ಆರ್ ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಸಂಸದ ಡಿ.ಕೆ.ಸುರೇಶ್ ವಿರುದ್ಧ ಎಫ್‍ಐಆರ್ ದಾಖಲು

ಬೆಂಗಳೂರು, ಎ.7: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತ ರಾಯಪ್ಪ ಹಾಗೂ ಸಂಸದ ಡಿ.ಕೆ.ಸುರೇಶ್ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.
ಅಭ್ಯರ್ಥಿಯಾದ ಕುಸುಮಾ ಅವರ ಪರವಾಗಿ ಮತದಾರರಿಗೆ ಅಡುಗೆ ಮಾಡುವ ವಸ್ತು ಹಂಚಿಕೆ ಮಾಡುತ್ತಿರುವ ಬಗ್ಗೆ ದೂರು ಸಂಬಂಧ ಕಾರ್ಯಾಚರಣೆ ನಡೆಸಿದ ಚುನಾವಣಾ ಆಯೋಗದ ಅಧಿಕಾರಿಗಳು ಕುಸುಮಾ ಹಾಗೂ ಡಿ.ಕೆ.ಸುರೇಶ್ ಭಾವ ಚಿತ್ರಗಳಿರುವ 3 ಕರ್ಟನ್ ಬಾಕ್ಸ್ ಹಾಗೂ 3 ತವಾ ಬಾಕ್ಸ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಬಳಿಕ ಮತದಾರರಿಗೆ ತವಾ ಹಂಚಿಕೆ ಮಾಡಿದ ಆರೋಪದಲ್ಲಿ ಕುಸುಮಾ, ಡಿ.ಕೆ ಸುರೇಶ್ ಹಾಗೂ ಜಗದೀಶ್ ಎಂಬುವವರ ಮೇಲೆ ಎಫ್‍ಐಆರ್ ದಾಖಲಾಗಿದೆ.
Next Story





