Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ;...

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ಸಿ-ವಿಜಲ್ ಆ್ಯಪ್‌ನಲ್ಲಿ ದೂರು ಸಲ್ಲಿಸಿದ 100 ನಿಮಿಷಗಳಲ್ಲಿ ಕ್ರಮ : ಬಸವರಾಜ್

7 April 2023 6:56 PM IST
share
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ಸಿ-ವಿಜಲ್ ಆ್ಯಪ್‌ನಲ್ಲಿ ದೂರು ಸಲ್ಲಿಸಿದ 100 ನಿಮಿಷಗಳಲ್ಲಿ ಕ್ರಮ : ಬಸವರಾಜ್

ಮಂಗಳೂರು, ಎ.7: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿ ಭಾರತದ ಚುನಾವಣಾ ಆಯೋಗ(ಇಸಿಐ) ಅಭಿವೃದ್ಧಿ ಪಡಿಸಿದ ಸಿ-ವಿಜಲ್ ಆ್ಯಪ್‌ನ ಮೂಲಕ ದೂರು ಸಲ್ಲಿಸಿದ 100 ನಿಮಿಷಗಳಲ್ಲಿ ದೂರಿನ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಐಟಿ ನೋಡಲ್ ಅಧಿಕಾರಿ ಡಾ. ಬಸವರಾಜ್ ತಲ್ವಾರ್ ಹೇಳಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಿ-ವಿಜಲ್ ಪ್ರಜೆಗಳ ಆ್ಯಪ್‌ನ ಕುರಿತಾಗಿ ನಡೆದ ಪ್ರಾತ್ಯಕ್ಷಿಕೆಯ ಬಳಿಕ ಮಾತನಾಡಿದರು.

ಎಂಸಿಸಿ ಜಾರಿಯಾದ ಬಳಿಕ ಹಣದ ಸಾಗಾಟ, ಫೇಕ್ ನ್ಯೂಸ್, ವಸ್ತು, ಹಣದ ವಿತರಣೆ, ಆಸ್ತಿಗೆ  ಹಾನಿ, ಕೋಮುದ್ವೇಷ ಭಾಷಣ, ಬರಹಗಳ ಕುರಿತು, ಫೇಯ್ಡ್ ನ್ಯೂಸ್, ಉಚಿತವಾಗಿ ವಸ್ತುಗಳನ್ನು ಹಂಚುವುದು, ಬಂದೂಕುಗಳ ಪ್ರದರ್ಶನ, ಮದ್ಯ ಹಂಚುವಿಕೆ  ಇತ್ಯಾದಿ ವಿಚಾರಗಳ ಮೇಲೆ ಸಿ ವಿಜಲ್ ಆ್ಯಪ್‌ನಲ್ಲಿಯೇ ಫೋಟೋ, ವಿಡಿಯೋ ಹಾಗೂ ಆಡಿಯೋಗಳ ಮೂಲಕ ದೂರುಗಳನ್ನು ಸಲ್ಲಿಸಬಹುದು ಎಂದರು.

ದಕ್ಷಿಣ ಕನ್ನಡದಲ್ಲಿ ಇಲ್ಲಿಯ ವರೆಗೆ 54 ದೂರುಗಳಲ್ಲಿ 38 ದೂರುಗಳಿಗೆ ಕ್ರಮ ಜರುಗಿಸಲಾಗಿದೆ. ಇದರಲ್ಲಿ ಉಳಿದ ದೂರುಗಳು ಸರಿ ಇಲ್ಲ.  ಅಪೂರ್ಣ ಮಾಹಿತಿಯ ಅಧಾರದಲ್ಲಿ ರಿಜೆಕ್ಟ್ ಮಾಡಲಾಗಿದೆ. ಸರಿಯಾದ ದೂರುಗಳಿಗೆ ಎಆರ್‌ಒ, ಆರ್‌ಒಗಳ ಮೂಲಕ ಕ್ರಮ ಜರುಗಿಸಲಾಗಿದೆ ಎಂದು ಬಸವರಾಜ್ ಮಾಹಿತಿ ನೀಡಿದರು.

458 ಸಿ-ವಿಜಲ್ ತನಿಖಾಧಿಕಾರಿಗಳು: ಈಗಾಗಲೇ ದಕ್ಷಿಣ ಕನ್ನಡದ  8 ವಿಧಾನ ಸಭಾ ಕ್ಷೇತ್ರಗಳಲ್ಲಿ  335 ತಂಡಗಳನ್ನು ರಚನೆ ಮಾಡಿಕೊಂಡು 458 ಸಿ ವಿಜಲ್ ತನಿಖಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸಿ-ವಿಜಲ್‌ನಲ್ಲಿ ದೂರು ದಾಖಲಿಸಿಕೊಂಡ ಕೂಡಲೇ ಜಿಲ್ಲಾ ನಿಯಂತ್ರಣ ಕೇಂದ್ರ(ಡಿಸಿಸಿ)ಯ ಮೂಲಕ ದೂರುಗಳು ಫೀಲ್ಡ್‌ನಲ್ಲಿರುವ ಅಧಿಕಾರಿಗಳಿಗೆ ಮಾಹಿತಿ ರವಾನೆಯಾಗುತ್ತದೆ. ಈ ಬಳಿಕ ಅವರು ದೂರಿಗೆ ಸಂಬಂಧಿಸಿದಂತಹ ಮಾಹಿತಿ ಸಂಗ್ರಹ ಮಡಿಕೊಂಡು ಆರ್‌ಒಗಳಿಗೆ ಮಾಹಿತಿ ನೀಡುತ್ತಾರೆ ಎಂದು ಬಸವರಾಜ್ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಎನ್‌ಐಟಿಕೆಯ  ಉದ್ಯೋಗಿಗಳಾದ ಡಾ. ಅರವಿಂದ್ ಕೋಳೂರು ಮತ್ತು ಡಾ. ರಾಘವೇಂದ್ರ ಬಿ.ಎಸ್ ಉಪಸ್ಥಿತರಿದ್ದರು.

ಸಿ-ವಿಜಲ್‌ನಲ್ಲಿ ಮಾಯವಾದ ಕನ್ನಡ!

ಕರ್ನಾಟಕ ವಿಧಾನ ಸಭೆಯ ಚುನಾವಣೆಯಲ್ಲಿ ಬಹಳ ಪ್ರಮುಖ ಪಾತ್ರವಹಿಸುವ ಸಿ- ವಿಜಲ್ ಪ್ರಜೆಗಳ ಆ್ಯಪ್‌ನಲ್ಲಿ ಕನ್ನಡ ಭಾಷೆಗೆ ಅವಕಾಶ ಇಲ್ಲದಾಗಿದೆ. ಇಲ್ಲಿ ಮುಖ್ಯವಾಗಿ ದೇಶದ ಇತರ ಆರು ಭಾಷೆಗಳನ್ನು ಮಾತ್ರ ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಇಂಗ್ಲಿಷ್, ಹಿಂದಿ ಪ್ರಮುಖ ಭಾಷೆಗಳ ಜತೆಯಲ್ಲಿ ಇತರ ಐದು ಭಾಷೆಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಕನ್ನಡ ಭಾಷೆಯ ಬಳಕೆ  ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ ಎಂದು ತಿಳಿದು ಬಂದಿದೆ.

share
Next Story
X