Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ| ಪಟ್ರಮೆಯಲ್ಲಿ ಇಬ್ಬರು...

ಬೆಳ್ತಂಗಡಿ| ಪಟ್ರಮೆಯಲ್ಲಿ ಇಬ್ಬರು ಯುವತಿಯರ ಸಾವು: ವಿಷ ಸೇವಿಸಿ ಆತ್ಮಹತ್ಯೆ ಶಂಕೆ

7 April 2023 6:05 PM IST
share
ಬೆಳ್ತಂಗಡಿ| ಪಟ್ರಮೆಯಲ್ಲಿ ಇಬ್ಬರು ಯುವತಿಯರ ಸಾವು: ವಿಷ ಸೇವಿಸಿ ಆತ್ಮಹತ್ಯೆ ಶಂಕೆ

ಬೆಳ್ತಂಗಡಿ: ತೀವ್ರ ಹೊಟ್ಟೆನೋವಿನ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ನೆರೆಮನೆಯ ಇಬ್ಬರು ಯುವತಿಯರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ಪಟ್ರಮೆ ಗ್ರಾಮದಿಂದ ವರದಿಯಾಗಿದೆ. ಈ ನಡುವೆ ಇವರಿಬ್ಬರ ಸಾವಿಗೆ ವಿಷ ಸೇವನೆ ಕಾರಣ ಎನ್ನಲಾಗುತ್ತಿದೆ.

ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಮಂಗಳೂರಿನ  ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಮೃತಪಟ್ಟರೆ, ಅವರ ನೆರೆಮನೆಯವರಾದ ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯಾ (21) ಸುರತ್ಕಲ್ ಆಸ್ಪತ್ರೆಯಲ್ಲಿ ಮಧ್ಯಾಹ್ನ ಮೃತಪಟ್ಟರೆನ್ನಲಾಗಿದೆ. ಇವರಿಬ್ಬರು ಖಾಸಗಿ ಸಂಸ್ಥೆಯೊಂದರಲ್ಲಿ ಕೆಲ ಸಮಯಗಳಿಂದ ಕೆಲಸ ನಿರ್ವಹಿಸುತ್ತಿದ್ದರು.

ಎ.4ರಂದು ಸಂಜೆ ರಕ್ಷಿತಾ ಮತ್ತು ಲಾವಣ್ಯ ತಮ್ಮ ಮನೆಯಲ್ಲಿ ಹೊಟ್ಟೆ ನೋವೆಂದು ನರಳಾಡಿ ತೀವ್ರ ಅಸ್ವಸ್ಥಗೊಂಡಿದ್ದರೆನ್ನಲಾಗಿದೆ. ಮನೆಯವರು ಇವರಿಬ್ಬರನ್ನು ಸ್ಥಳೀಯರ ಸಹಕಾರದಲ್ಲಿ ನೆಲ್ಯಾಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಬಳಿಕ ರಕ್ಷಿತಾರನ್ನು ಅವರ ಮನೆಯವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರೆನ್ನಲಾಗಿದೆ.
ಲಾವಣ್ಯಾರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಯ ವೈದ್ಯರ ಸಲಹೆಯಂತೆ ಸುರತ್ಕಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟರು ಎಂದು ತಿಳಿದು ಬಂದಿದೆ.

ಇವರ ಸಾವಿಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲವಾದರೂ ವಿಷಸೇವನೆಯೇ ಸಾವಿಗೆ ಕಾರಣ ಎನ್ನಲಾಗುತ್ತಿದೆ. ಇಬ್ಬರೂ ಜೊತೆಯಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟಗೊಂಡಿಲ್ಲ. ವೈದ್ಯಕೀಯ ವರದಿಗಳು, ಪೊಲೀಸ್ ತನಿಖೆಯಿಂದ ಮಾಹಿತಿ ತಿಳಿದು ಬರಬೇಕಾಗಿದೆ. 

ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

share
Next Story
X