಯೆ ಶಂಕೆ

ಪುತ್ತೂರು,ಎ.7: ಪುತ್ತೂರು ವಿಭಾಗದ ಕೆಎಸ್ಸಾರ್ಟಿಸಿ ಉದ್ಯೋಗಿಯೋರ್ವನ ಮೃತದೇಹ ಕಾಣಿಯೂರು ರೈಲ್ವೆ ಟ್ರ್ಯಾಕ್ ನಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಈತ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
ನೂತನ ಕಡಬ ತಾಲೂಕಿನ ಬೆಳಂದೂರು ಗ್ರಾಮದ ಅಬೀರ ನಿವಾಸಿ ಕುಸುಮಾಧರ(28) ಮೃತ ಪಟ್ಟ ವ್ಯಕ್ತಿ.
ಕಳೆದ 9 ವರ್ಷಗಳಿಂದ ಕೆಎಸ್ಸಾರ್ಟಿಸಿ ಪುತ್ತೂರು ವಿಭಾಗದಲ್ಲಿ ಚಾಲಕ, ನಿರ್ವಾಹಕರಾಗಿ ಕುಸುಮಾಧರ ಅವರು ಕೆಲಸ ನಿರ್ವಹಿಸುತ್ತಿದ್ದರು. ಕೆಲ ತಿಂಗಳ ಹಿಂದಷ್ಟೇ ವಿವಾಹಿತರಾಗಿದ್ದರು.
ಮೃತರು ಪತ್ನಿ, ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.ರೈಲ್ವೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
Next Story





